ಬೆಳಗಾವಿ ತಾಲ್ಲೂಕಿನ ಸಂತಿ ಬಸ್ತವಾಡ ಗ್ರಾಮದಲ್ಲಿ ಗ್ರಂಥ ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಚನ್ನಮ್ಮ ವೃತ್ತದಲ್ಲಿ ಸೋಮವಾರ ಸಂಜೆ ಮುಸ್ಲಿಂ ಸಮುದಾಯದ ಸಾವಿರಾರೂ ಜನ ಪ್ರತಿಭಟನೆ ನಡೆಸಿ, ತಪ್ಪಿತಸ್ತರನ್ನು ಕೂಡಲೇ ಬಂಧಿಸಬೇಕೆಂದು ಆಗ್ರಹಿಸಿ, ಆಕ್ರೋಶ ವ್ಯಕ್ತಪಡಿಸಿದರು.
ಸ್ಥಳಕ್ಕೆ ಬೆಳಗಾವಿ ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಭೇಟಿ ನೀಡಿ ಈ ಘಟನೆಗೆ ಸಂಬಂಧಿಸಿದಂತೆ ಯಾರೇ ಆಗಿರಲಿ ಶೀಘ್ರವೇ ತನಿಖೆ ನಡೆಸಿ. ಬಂಧಿಸಲಾಗುವುದು,ಹೀಗಾಗಿ ಪ್ರತಿಭಟನೆ ಕೈ ಬಿಡುವಂತೆ ಮುಸ್ಲಿಂ ಸಮುದಾಯದ ಪ್ರತಿಭಟನಾಕಾರರಲ್ಲಿ ಮನವಿ ಮಾಡಿದರು.
ಚನ್ನಮ್ಮ ವೃತ್ತಕ್ಕೆ ಆಗಮಿಸಿದ ಸ್ಥಳೀಯ ಶಾಸಕ ಆಸೀಪ್ ರಾಜು ಸೇರ್ ಅವರು ಅವರು ಮುಸ್ಲಿಂ ಸಮುದಾಯದ ಬಾಂಧವರು ಶಾಂತಿಯುತ ಪ್ರತಿಭಟನೆ ಮಾಡಿ. ಈ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಆಯುಕ್ತರು ಕ್ರಮ ಕೈಗೊಳ್ಳುತ್ತಾರೆ. ಶೀಘ್ರದಲ್ಲೇ ತಪ್ಪಿತಸ್ತರನ್ನು ಬಂಧಿಸುತ್ತಾರೆಂದು ಭರವಸೆ ನೀಡಿದರು.
ಮಸೀದಿಯಲ್ಲಿದ್ದ ಗ್ರಂಥ ಪುಸ್ತಕ ಕದ್ದೊಯ್ದು ಸುಟ್ಟು ಹಾಕಿರುವ ಘಟನೆ ಬೆಳಗಾವಿ ತಾಲೂಕಿನ ಸಂತಿಬಸ್ತವಾಡ| ಗ್ರಾಮದಲ್ಲಿ ನಡೆದಿದಿದೆ.ಸಂತಿಬಸ್ತವಾಡ ಗ್ರಾಮದ ನಿರ್ಮಾಣ ಹಂತದ ಮಸೀದಿಯ ಕೆಳಮಹಡಿಯಲ್ಲಿದ್ದ ಕುರಾನ್ ಪುಸ್ತಕವನ್ನು ಕದ್ದೊಯ್ದು ಸುಟ್ಟು ಹಾಕಲಾಗಿದೆ.
ಇಂದು ಪ್ರಾರ್ಥನೆಗೆಂದು ಬಂದಾಗ ಗ್ರಂಥಇಲ್ಲದಿರುವುದು ಬೆಳಕಿಗೆ ಬಂದಿದೆ. ಪ್ರಾರ್ಥನೆ ಮುಗಿಸಿದ ಬಳಿಕ ಸುತ್ತಲಿನ ಪ್ರದೇಶದಲ್ಲಿ ಹುಡುಕಾಟ ನಡೆಸಿದಾಗ ಸುಟ್ಟು ಹಾಕಿರುಮದು ಕಂಡುಬಂದಿದೆ. ಇದಕ್ಕೆ ಸಂಬಂಧಪಟ್ಟಂತೆ ಉತ್ತರ ಬೆಳಗಾವಿ ಶಾಸಕರಾದ ರಾಜು ಸೆಟ್ ಅವರು ಮಾಧ್ಯಮಕ್ಕೆ ಹೇಳಿಕೆ ಕೊಟ್ಟಿದ್ದಾರೆ. ಬೆಳಗಾವಿಯ ಸಿಟಿ ಕಮಿಷನರ್ ಯಡಾ ಮಾರ್ಟಿನ್. ನಮ್ಮ ಸಂಪೂರ್ಣ ಚಾನೆಲ್ ಗೆ ಹೇಳಿಕೆ ಕೊಟ್ಟಿದ್ದಾರೆ.
ವರದಿ. ದಯಾನಂದ. ಎಂ.

