ಮುಂಬೈ: ಪುಣೆಯ ಲೋಹೆಗಾಂವ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಜಗದ್ಗುರು ಸಂತ ತುಕಾರಾಂ ಮಹಾರಾಜ್ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಯನ್ನು ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ಸೋಮವಾರ ಅನುಮೋದಿಸಿದೆ.
ವಿಮಾನಯಾನ ಸಚಿವ ಮುರುಳೀಧರ್ ಮೊಹೇಲ್ ಮಾತನಾಡಿ, ಇದೀಗ ಏಕ್‌ನಾಥ್ ಶಿಂಧೆ ನೇತೃತ್ವದ ಸರ್ಕಾರವು ಮಹಾರಾಜ್ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮರುನಾಮಕರಣ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಇಂದು ಸಲ್ಲಿಸಿದೆ.
ಕೇಂದ್ರ ಸರ್ಕಾರ ಮತ್ತು ಸಚಿವ ಸಂಪುಟಕ್ಕೆ ಪ್ರಸ್ತಾವನೆ ಕಳುಹಿಸಲಾಗಿದ್ದು, ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡುವ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮೊದಲು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಪುಣೆ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡುವಂತೆ ಶಿಫಾರಸು ಮಾಡಿದ್ದರು.