ನವದೆಹಲಿ : ಪ್ರಿಯಾಂಕಾ ಗಾಂಧಿ ವಾದ್ರಾ ಮೊಟ್ಟ ಮೊದಲ ಬಾರಿಗೆ ಸಂಸತ್ ಪ್ರವೇಶಿಸಿದ್ದಾರೆ. ಚೊಚ್ಚಲ ಚುನಾವಣೆಯಲ್ಲೇ ಗೆಲುವು ಸಾಧಿಸಿ ವಯನಾಡ್ನ ಸಂಸದೆಯಾಗಿದ್ದಾರೆ. ಪ್ರಿಯಾಂಕಾ ವಾದ್ರಾ ಅವರು ಸಂಸತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರಿಂದ ಪ್ರಿಯಾಂಕಾ ಪ್ರಮಾಣ ವಚನ ಸ್ವೀಕರಿಸಿದರು. ಸಹೋದರ ಹುಲ್ಗ್ ಗಾಂಧಿಯನ್ನು ಅನುಸರಿಸಿದ ಪ್ರಿಯಾಂಕಾ ಅವರಂತೆಯೇ ಕೈಯಲ್ಲಿ ಸಂವಿಧಾನದ ಪ್ರತಿ ಹಿಡಿದು ಪ್ರಮಾಣವಚನ ಸ್ವೀಕರಿಸಿದರು.
ರಾಹುಲ್ ಗಾಂಧಿ ಅವರ ರಾಜೀನಾಮೆ ಬಳಿಕ ತೆರವಾದ ವಯನಾಡ್ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರು ಸ್ಪರ್ಧೆ ಮಾಡಿದ್ದರು. 6.22 ಲಕ್ಷ ಮತಗಳನ್ನು ಪಡೆಯುವ ಮೂಲಕ 4 ಲಕ್ಷಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ಕೇರಳದ ಸೀರೆಯಲ್ಲಿ ಪ್ರಿಯಾಂಕಾ :
ಅವರು ಕೇರಳದ ಬ್ರೋಕೆಡ್ ಸೀರೆಯನ್ನು ಧರಿಸಿದ್ದರು.ಯಾಂಕಾ ತನ್ನ ತಾಯಿ ಸೋನಿಯಾ ಗಾಂಧಿ, ಸಹೋದರ ರಾಹುಲ್ ಗಾಂಧಿ ಮತ್ತು ಪತಿ ರಾಬರ್ಟ್ ವಾದ್ರಾ ಅವರೊಂದಿಗೆ ಸಂಸತ್ ಭವನವನ್ನು ತಲುಪಿದ್ದಾರೆ.ಅವರ ಮಕ್ಕಳಿಬ್ಬರೂ ಸಂಸತ್ಗೆ ಆಗಮಿಸಿದ್ದರು. ಇದರೊಂದಿಗೆ ಸಂಸತ್ತಿನಲ್ಲಿ ಗಾಂಧಿ ಕುಟುಂಬದ ಮೂವರು ಸದಸ್ಯರಿದ್ದಾರೆ. ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ವಾದ್ರಾ ಲೋಕಸಭೆಯಲ್ಲಿ ಒಟ್ಟಿಗೆ ಕಾಣಿಸಿಕೊಂಡರೆ, ತಾಯಿ ಸೋನಿಯಾ ಗಾಂಧಿ ರಾಜ್ಯಸಭಾ ಸದಸ್ಯರಾಗಿದ್ದಾರೆ.

