By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಐತಿಹಾಸಿಕ ಮುದಗಲ್ಲ ಪಟ್ಟಣವನ್ನು ತಾಲೂಕು ಮಾಡುವಂತೆ ಹೆದ್ದಾರಿ ತಡೆದು ಪ್ರತಿಭಟನೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಐತಿಹಾಸಿಕ ಮುದಗಲ್ಲ ಪಟ್ಟಣವನ್ನು ತಾಲೂಕು ಮಾಡುವಂತೆ ಹೆದ್ದಾರಿ ತಡೆದು ಪ್ರತಿಭಟನೆ

ರಾಜ್ಯ-KarnatakaLatest

ಐತಿಹಾಸಿಕ ಮುದಗಲ್ಲ ಪಟ್ಟಣವನ್ನು ತಾಲೂಕು ಮಾಡುವಂತೆ ಹೆದ್ದಾರಿ ತಡೆದು ಪ್ರತಿಭಟನೆ

Protest by blocking the highway to make the historic Mudagalla town a taluk

Published February 19, 2026
Share
1 Min Read
Mudaga Mudaga Mudaga
SHARE

ಮುದಗಲ್ಲ (ರಾಯಚೂರು ಜಿಲ್ಲೆ), ಫೆ.19: ಮುದಗಲ್ಲ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಿಸುವಂತೆ ಆಗ್ರಹಿಸಿ ವಿವಿಧ ಸಂಘಟನೆಗಳು ಇಂದು ಪಟ್ಟಣ ಬಂದ್ ಮಾಡಿ ರಾಜ್ಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದವು.

ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಮುದಗಲ್ಲ ಪಟ್ಟಣವು ಸುತ್ತಮುತ್ತಲಿನ 60 ಗ್ರಾಮಗಳು ಹಾಗೂ 18 ತಾಂಡಾಗಳಿಗೆ ಕೇಂದ್ರ ಬಿಂದುವಾಗಿದ್ದು, ಎರಡು ಪ್ರಮುಖ ರಾಜ್ಯ ಹೆದ್ದಾರಿಗಳನ್ನು ಹೊಂದಿದೆ. ತಾಲೂಕು ಕೇಂದ್ರವಾಗಲು ಅಗತ್ಯವಾದ ಪುರಸಭೆ, ಕೃಷಿ ಉತ್ಪನ್ನ ಮಾರುಕಟ್ಟೆ, ವಿದ್ಯುತ್ ಪ್ರಸರಣಾ ಕೇಂದ್ರ, ಪದವಿ ಕಾಲೇಜು, ಬಸ್ ನಿಲ್ದಾಣ, ಟ್ರೆಜರಿ ಕಚೇರಿ, ಸಮುದಾಯ ಆರೋಗ್ಯ ಕೇಂದ್ರ, ಪೊಲೀಸ್ ಠಾಣೆ, ನಾಡ ತಹಸೀಲ್ದಾರ್ ಕಚೇರಿ ಸೇರಿದಂತೆ ರಾಷ್ಟ್ರೀಕೃತ ಬ್ಯಾಂಕ್‌ಗಳಂತಹ ಮೂಲ ಸೌಲಭ್ಯಗಳು ಇಲ್ಲಿವೆ ಎಂದು ಹೋರಾಟಗಾರರು ತಿಳಿಸಿದ್ದಾರೆ.

ಮಾಜಿ ಶಾಸಕ ದಿ.ಎಂ. ಗಂಗಣ್ಣನವರ ನೇತೃತ್ವದಲ್ಲಿ ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದರು. “ದಶಕಗಳಿಂದ ತಾಲೂಕು ಘೋಷಣೆಗೆ ಆಗ್ರಹಿಸುತ್ತಿದ್ದೇವೆ. ಆದರೆ ಈ ಬಾರಿ ಸರ್ಕಾರದಿಂದ ನಿರಾಸೆ ಎದುರಾಗಿದೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಬೆಳಗ್ಗೆಯಿಂದಲೇ ಪಟ್ಟಣದ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಹಾಗೂ ನಿವಾಸಿಗಳು ಸೇರಿ ಮುದಗಲ್ಲದ ರಾಯಚೂರು–ಬೆಳಗಾವಿ ಮುಖ್ಯ ರಾಜ್ಯ ಹೆದ್ದಾರಿಯನ್ನು ತಡೆದು ಆಕ್ರೋಶ ವ್ಯಕ್ತಪಡಿಸಿದರು. ಸಿಎಂ ಸಿದ್ದರಾಮಯ್ಯ ಅವರು ಹೋರಾಟಕ್ಕೆ ಮಣಿದು ಮುದಗಲ್ಲವನ್ನು ತಾಲೂಕು ಕೇಂದ್ರವೆಂದು ಘೋಷಿಸಬೇಕು; ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸುವುದಾಗಿ ಎಚ್ಚರಿಸಿದರು.

