ಬೆಳಗಾವಿ : ಕರ್ನಾಟಕ ಭೀಮ ಸೇನೆ ಹಾಗೂ ಕಾರ್ಮಿಕ ಸಂಘಟನೆಗಳಿಂದ ಹಲವಾರು ಬೇಡಿಕೆಗಳ ಈಡೇರಿಕೆಗೆ ಸುವರ್ಣಸೌಧದ ಎದುರು ಪ್ರತಿಭಟನೆ ನಡೆಸಲಾಯಿತು.
ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣಸೌಧದ ಎದುರು ಕರ್ನಾಟಕ ಭೀಮ ಸೇನೆ ಹಾಗೂ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಯಿತು ದಲಿತರಿಗೆ ಮೀಸಲಿಟ್ಟ ಹಣವನ್ನ ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರವದನ್ನ ಕೂಡಲೆ ನಿಲ್ಲಿಸಬೇಕು ಮತ್ತು ಕರ್ನಾಟಕದಲ್ಲಿ ಬಾಬಾಸಾಹೇಬ ಅಂಬೇಡ್ಕರ ಅವರ 250 ಅಡ್ಡಿ ಉದ್ದದ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು
2017 ರಲ್ಲಿ ಕಾರ್ಮಿಕ ಇಲಾಖೆಯಿಂದ ಕಾರ್ಮಿಕ ಬಂದು ಯೋಜನೆ ಅಡಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಮಿಕರನ್ನು ನೇಮಕ ಮಾಡಿಕೊಂಡು ಈಗ ಅಂಬೇಡ್ಕರ್ ಬಂದು ಎಂಬ ಯೋಜನೆ ಮಾಡಿ ಹಳೆಯ ಕಾರ್ಮಿಕರನ್ನು ತೆಗೆದು ಹೊಸ ಕಾರ್ಮಿಕರನ್ನ ಹಾಕಿ ನೂರಾರು ಕಾರ್ಮಿಕರಿಗೆ ಅನ್ಯಾಯ ಮಾಡಲಾಗುತ್ತಿದೆ ಹೀಗಾಗಿ ಸರ್ಕಾರ ನ್ಯಾಯ ಕೊಡಿಸಬೇಕೆಂದು ಪ್ರತಿಭಟಿಸಿದರು
ಸರ್ಕಾರದ ಪರವಾಗಿ ಅಬಕಾರಿ ಸಚಿವ R B ತಿಮ್ಮಾಪುರ ಅವರು ಸ್ಥಳಕ್ಕೆ ಆಗಮಿಸಿ ಮನವಿ ಸ್ವಿಕರಿಸಿ ಪರಿಸಿಲಿಸುವದಾಗಿ ಬರವಸೆ ಕೋಟ್ಟರು
ವರದಿ: ದಯಾನಂದ್ ಎಂ.

