ಮಂಗಳೂರಿನಲ್ಲಿ 5 ದಿನಗಳ ಕಾಲ ನಿಷೇಧಾಜ್ಞೆ ಜಾರಿ
ಎಲ್ಲಾ ಕಡೆ ಮದ್ಯದಂಗಡಿ ಕೂಡ ಬಂದ್!
ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಬಂದ್
ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ
ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕ ವ್ಯಾಪ್ತಿಯಲ್ಲಿ ಮದ್ಯದಂಗಡಿಗಳನ್ನು ಬಂದ್ ಮಾಡಲು ಆದೇಶಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಗೆ ಮಂಗಳೂರಿನಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದೆ.
ವಿಶ್ವ ಹಿಂದೂ ಪರಿಷತ್ (VHP) ದಕ್ಷಿಣ ಕನ್ನಡ ಜಿಲ್ಲಾ ಬಂದ್ಗೆ ಕರೆ ನೀಡಿದೆ. ಶುಕ್ರವಾರ ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೂ ದಕ್ಷಿಣ ಕನ್ನಡ ಜಿಲ್ಲೆ ಬಂದ್ಗೆ ಕರೆ ನೀಡಲಾಗಿದ್ದು ಹೋಟೆಲ್, ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ರಸ್ತೆಗಳು ವಾಹನ ಸಂಚಾರ ಕೂಡ ಸ್ತಬ್ಧವಾಗಿದೆ.
ಇದರ ನಡುವೆ ಮದ್ಯದಂಗಡಿಗಳನ್ನು ಕೂಡ ಮುಚ್ಚಲು ಆದೇಶ ಹೊರಡಿಸಲಾಗಿದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶಿಸಲಾಗಿದೆ.
ಬಿಎನ್ಎಸ್ ಕಲಂ 163 ಅಡಿಯಲ್ಲಿ ಮೇ 2 ರ ಮುಂಜಾನೆ 6 ಗಂಟೆಯಿಂದ ಮೇ 6 ರ ಮುಂಜಾನೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶದಲ್ಲಿ ತಿಳಿಸಿದ್ದಾರೆ. ಎಲ್ಲೆಡೆ ಬಿಗಿ ಬಂದೋಬಸ್ತ್ ಮಾಡಲಾಗಿದೆ.