ಈ ಸಂದರ್ಭದಲ್ಲಿ ಮಾನಪ್ಪ ವಜ್ಜಲ್ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ದಲಿತ ಸಂಘರ್ಷ ಸಮಿತಿ, ವ್ಯಾಪಾರಸ್ಥರ ಸಂಘ, ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಇತರ ಪ್ರಗತಿಪರ ಸಂಘಟನೆಗಳು ಹೋರಾಟದಲ್ಲಿ ಭಾಗವಹಿಸಿದವು. ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

You Might Also Like

ಅನಗತ್ಯವಾಗಿ ಮರ ಕಡಿಯಲು ಅನುಮತಿಸದಂತೆ ಈಶ್ವರ ಖಂಡ್ರೆ ಸೂಚನೆ

Hassan : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ, ಮಕ್ಕಳು, ಅತ್ತೆಗೆ ವಿಷವಿಟ್ಟ ಮಹಿಳೆ ಅರೆಸ್ಟ್.!

ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ – ಕಾಂಗ್ರೆಸ್‌ ಅಭ್ಯರ್ಥಿಗಳಿಗೆ ಗೆಲುವು

ಬ್ರಿಕ್ಸ್ ಕರೆನ್ಸಿ ಕುರಿತು ಎಸ್.ಜೈಶಂಕರ್ ಮಹತ್ವದ ಹೇಳಿಕೆ

ದರ್ಶನ್‌ಗೆ ಹೆಚ್ಚುವರಿ ಹಾಸಿಗೆ, ದಿಂಬು ನೀಡಿ, ಜೈಲಲ್ಲಿ ವಾಕ್ ಮಾಡಲು ಅವಕಾಶ ನೀಡಿದ ಕೋರ್ಟ್ ಸೂಚನೆ

TAGGED:MoodagalluProtest
Share This Article
Facebook Copy Link Print
Previous Article Kodi Mutt Swamii Kodi Mutt Swamii Kodi Mutt Swamii ಯುಗಾದಿ ನಂತರ ಮುಖ್ಯಮಂತ್ರಿ ಬದಲಾವಣೆ..? : ಕೋಡಿಶ್ರೀ ಭವಿಷ್ಯ
Next Article Toxic Toxic Toxic ಯಶ್‌ ನಟನೆಯ ಬಹು ನಿರೀಕ್ಷಿತ ಚಿತ್ರ ‘Toxic’ ಟೀಸರ್ ರಿಲೀಸ್
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Ramalinga Reddy
ಆಟೋ ಗ್ಯಾಸ್ ಪೂರೈಕೆಯಲ್ಲಿ ಭಾರೀ ವ್ಯತ್ಯಯ : ಬಿಜೆಪಿ ನಾಯಕರ ವಿರುದ್ಧ ಸಚಿವ ರಾಮಲಿಂಗಾರೆಡ್ಡಿ ಆಕ್ರೋಶ
ರಾಜ್ಯ-Karnataka
April 9, 2026
Women's Reservation
ಮಹಿಳಾ ಮೀಸಲಾತಿ : ವಿಶೇಷ ಸಂಸತ್ ಅಧಿವೇಶನದಲ್ಲಿ ಮಹತ್ವದ ಮಸೂದೆಗಳ ಮಂಡನೆ
ರಾಷ್ಟ್ರೀಯ-National
April 9, 2026
Rice 01 Rice 01 Rice 01
ಜಮಖಂಡಿಯಲ್ಲಿ ನಿಲ್ಲದ ಪಡಿತರ ಅಕ್ಕಿ ಅಕ್ರಮ ದಂಧೆ
ರಾಜ್ಯ-Karnataka
April 9, 2026
Trekking
ಟ್ರೆಕ್ಕಿಂಗ್‌ಗೆ ತೆರಳುವವರ ಸುರಕ್ಷತೆಗಾಗಿ ಸಮಗ್ರ SOP ರೂಪಿಸಲು ಸಚಿವ ಈಶ್ವರ ಖಂಡ್ರೆ ಸೂಚನೆ
ರಾಜ್ಯ-Karnataka
April 9, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up