ಹಾಸನ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರದ್ದು ಎನ್ನಲಾದ ಪೆನ್ಡ್ರೈವ್ ಕೇಸ್ ದಿನೇ ದಿನೇ ಹೊಸ ತಿರುವು ಪಡೆಯುತ್ತಿದ್ದು, ಪೆನ್ಡ್ರೈವ್ ಹಂಚಿದ ಆರೋಪದ ಮೇಲೆ ನವೀನ್ ಗೌಡ (Naveen Gowda) ಎಂಬಾತನಿಗೆ ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ನೋಟಿಸ್ ಕೊಟ್ಟಿದ್ದಾರೆ.
ಪೆನ್ ಡ್ರೈವ್ ಹಂಚಿಕೆ ಮಾಡಿರುವ ಆರೋಪದ ಮೇಲೆ ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ ನವೀನ್ ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ನವೀನ್ ಗೌಡನನ್ನ SIT ವಿಚಾರಣೆಗೆ ಕರೆದಿದೆ. ಇದನ್ನೂ ಓದಿ: ಬಿಸಿಲಿಗೆ ಬೇಯುತ್ತಿರುವ ಬೆಂಗಳೂರು ಮಂದಿ
ಮೇ.4 ರಂದು ವಿಚಾರಣೆಗೆ ಹಾಜರಾಗಲು ನೋಟೀಸ್ ನೀಡಲಾಗಿದೆ. ಜೊತೆಗೆ ಖುದ್ದುSIT ಮುಖ್ಯಸ್ಥ ಬಿ.ಕೆ.ಸಿಂಗ್ ಕರೆ ಮಾಡಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ಕೂಡ ಕೊಟ್ಟಿದ್ದಾರೆ. ಈಗಾಗಲೇ ನವೀನ್ ಗೌಡ ಫೋನಲ್ಲಿ ಪ್ರಾಥಮಿಕ ಮಾಹಿತಿ ನೀಡಿದ್ದು, ಈ ವೇಳೆ ನಾನು ಪೆನ್ಡ್ರೈವ್ ಹಂಚಿಕೆ ಮಾಡಿಲ್ಲ ಎಂದು ಹೇಳಿದ್ದಾನೆ.ಇದನ್ನೂ ಓದಿ: ಸ್ಮಾರ್ಟ್ ಸಿಟಿಲ್ಲಿ ಸ್ಮಾಟ್ ಆದ ನಮ್ಮ ಮೆಟ್ರೋ
ಇತ್ತ ಎ1 ಆರೋಪಿ ರೇವಣ್ಣ ಹಾಗೂ ಎ2 ಆರೋಪಿ ಪ್ರಜ್ವಲ್ ರೇವಣ್ಣಗೂ ತಕ್ಷಣವೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿತ್ತು. ಈ ವೇಳೆ ರೇವಣ್ಣ ಅವರು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದರು. ಇತ್ತ ಪ್ರಜ್ವಲ್ ರೇವಣ್ಣ ಅವರು ಸಮಯಾವಕಾಶ ಕೇಳಿ ತಮ್ಮ ವಕೀಲರ ಮೂಲಕ SIT ಅಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಒಂದು ವಾರ ಸಮಯ ಕೊಡಿ SIT ಮುಂದೆ ಹಾಜರಾಗುತ್ತೇನೆ. ಇದನ್ನೂ ಓದಿ: ಪ್ರಜ್ವಲ್ ಪೆನ್ಡ್ರೈವ್ ಕೇಸ್; ಕೇಳಿದಂತೆ ಸಮಯ ಕೊಡಲು ಆಗುವುದಿಲ್ಲ: ಜಿ ಪರಮೇಶ್ವರ್
ಈ ನಡುವೆ SIT ಅಧಿಕಾರಿಗಳು ಪ್ರಜ್ವಲ್ ವಿರುದ್ಧ ಲುಕೌಟ್ ನೋಟಿಸ್ ಜಾರಿ ಮಾಡಲಾಗಿದೆ. ಜಗತ್ತಿನ ಎಲ್ಲಾ ವಿಮಾನ ನಿಲ್ದಾಣಗಳಿಗೂ ನೋಟಿಸ್ ರವಾನಿಸಲಾಗಿದ್ದು, ಯಾವುದೇ ಕ್ಷಣದಲ್ಲಿ ಪ್ರಜ್ವಲ್ ರೇವಣ್ಣ ಬಂಧನವಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಇದನ್ನೂ ಓದಿ: ಹಾಸ್ಟೆಲ್ನಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