By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಕಂಟೇನರ್ ಲಾರಿ ಡಿಕ್ಕಿ ಹೊಡೆದು ಹೊತ್ತಿ ಉರಿದ ಖಾಸಗಿ ಬಸ್‌, 9ಕ್ಕೂ ಹೆಚ್ಚು ಮಂದಿ ಸಜೀವ ದಹನ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಕಂಟೇನರ್ ಲಾರಿ ಡಿಕ್ಕಿ ಹೊಡೆದು ಹೊತ್ತಿ ಉರಿದ ಖಾಸಗಿ ಬಸ್‌, 9ಕ್ಕೂ ಹೆಚ್ಚು ಮಂದಿ ಸಜೀವ ದಹನ

ರಾಜ್ಯ-KarnatakaLatest

ಕಂಟೇನರ್ ಲಾರಿ ಡಿಕ್ಕಿ ಹೊಡೆದು ಹೊತ್ತಿ ಉರಿದ ಖಾಸಗಿ ಬಸ್‌, 9ಕ್ಕೂ ಹೆಚ್ಚು ಮಂದಿ ಸಜೀವ ದಹನ

Private bus catches fire after being hit by container lorry, more than 9 people burnt alive

Published December 25, 2025
Share
3 Min Read
Bus Fire Accident Bus Fire Accident Bus Fire Accident
SHARE

ಚಿತ್ರದುರ್ಗ, ಡಿಸೆಂಬರ್ 25: ಖಾಸಗಿ ಸ್ಲೀಪರ್ ಕೋಚ್ ಬಸ್‌ಗೆ ಕಂಟೇನರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಎರಡೂ ವಾಹನಗಳು ಬೆಂಕಿಗಾಹುತಿಯಾಗಿದ್ದು, 9ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ. ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬುಧವಾರ ತಡರಾತ್ರಿ ಈ ಭೀಕರ ದುರಂತ ಸಂಭವಿಸಿದೆ.

ಬೆಂಗಳೂರಿನಿಂದ ಶಿವಮೊಗ್ಗದ ಮೂಲಕ ಗೋಕರ್ಣಕ್ಕೆ ತೆರಳುತ್ತಿದ್ದ ಖಾಸಗಿ ಟ್ರಾವೆಲ್ ಬಸ್‌ಗೆ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಕಂಟೇನರ್ ಲಾರಿ ಡಿವೈಡರ್ ದಾಟಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ ಹಾಗೂ ಲಾರಿ ಎರಡೂ ಹೊತ್ತಿ ಉರಿದಿದ್ದು, ಬಸ್ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.

ದುರಂತದಲ್ಲಿ ಕನಿಷ್ಠ 9 ಮಂದಿ ಪ್ರಯಾಣಿಕರು ಸಾವನ್ನಪ್ಪಿರುವುದು ದೃಢಪಟ್ಟಿದ್ದು, ಲಾರಿ ಚಾಲಕನೂ ಸಜೀವ ದಹನವಾಗಿದ್ದಾನೆ. ಬಸ್‌ನಲ್ಲಿ ಒಟ್ಟು 32 ಸೀಟ್‌ಗಳಿದ್ದು, 29 ಮಂದಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಗಾಯಗೊಂಡ ಪ್ರಯಾಣಿಕರನ್ನು ಹಿರಿಯೂರು ಹಾಗೂ ಶಿರಾ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಗಂಭೀರ ಗಾಯಾಳುಗಳನ್ನು ಅಂಬುಲೆನ್ಸ್ ಮೂಲಕ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಶಂಕಿಸಲಾಗಿದ್ದು, ಲಾರಿ ಹಿರಿಯೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು ಎನ್ನಲಾಗಿದೆ. ಬಸ್‌ನಲ್ಲಿ 15 ಮಹಿಳೆಯರು ಹಾಗೂ 14 ಪುರುಷರು ಪ್ರಯಾಣಿಸುತ್ತಿದ್ದರು ಎಂದು ಮೂಲಗಳು ತಿಳಿಸಿವೆ.

#BusAccident

More than 10 people burnt alive when a truck hit a private #sleeper bus resulting in both bus and truck catching fire at Gorlattu in #Hiriyur of #Chitradurga district in early hours of Thursday. The bus was on its way to #Gokarna from #Bangalore.@XpressBengaluru pic.twitter.com/l1cEexDktU

— Subash_TNIE (@S27chandr1_TNIE) December 25, 2025

ಘಟನೆಯಲ್ಲಿ ಬಸ್ ಚಾಲಕ, ನಿರ್ವಾಹಕ ಹಾಗೂ ಕೆಲ ಪ್ರಯಾಣಿಕರು ಸಮಯಕ್ಕೆ ಸರಿಯಾಗಿ ಬಸ್‌ನಿಂದ ಹೊರ ಜಿಗಿದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಂಟೇನರ್ ಲಾರಿ ಚಾಲಕ ಕುಲದೀಪ್ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಅಪಘಾತದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸುಮಾರು 30 ಕಿಲೋಮೀಟರ್‌ ದೂರದವರೆಗೆ ಭಾರೀ ಟ್ರಾಫಿಕ್ ಜಾಮ್ ಉಂಟಾಗಿದ್ದು, ಶಿರಾವರೆಗೂ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.

