ದೆಹಲಿ: ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramamiah) ಅವರಿಗೆ ಕ್ರಮ ತೆಗೆದುಕೊಳ್ಳುವಂತೆ ಪತ್ರ (letter) ಬರೆದಿದ್ದಾರೆ.
ಸಂತ್ರಸ್ತರಿಗೆ ರಕ್ಷಣೆ ಕೊಡಬೇಕು ಈ ಪ್ರಕರಣದದಲ್ಲಿ ಯಾರೇ ಆರೋಪಿಗಳಿದ್ದರು ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ. ಸಹೋದರ, ಮಗನಂತೆ ನೋಡಿಕೊಳ್ಳುತ್ತಿದ್ದ ಮಹಿಳೆಯರನ್ನು ಪ್ರಜ್ವಲ್ ರೇವಣ್ಣ ಕ್ರೂರವಾಗಿ ನಡೆಸಿಕೊಂಡಿದ್ದಾರೆ ಎಂದು ಕಿಡಿಕರಿದ್ದಾರೆ. ಇದನ್ನೂ ಓದಿ: ವೇದಿಕೆಯ ಮೇಲೆಯೇ ಪಾತ್ರ ಮಾಡುತ್ತಾ ಕುಸಿದು ಬಿದ್ದು ಸಾವು
ಪತ್ರದಲ್ಲೇನಿದೆ?ರಾಹುಲ್ ಗಾಂಧಿ ಅವರು, ಈ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ಅವರಿಗೆ ದೇವರಾಜೇಗೌಡ ಮಾಹಿತಿ ನೀಡಿದ್ದರು. ಆದರೂ ಅವರಿಗೆ ಟಿಕೆಟ್ ನೀಡಿರುವುದು ಆಘಾತದ ವಿಷಯವಾಗಿದೆ. ಈ ಪ್ರಕರಣದ ಬಗ್ಗೆ ಪ್ರಧಾನಿ ಮೋದಿ ಅವರ ಗಮನಕ್ಕೆ ತಂದರೂ ಅವರ ಪರವಾಗಿ ಪ್ರಚಾರ ಮಾಡಿದ್ದು ಮತ್ತೊಂದು ಶಾಕ್ ನನಗೆ ಎಂದು ಹೇಳಿ ಪ್ರಧಾನಿ ಮೋದಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಬ್ಲೂ ಫಿಲ್ಮ್ ಮಾಡುವವರ ಬಳಿಯೂ ಇಷ್ಟು ವಿಡಿಯೋ ಇರಲ್ಲ: ಶಿವರಾಮೇಗೌಡ
ಪ್ರಜ್ವಲ್ಗೆ ಭಾರತದಿಂದ ಪರಾರಿಯಾಗಲು ಉದ್ದೇಶಪೂರ್ವಕವಾಗಿ ಕೇಂದ್ರ ಸರ್ಕಾರ ಅನುವು ಮಾಡಿಕೊಟ್ಟಿದೆ. ಪ್ರಧಾನಿ ಮೋದಿ ಅವರು ಹರಿಯಾಣ ಕುಸ್ತಿಪಟುಗಳು, ಮಣಿಪುರದ ಘಟನೆಗಳಲ್ಲಿ ಮೌನ ವಹಿಸಿದ್ದಾರೆ. ತಾಯಿಂದಿರ, ಸಹೋದರಿಯರ ಪರವಾಗಿ ಹೋರಾಡುವ ನೈತಿಕ ಕರ್ತವ್ಯ ಕಾಂಗ್ರೆಸ್ ಪಕ್ಷದ್ದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದಲ್ಲಿ ಹಿಂದೂ ಯುವತಿಯರು ಮನೆಯಿಂದ ಹೊರಬರುವುದೇ ಕಷ್ಟವಾಗಿದೆ: ಕೈ ವಿರುದ್ಧ ಕಮಲ ಆಕ್ರೋಶ
ಇನ್ನು ಕರ್ನಾಟಕ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ. ರಾಜತಾಂತ್ರಿಕ ಪಾಸ್ ಪೋರ್ಟ್ ರದ್ದು ಮಾಡಿ ಭಾರತಕ್ಕೆ ಕರೆ ತರುವ ಮನವಿ ಮಾಡಲಾಗಿದೆ. ಸಂತ್ರಸ್ತರಿಗೆ ರಕ್ಷಣೆ ನೀಡಬೇಕಾಗಿದೆ ಎಂದು ರಾಹುಲ್ ಗಾಂಧಿ ಸಿಎಂ ಸಿದ್ದರಾಮಯ್ಯ ಅವರಿಗೆ ಒತ್ತಾಯ ಮಾಡಿ ಪತ್ರದಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ವೇದಿಕೆಯ ಮೇಲೆಯೇ ಪಾತ್ರ ಮಾಡುತ್ತಾ ಕುಸಿದು ಬಿದ್ದು ಸಾವು