ಮಂಡ್ಯ: ಪ್ರಜ್ವಲ್ ಪೆನ್‌ಡ್ರೈವ್ (Prajwal Revanna) ಪ್ರಕರಣ ಕುರಿತು ಮಾತನಾಡಿ ಈವರೆಗೂ ಪ್ರಜ್ವಲ್ ನನ್ನ ಸಂಪರ್ಕಕ್ಕೆ ಬಂದಿಲ್ಲ ಎಂದು ಜೆಡಿಎಸ್ ಯುವನಾಯಕ ನಿಖಲ್ ಕುಮಾರಸ್ವಾಮಿ (NIkhil Kumaraswamy) ಹೇಳಿದ್ದಾರೆ.
ಪ್ರಜ್ವಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಮಾತನಾಡಿರುವ ಅವರು, ಈ ಪ್ರಕರಣವನ್ನು ಸಿಬಿಐಗೆ ಕೊಟ್ಟು ರಾಜ್ಯ ಸರ್ಕಾರ ಕೂಲಂಕಷವಾಗಿ ತನಿಖೆ ಮಾಡಲಿ ಎಂದು ಹೇಳಿದ್ದಾರೆ. ಈವರೆಗೂ ಪ್ರಜ್ವಲ್ ಅವರ ಸಂಪರ್ಕಕ್ಕೆ ಬಂದಿಲ್ಲ ಎಂದರು. ಇದನ್ನೂ ಓದಿ: ಪ್ರಜ್ವಲ್ ಪೆನ್‌ಡ್ರೈವ್ ಕೇಸ್; ಕಾರ್ತಿಕ್, ದೇವರಾಜೇಗೌಡಗೆ SIT ನೋಟಿಸ್
ಪೆನ್‌ಡ್ರೈವ್ ವಿಚಾರವಾಗಿ ರಾಜ್ಯ ಸರ್ಕಾರ ಎಸ್‌ಐಟಿ ರಚನೆ ಮಾಡಿದೆ. ಅದನ್ನು ನಾವು ಸ್ವಾಗತ ಮಾಡ್ತೀವಿ. ಆರೋಪ ಬಂದಾಗ ನಾವು ತಪ್ಪಿಸಿಕೊಳ್ಳುವ ಪ್ರಶ್ನೆ ಇಲ್ಲ. ಈಗಾಗಲೇ ಈ ಸಂಬಂಧ ತನಿಖೆ ನಡೆಯಿತ್ತಿದೆ. ತನಿಖೆ ಪಾರದರ್ಶಕವಾಗಿ ತನಿಖೆ ನಡೆಯುತ್ತಿದ್ಯಾ? ಎಂಬ ಪ್ರಶ್ನೆ ಇದೆ ಎಂದರು. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: 2 ವರ್ಷಗಳ ಬಳಿಕ NIA ಬಲೆಗೆ ಬಿದ್ದ ಪ್ರಮುಖ ಆರೋಪಿ
ಈ ಬಗ್ಗೆ ನಾವು ಈಗಾಗಲೇ ನಾವು ಸಭೆ ನಡೆಸಿದ್ದೇವೆ. ವಿಡಿಯೋ ಮಾಡಿರೋದು ವಿಡಿಯೋ ಬಿಟ್ಟಿರೋದು ಎರಡು ತಪ್ಪು. ಹೆಣ್ಣು ಮಕ್ಕಳ ರಕ್ಷಣೆ ಮಾಡಬೇಕಾದ ಸರ್ಕಾರ ಅವರನ್ನು ಬೀದಿಗೆ ತಂದಿದೆ. ಪೆನ್‌ಡ್ರೈವ್ ಹಂಚಿರೋದು ಯಾರು ಎಂದು ಪತ್ತೆ ಹಚ್ಚಬೇಕು. ಹೆಣ್ಣು ಮಕ್ಕಳನ್ನು ಬ್ಲರ್ ಮಾಡದೇ ವೀಡಿಯೋ ಹರಿ ಬಿಟ್ಟಿದ್ದಾರೆ. ಹೆಣ್ಣು ಮಕ್ಕಳ ಮರ್ಯಾದೆ ಏನ್ ಆಗುತ್ತೆ? ಅವರ ಕುಟುಂಬದ ಗತಿ ಏನು? ಹೆಣ್ಣು ಮಕ್ಕಳ ಜೀವಕ್ಕೆ ಅಪಾಯ ಬಂದರೆ ಯಾರು ಜವಾಬ್ದಾರಿ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಚೂರರಲ್ಲಿ ತಪ್ಪಿದ ಭಾರಿ ಅನಾಹುತ; ಚೂರು ಯಾಮಾರಿದ್ರು ಹೋಗ್ತಿದ್ವು ನಾಲ್ಕು ಅಮಾಯಕ ಪ್ರಾಣಗಳು