More than 10 killed as sleeper bus collides with truck, catches fire in Chitradurga

More than 10 people were charred to death after a private bus caught fire following a collision with a lorry near the Gorlathu village in Karnataka's Chitradurga district on Thursday morning.… pic.twitter.com/dT9ERbP9NK

— Karnataka Portfolio (@karnatakaportf) December 25, 2025

ಘಟನೆ ಕುರಿತು ಐಜಿಪಿ ರವಿಕಾಂತೇಗೌಡ ಪ್ರತಿಕ್ರಿಯೆ ನೀಡಿದ್ದು, “ಬಸ್‌ನಿಂದ 7 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಲಾರಿ ಚಾಲಕ ಸೇರಿ ಸದ್ಯದ ಮಾಹಿತಿ ಪ್ರಕಾರ 9 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಡಿಎನ್‌ಎ ಮತ್ತು ಸುಕೋ ತಂಡಗಳು ಸ್ಥಳಕ್ಕೆ ಆಗಮಿಸಿವೆ” ಎಂದು ತಿಳಿಸಿದ್ದಾರೆ.

ಸೀಬರ್ಡ್ ಬಸ್‌ನಲ್ಲಿದ್ದ 21 ಮಂದಿ ಪತ್ತೆಯಾಗಿದ್ದು, ಇನ್ನೂ 11 ಮಂದಿ ಪತ್ತೆಯಾಗಿಲ್ಲ. ಪತ್ತೆಯಾದವರಲ್ಲಿ ಆರು ಮಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗಳಿಗೆ ಶಿಫ್ಟ್ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮೃತರ ಕುಟುಂಬಗಳಿಗೆ ₹2 ಲಕ್ಷ ಪರಿಹಾರ ಘೋಷಣೆ ಮಾಡಿದ ಪ್ರಧಾನಿ

ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ (PMNRF)ಯಿಂದ ತಲಾ ₹2 ಲಕ್ಷ ತಾತ್ಕಾಲಿಕ ಪರಿಹಾರ ನೀಡಲಾಗುವುದು. ಗಾಯಗೊಂಡವರಿಗೆ ₹50,000 ನೆರವು ನೀಡಲಾಗುವುದು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ ಪ್ರಧಾನಿ, “ಕರ್ನಾಟಕದ ಚಿತ್ರದುರ್ಗ ಜಿಲ್ಲೆಯಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವಹಾನಿಯಾದ ಸುದ್ದಿ ತಿಳಿದು ತೀವ್ರ ದುಃಖವಾಗಿದೆ. ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಸಂತಾಪಗಳು. ಗಾಯಾಳುಗಳು ಶೀಘ್ರ ಚೇತರಿಸಿಕೊಳ್ಳಲಿ” ಎಂದು ಹೇಳಿದ್ದಾರೆ.

ಇದೇ ವೇಳೆ, ಚಿತ್ರದುರ್ಗದ ಹಿರಿಯೂರು ಸಮೀಪ ಲಾರಿ ಹಾಗೂ ಖಾಸಗಿ ಬಸ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಹಲವರು ಸಜೀವ ದಹನಗೊಂಡಿರುವ ಘಟನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. “ಕ್ರಿಸ್ಮಸ್ ರಜೆಯ ಹಿನ್ನೆಲೆಯಲ್ಲಿ ಊರಿಗೆ ತೆರಳುತ್ತಿದ್ದವರ ಪ್ರಯಾಣ ಈ ರೀತಿ ದುರಂತದಲ್ಲಿ ಅಂತ್ಯಗೊಂಡಿರುವುದು ಅತ್ಯಂತ ವಿಷಾದನೀಯ. ಅಪಘಾತದ ಕುರಿತು ಸಮಗ್ರ ತನಿಖೆ ನಡೆಸಿ ಕಾರಣ ಪತ್ತೆಹಚ್ಚಲಾಗುವುದು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ. ದುಃಖಿತ ಕುಟುಂಬಗಳ ನೋವಿನಲ್ಲಿ ನಾನೂ ಭಾಗಿ” ಎಂದು ತಿಳಿಸಿದ್ದಾರೆ.

ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ಹಾಗೂ ಟ್ರಕ್ ನಡುವೆ ಹಿರಿಯೂರು ಬಳಿ ಸಂಭವಿಸಿದ ಅಪಘಾತದಲ್ಲಿ ಹಲವರು ಸಜೀವ ದಹನಗೊಂಡಿರುವ ಸುದ್ದಿ ರಾಜ್ಯಾದ್ಯಂತ ಆಘಾತ ಮೂಡಿಸಿದೆ. ಮೃತಪಟ್ಟವರಿಗೆ ಹಲವು ಗಣ್ಯರು ಸಂತಾಪ ಸೂಚಿಸಿದ್ದು, ಗಾಯಾಳುಗಳು ಶೀಘ್ರ ಗುಣಮುಖರಾಗಲೆಂದು ಹಾರೈಸಿದ್ದಾರೆ.

You Might Also Like

ಚಿತ್ರಮಂದಿರ, ಮಲ್ಟಿಪ್ಲೆಕ್ಸ್‌ ಗಳಲ್ಲಿ ಗರಿಷ್ಠ ಟಿಕೆಟ್ ದರ 200 ರೂ.ನಿಗದಿಪಡಿಸಿ ರಾಜ್ಯ ಸರಕಾರ ಆದೇಶ

ಆಪರೇಷನ್ ಮಹಾದೇವ್ : ಪಹಲ್ಗಾಮ್ ನರಮೇಧ ನಡೆಸಿದ್ದ ಮೂವರು ಉಗ್ರರ ಹತ್ಯೆ ಮಾಡಿದ ಸೇನೆ

ಸರಳವಾಗಿ ಬಾಬು ಜಗಜೀವನ್ ರಾಮ್ ರವರ ಜನ್ಮ ಜಯಂತಿ ಆಚರಣೆ

ಬಿಸಿಲಿನ ಬೇಗೆಗೆ ಬೆಂದು ಹೋಗುತ್ತಿರುವ ರಾಜ್ಯದ ಜನರು

25 ವರ್ಷಗಳ ನಂತರ ಶಿವಸೇನೆ ಕೈತಪ್ಪಿದ ಮುಂಬೈ ಮೇಯರ್ ಪಟ್ಟ, ಬಿಜೆಪಿಯ ರಿತು ತಾವ್ಡೆ ನೂತನ ಮೇಯರ್

TAGGED:Bus AccidentBus Fire
Share This Article
Facebook Copy Link Print
Previous Article lake lake lake ಲಿಂಗಸೂಗೂರು ಕೆರೆಯ ಸಮಗ್ರ ಅಭಿವೃದ್ಧಿಗೆ ವೈಜ್ಞಾನಿಕ ಯೋಜನೆ ಅಗತ್ಯ : ‘ಲೇಕ್ ಮ್ಯಾನ್’ ಆನಂದ್
Next Article Atal Canteens Atal Canteens Atal Canteens ದೆಹಲಿಯಲ್ಲಿ 100 ಹೊಸ ‘ಅಟಲ್ ಕ್ಯಾಂಟೀನ್’ಗಳ ಉದ್ಘಾಟನೆ, ಕೇವಲ 5 ರೂ.ಗೆ ಸಿಗುತ್ತೆ ಊಟ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Nida Nida Nida
ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಉದ್ಘಾಟನೆ ಮಾಡಿದ ಪ್ರಧಾನಿ ಮೋದಿ
ರಾಷ್ಟ್ರೀಯ-National Latest
March 28, 2026
Gas 1 Gas 1 Gas 1
ಗ್ಯಾಸ್ ಸಿಲಿಂಡರ್ ಕೊರತೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಕಾಂಗ್ರೆಸ್ ವಿಭಿನ್ನ ಪ್ರತಿಭಟನೆ
ರಾಜ್ಯ-Karnataka
March 28, 2026
Rai Rai Rai
ರಾಯಚೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಒಂದೇ ಕುಟುಂಬದ ನಾಲ್ವರು ದುರ್ಮರ
ರಾಯಚೂರು - Raichur
March 28, 2026
Bus Bus Bus
ಚಿಕ್ಕಬಳ್ಳಾಪುರ: ಪ್ರಯಾಣಿಕರನ್ನು ಬಿಸಿಲಿನಲ್ಲಿ ನಿಲ್ಲಿಸಿ ಸರಕು ಮೂಟೆಗಳನ್ನು ಸಾಗಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ಡ್ರೈವರ್, ಕಂಡಕ್ಟರ್
ಚಿಕ್ಕಬಳ್ಳಾಪುರ-Chikkaballapura
March 28, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up