ನವದೆಹಲಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪೈನ್ಡ್ರೈವ್ ಪ್ರಕರಣದ ತನಿಖೆಯನ್ನು ಎಸ್ಐಟಿ (SIT) ನಡೆಸಿದ್ದು, ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ. ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆ (National Womens Comission) ದೂರು ನೀಡಿರುವುದಾಗಿ NCW ಪತ್ರಿಕಾ ಪ್ರಕಟಣೆಯಲ್ಲಿ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದೆ.
ರಾಜ್ಯ ಮಹಿಳಾ ಆಯೋಗ ಮನವಿ ಮೇರೆಗ ರಾಜ್ಯ ಸರ್ಕಾರ, ಹಾಸನ ಪೆನ್ಡ್ರೈವ್ ಪ್ರಕರಣವನ್ನು ಎಸ್ಐಟಿಗೆ ವಹಿಸಿದ್ದು, ಈಗಾಗಲೇ ಎಸ್ಐಟಿ ತನಿಖೆ ನಡೆಸಿದ್ದು ಮಹತ್ವದ ದಾಖಲೆಗಳನ್ನು ಕಲೆಹಾಕಿದೆ. ಇದರ ಮಧ್ಯೆ ಕೊನೆಗೂ ರಾಷ್ಟ್ರೀಯ ಮಹಿಳಾ ಆಯೋಗ ಪ್ರತಿಕ್ರಿಯಿಸಿದ್ದು, ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ ತನಿಖೆ ಮಾಡಲಾಗುತ್ತಿದೆ. ಇದಕ್ಕೆಂದು ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದ್ದು, ಸಂತ್ರಸ್ತೆಗೆ ಪ್ರಜ್ವಲ್ ವಿರುದ್ಧ ದೂರು ನೀಡುವಂತೆ ಬೆದರಿಕೆ ಹೊಡಿದ್ದರು ಎಂದು ಪತ್ರಿಕಾ ಪ್ರಕಟಣೆಯಲ್ಲಿ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದೆ.
ಪೊಲೀಸರೆಂ-ದು ಹೇಳಿಕೊಂಡು ಬಂದಿರುವ ಮೂವರು ಸಂತ್ರಸ್ತೆಗೆ ಬೆದರಿಕೆ ಹಾಕಿರುವ ಆರೋಪವೊಂದು ಕೇಳಿಬಂದಿದೆ. ಈ ಸಂಬಂಧ ಇಂದು ರಾಷ್ಟ್ರೀಯ ಮಹಿಳಾ ಆಯೋಗ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದು, ಇದರಲ್ಲಿ ಬೆದರಿಕೆ ಹಾಕಿರುವ ಬಗ್ಗೆ ಸಂತ್ರಸ್ತೆ ಆಯೋಗಕ್ಕೆ ದೂರು ನೀಡಿದ್ದಾರೆ ಎಂದು ತಿಳಿಸಲಾಗಿದೆ. ಇದನ್ನೂ ಓದಿ: ಮುಸ್ಲಿಮರ ಸಂಖ್ಯೆಯಲ್ಲಿ ಏರಿಕೆ , ಹಿಂದೂಗಳ ಸಂಖ್ಯೆಯಲ್ಲಿ ಕುಸಿತ
ಮಹಿಳಾ ಆಯೋಗದ ಪ್ರಕಟಣೆಯಲ್ಲೇನಿದೆ?
ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ ತನಿಖೆ ಮಾಡಲಾಗುತ್ತಿದೆ. ಇದಕ್ಕೆ ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದೆ. ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ. ಈ ಬಗ್ಗೆ ರಾಷ್ಟ್ರೀಯ ಮಹಿಳಾ ಆಯೋಗಕ್ಕೆ ಸಂತ್ರಸ್ತೆ ದೂರು ನೀಡಿದ್ದಾರೆ. ಸಿವಿಲ್ ಡ್ರೆನಲ್ಲಿ ಬಂದಿದ್ದ ಮೂವರು ಬೆದರಿಕೆ ಹಾಕಿದ್ದಾರೆ. ಪೊಲೀಸರು ಎಂದು ಹೇಳಿಕೊಂಡು ಬಂದ ಮೂವರು, ಪ್ರಜ್ವಲ್ ವಿರುದ್ಧ ಸುಳ್ಳು ದೂರು ಕೊಡುವಂತೆ ಒತ್ತಡ ಹೇರಿದ್ದಾರೆ. ಬೇರೆ, ಬೇರೆ ಫೋನ್ ನಂಬರ್ಗಳಿಂದ ನಿರಂತರ ಕರೆ ಮಾಡಲಾಗಿದೆ. ಅಲ್ಲದೇ ದೂರವಾಣಿ ಮೂಲಕವು ಸಹ ಒತ್ತಡ ಹಾಕಲಾಗಿದೆ ಎಂದು ಸಂತ್ರಸ್ತೆ ದೂರಿರುವುದಾಗಿ ರಾಷ್ಟ್ರೀಯ ಮಹಿಳಾ ಆಯೋಗ ತಿಳಿಸಿದೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ವಾಪಸ್ ಬರೋದಕ್ಕೆ ಟೈಮ್ ಫಿಕ್ಸ್ -ಎರಡು ಬಾರಿ ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿರುವ ಸಂಸದ
ಒಂದೆಡೆ ಪ್ರಜ್ವಲ್ ರೇವಣ್ಣ ಕೇಸ್ ಸಂಬಂಧ ತನಿಖೆ ಮಾಡಲಾಗುತ್ತಿದೆ. ಇದಕ್ಕೆ ವಿಶೇಷ ತನಿಖೆ ತಂಡವನ್ನು ಕೂಡ ರಚನೆ ಮಾಡಲಾಗಿದೆ. ಆದರೆ ಇತ್ತ ಪ್ರಜ್ವಲ್ ವಿರುದ್ಧ ಸುಳ್ಳು ದೂರು ನೀಡಲು ಮಹಿಳೆ ಮೇಲೆ ಒತ್ತಡ ಹಾಕಲಾಗಿದೆ ಎನ್ನುವ ಮೂಲಕ ಆಯೋಗ ಸ್ಫೋಟಕ ತಿರುವು ಕೊಟ್ಟಿದ್ದು, ಮುಂದೆ ಈ ಪ್ರಕರಣ ಯಾವ ಹಂತಕ್ಕೆ ಹೋಗಲಿದೆ ಎನ್ನುವುದು ಕತುಹೂಲ ಮೂಡಿಸಿದೆ. ಇದನ್ನೂ ಓದಿ: ಗೋಕರ್ಣದ ಮಹಾಬಲೇಶ್ವರ ದೇವಸ್ಥಾನದಲ್ಲಿ ತೀರ್ಥ ನೀಡುವ ಹಕ್ಕಿಗಾಗಿ ಅರ್ಚಕರ ನಡುವೆ ಗಲಾಟೆ