ಬೆಂಗಳೂರು: : “ಪೊಲಿಟಿಕಲ್ ಜಡ್ಜ್‌ಮೆಂಟ್” ಹೇಳಿಕೆ, ಕ್ಷಮೆ ಕೇಳಿದ ಸಚಿವ ಜಮೀರ್: ಹೈಕೋರ್ಟ್ ತೀರ್ಪನ್ನು ಪೊಲಿಟಿಕಲ್ ಜಡ್ಜ್‌ಮೆಂಟ್ ಎಂದಿದ್ದಕ್ಕೆ ಭಾರೀ ಟೀಕೆ ವ್ಯಕ್ತವಾದ ಬೆನ್ನಲ್ಲೇ ಇಂದು ತುರ್ತು ಸುದ್ದಿಗೋಷ್ಠಿ ಕರೆದು ಜಮೀರ್ ಅಹಮದ್ ಕ್ಷಮೆ ಕೇಳಿದ್ದಾರೆ. ಬಾಯಿ ತಪ್ಪಿನಿಂದ ನಾನು ಒಂದು ಪದ ಬಳಸಿದ್ದೆ ಎಂದು ಅಲ್ಪಸಂಖ್ಯಾತ ಕಲ್ಯಾಣ ಖಾತೆಯ ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ನಿನ್ನೆ ಹೇಳಿಕೆ ನೀಡುವಾಗ ಒಂದು ಪದ ಬಳಸಿದೆ. ರಾಜಕೀಯ ಮಾಡುತ್ತಾರೆ ಅಂತ ಹೇಳುವ ಬದಲು ಪೊಲಿಟಿಕಲ್ ಜಡ್ಜ್ ಮೆಂಟ್ ಅಂತ ಹೇಳಿದ್ದೆ. ನಾನು ರಾಜಕೀಯ ಲಾಭ ಪಡೆಯುತ್ತಿದ್ದಾರೆ ಅಂತ ಹೇಳೋಕೆ ಹೋಗಿದ್ದೆ. ನ್ಯಾಯಾಲಯದ ಬಗ್ಗೆ ನನಗೆ ಗೌರವ ಇದೆ. ತಪ್ಪಾಗಿದ್ದರೆ ನಾನು ಕ್ಷಮೆ ಕೇಳುತ್ತೇನೆ ಎಂದು ಹೇಳಿದರು.
ಬುಧವಾರ ಮಧ್ಯಮಗಳ ಜೊತೆ ಮಾತನಾಡಿದ್ದ ಜಮೀರ್, ನಾನು ಬಿಡಿಸಿ ಹೇಳುವಂತಿಲ್ಲ. ನಿನ್ನೆ ಬಂದಿರುವುದು ಎಲ್ಲೋ ಒಂದು ಕಡೆ ಪೊಲಿಟಿಕಲ್ ಜಡ್ಜ್‌ಮೆಂಟ್ . ಇದು ನನ್ನ ವೈಯಕ್ತಿಕ ಅಭಿಪ್ರಾಯ. ತನಿಖೆ ನಡೆದರೆ ಸತ್ಯಾಂಶ ಆಚೆ ಬರುತ್ತೆ ತಾನೆ? ಈ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ ಎಂದು ನಾಲಿಗೆ ಹರಿಬಿಟ್ಟಿದ್ದರು.

