ಬೆಂಗಳೂರು: ರಾಜ್ಯದಲ್ಲಿ ದೇಶ ವಿರೋಧಿ ಶಕ್ತಿಗಳು ಹೆಚ್ಚಾಗುತ್ತಿವೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಆತಂಕ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗಮಂಗಲದಲ್ಲಿ ಸರ್ಕಾರ ಓಲೈಕೆ ರಾಜಕಾರಣ ನಡೆಸುತ್ತಿದೆ. ಮೊದಲ 25 ಜನರು ಹಿಂದೂಗಳ ಹೆಸರೇ ಇದೆ. ಇತ್ತ ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶಿಸಿದ್ದಾರೆ. ಈ ಸರ್ಕಾರ ಬಂದ ನಂತರ ಭಯವೇ ಇಲ್ಲದಂತಾಗಿದೆ. ಇದನ್ನೆಲ್ಲ ನೋಡಿದರೆ ರಾಜ್ಯದಲ್ಲಿ ದೇಶ ವಿರೋಧಿ ಶಕ್ತಿಗಳು ಹೆಚ್ಚಾಗುತ್ತಿವೆ ಎಂದಿದ್ದಾರೆ.
ಕಳೆದ 15 ತಿಂಗಳಿಂದ ರಾಜ್ಯದಲ್ಲಿ ಹಿಂದೂಗಳ ಮೇಲೆ ಹಲ್ಲೆ ನಡೆಯುತ್ತಿದೆ. ಸಿಎಂ, ಡಿಸಿಎಂ ತಮ್ಮದೇ ಗೊಂದಲಗಳಲ್ಲಿ ಸಿಕ್ಕಿಕೊಂಡಿದ್ದಾರೆ. ರಾಜ್ಯದಲ್ಲಿ ಭಯೋತ್ಪಾದಕರ ಅಟ್ಟಹಾಸ ನಡೀತಿದೆ ಎಂದು ಕಿಡಿಕಾರಿದ್ದಾರೆ. ನಾಗಮಂಗಲ ಗಲಭೆಯಲ್ಲಿ ನಲ್ಲಿ ಹಿಂದೂಗಳ ಮೇಲೆ ಹೆಚ್ಚು ಕೇಸ್ ಹಾಕಲಾಗಿದೆ. ಗಲಭೆಯಲ್ಲಿ ಪಿಎಫ್‍ಐ ಲಿಂಕ್ ಇದ್ದವರೂ ಇದ್ದರು ಎನ್ನಲಾಗಿದೆ. ಅವರನ್ನು ಕೇರಳದಿಂದ ಕರೆಸುವ ಕೆಲಸವನ್ನು ಕಿಡಿಗೇಡಿ ಮುಸ್ಲಿಮರು ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ಮಂಗಳೂರಿನಲ್ಲೂ ಕೋಮುಗಲಭೆ ನಡೆಯುತ್ತಿದೆ. ಚಿಕ್ಕಮಗಳೂರಿನಲ್ಲಿ ಪ್ಯಾಲೆಸ್ತೀನ್ ಧ್ವಜ ಹಿಡಿದು ರಾಜಾರೋಷವಾಗಿ ಘೋಷಣೆ ಕೂಗುತ್ತಾ ಹೋಗಿದ್ದಾರೆ. ಈ ಸರ್ಕಾರ ಬಂದ ಮೇಲೆ ಭಯೋತ್ಪಾದಕರಿಗೆ, ಪಿಎಫ್‍ಐನವ್ರಿಗೆ ಭಯ ಇಲ್ಲದಂತಾಗಿದೆ. ಒಂದು ಕಡೆ ರಾಹುಲ್ ವಿದೇಶಗಳಲ್ಲಿ ಭಾರತ ಬಗ್ಗೆ ಟೀಕೆ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.
ನಾವು ಕತ್ತಿಯಿಂದಲೇ ಉತ್ತರ ಕೊಡುತ್ತೇವೆ : ಸಿಟಿ ರವಿ
ಬಿಸಿ ರೋಡಿನಲ್ಲಿ ಹಿಂದೂಳಿಗೆ ಸವಾಲು ಹಾಕಲಾಗಿದೆ. ಇದು ಹಿಂದೂಗಳಿಗಷ್ಟೇ ಅಲ್ಲ, ಭಾರತಕ್ಕೆ ಹಾಕಿದ ಸವಾಲು. ನಾವು ಸಹ ಕತ್ತಿಯಿಂದಲೇ ಉತ್ತರ ಕೊಡುತ್ತೇವೆ ಎಂದು ಸಿಟಿ ರವಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದೆ ನಮ್ಮ ಪೂರ್ವಜರು ಕತ್ತಿ ತೋರಿಸಿದಾಗ ಕತ್ತಿಯಿಂದಲೇ ಉತ್ತರ ಕೊಟ್ಟಿದ್ದರು. ಯುದ್ಧಕ್ಕೆ ಸವಾಲು ಹಾಕಿದಾಗ ಯುದ್ಧದ ಮೂಲಕವೇ ಗೆಲ್ಲಬೇಕು. ಸಲಹೆ ಎಲ್ಲಾ ಕೆಲಸ ಮಾಡಲ್ಲ. ನಾವು ಸಹ ಕತ್ತಿಯಿಂದಲೇ ಉತ್ತರ ಕೊಡುತ್ತೇವೆ. ಇಲ್ಲವಾದರೆ ನಮ್ಮ ದೇಶ ಬಾಂಗ್ಲಾದೇಶ, ಪಾಕಿಸ್ತಾನದಂತೆ ಆಗುತ್ತದೆ. ಅದಕ್ಕೆ ನಾವು ಅವಕಾಶ ಕೊಡಬಾರದು ಎಂದರು.
ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟ, ಗಲಭೆಯ ಹಿಂದೆ ಹೊರಗಿನ ಶಕ್ತಿ ಕೆಲಸ ಮಾಡಿದೆ ಎಂಬ ಅನುಮಾನ ನನಗಿತ್ತು. ಕೇರಳದವರ ಹೆಸರು ಬಹಿರಂಗವಾಗಿರುವುದರಿಂದ ಅದು ಸಾಬೀತಾಗಿದೆ. ನಾಗಮಂಗಲ ಗಲಭೆ ಪ್ರಕರಣದ ಸಂಪೂರ್ಣ ತನಿಖೆ ಎನ್‌ಐಗೆ ವಹಿಸಬೇಕು. ಮಂಡ್ಯದಲ್ಲಿ ಶೇ.90ರಷ್ಟು ಹಿಂದೂಗಳಿದ್ದಾರೆ. ನೀನು ಎಂದರೆ ನಿಮ್ಮಪ್ಪ ಅನ್ನುವ ಜನ ಇದ್ದಾರೆ. ಅಂತಹ ಕಡೆ ಇಂತಹ ಕೃತ್ಯ ಮಾಡಿರುವುದು ಪೂರ್ವ ನಿಯೋಜಿತ. ಇಲ್ಲಿ ಗಲಾಟೆ ಎಬ್ಬಿಸಿ ಭಯದ ವಾತಾವರಣ ನಿರ್ಮಾಣ ಮಾಡಬೇಕು, ಆತಂಕ ಸೃಷ್ಟಿ ಮಾಡಬೇಕು, ಗಲಭೆ ಮಾಡಿ ನಷ್ಟ ಉಂಟು ಮಾಡಬೇಕು ಎಂಬುದು ಅವರ ಉದ್ದೇಶವಾಗಿದೆ ಎಂದರು.