ಗುಬ್ಬಿ : ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ವಿರೋಧಿಸಿ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ತಾಲೂಕಿನ ನಿಟ್ಟೂರು ಬಳಿ ಪೊಲೀಸರು ಶನಿವಾರ ವಶಕ್ಕೆ ಪಡೆದರು,
ತಾಲೂಕಿನ ಸಂಕಾಪುರ, ಡಿ,ರಾಂಪುರ ಗ್ರಾಮದ ಬಳಿ ಕೆನಲ್ ಕಾಮಗಾರಿ ನಡೆಯುತ್ತಿದೆ, ಕಾಮಗಾರಿ ಸ್ಥಳದ ಸುತ್ತಮುತ್ತಲಿನ 10 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಗುಬ್ಬಿ ತಹಸಿಲ್ದಾರ್ ಬಿ.ಆರತಿ ಆದೇಶ ಹೊರಡಿಸಿದ್ದಾರೆ,ಮೇ.31 ರ ಬೆಳಿಗ್ಗೆ 6:00 ಯಿಂದ ಜೂನ್ ಒಂದರ ಬೆಳಿಗ್ಗೆ 6:00 ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ,
ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಹೋರಾಟ ಸಮಿತಿ ಬೃಹತ್ ಹೋರಾಟಕ್ಕೆ ಕರೆ ನೀಡಿತ್ತು, ಪ್ರತಿಭಟನಾಕಾರರು ಕಾಮಗಾರಿ ಸ್ಥಳಕ್ಕೆ ತೆರಳದಂತೆ ಬಿಗಿ ಪೊಲೀಸ್ ಬಂದೋಬಸ್ ಏರ್ಪಡಿಸಲಾಗಿತ್ತು,
ನಿಷೇಧಜ್ಞ ಧಿಕ್ಕರಿಸಿ ರೈತರು, ಮುಖಂಡರು ಹೋರಾಟ ನಡೆಸಿದರು ಶಾಸಕರಾದ ಬಿ ಸುರೇಶ್ ಗೌಡ, ಜಿಬಿ ಜ್ಯೋತಿ ಗಣೇಶ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎಚ್ಎಸ್ ರವಿಶಂಕರ್, ವಿವಿಧ ಮಠಗಳ ಸ್ವಾಮೀಜಿಗಳು ಪ್ರತಿಭಟನೆಯಲ್ಲಿ ತೊಡಗಿದ್ದರು, ರಸ್ತೆ ತಡೆದು ಟೈಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು,
ಲಿಂಕ್ ಕೆನಾಲ್ ಮೂಲಕ ಮಾಗಡಿ ರಾಮನಗರಕ್ಕೆ ನೀರು ತೆಗೆದುಕೊಂಡು ಹೋದರೆ ಜಿಲ್ಲೆಯ ಜನರಿಗೆ ಅನ್ಯಾಯವಾಗಲಿದೆ, ಸರ್ಕಾರ ಯಾವುದೇ ಮುಂದಾಲೋಚನೆ ಇಲ್ಲದೆ ಯೋಜನೆ ಜಾರಿಗೊಳಿಸಿದೆ, ಇದೊಂದು ಅವೈಜ್ಞಾನಿಕ ಕಾಮಗಾರಿ, ಕೂಡಲೇ ಎಲ್ಲ ಕೆಲಸಗಳನ್ನು ಸ್ಥಗಿತಗೊಳಿಸಬೇಕು’ಎಂದು ಪ್ರತಿಭಟನಾಕಾರರು ಆಗ್ರಹಿಸಿದರು,
ವರದಿ ; ನರಸಿಂಹರಾಜು

