ರೈಲ್ವೆ ಪರೀಕ್ಷೆಯಲ್ಲಿ ಜನಿವಾರ
ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ಸೂಚನೆ
ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು
ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಹೇಳಿಕೆ
ರೈಲ್ವೆ ನೇಮಕಾತಿ ಮಂಡಳಿಯ ನರ್ಸಿಂಗ್ ಸೂಪರಿಂಟೆಂಡೆಂಟ್ ಪರೀಕ್ಷೆಗೆ ಹಾಜರಾಗುವವರು ಮಂಗಳಸೂತ್ರ ಮತ್ತು ಜನಿವಾರ ತೆಗೆಯಬೇಕು ಎಂದು ಸೂಚಿಸಿದ್ದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು.
ಈ ವಿಚಾರವಾಗಿ ರೈಲ್ವೆ ಇಲಾಖೆಯ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಮಧ್ಯ ಪ್ರವೇಶಿಸಿ, ಪರೀಕ್ಷಾರ್ಥಿಗಳು ಧಾರ್ಮಿಕ ಸಂಕೇತಗಳನ್ನು ಹಾಗೂ ಮಂಗಳಸೂತ್ರವನ್ನು ತೆಗೆಯಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಧಾರ್ಮಿಕ ಸಂಕೇತಗಳನ್ನು ಹಾಗೂ ಮಂಗಳಸೂತ್ರವನ್ನು ತೆಗೆಸದಂತೆ ಅಧಿಕಾರಿಗಳಿಗೆ ಸೂಚನೆಯನ್ನೂ ನೀಡಿದ್ದಾರೆ.
ಪರೀಕ್ಷೆಗೆ ಹಾಜರಾಗುವವರು ಧಾರ್ಮಿಕ ಸಂಕೇತಗಳು ಮತ್ತು ಮಂಗಳಸೂತ್ರವನ್ನು ತೆಗೆದು ಬರಬೇಕು ಎಂದು ಪ್ರವೇಶ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಇದಕ್ಕೆ ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ತಕ್ಷಣವೇ, ದಕ್ಷಿಣ ಕನ್ನಡ ಬಿಜೆಪಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಈ ವಿಚಾರವನ್ನು ರೈಲ್ವೆ ಇಲಾಖೆ ಸಚಿವರ ಗಮನಕ್ಕೆ ತಂದಿದ್ದರು.
‘ಭಾರತೀಯ ರೈಲ್ವೆಯ ನರ್ಸಿಂಗ್ ಸೂಪರಿಂಟೆಂಡೆಂಟ್ ಹುದ್ದೆಗೆ ಪರೀಕ್ಷೆ ಬರೆಯುವವರು ಮಂಗಳಸೂತ್ರ, ಜನಿವಾರದಂತಹ ಧಾರ್ಮಿಕ ಸಂಕೇತಗಳು ಮತ್ತು ಆಭರಣಗಳನ್ನು ತೆಗೆಯುವಂತೆ ಮಾಡಬಾರದು. ಜನಿವಾರ, ಮಂಗಳಸೂತ್ರ ತೆಗೆಸದಂತೆ ಅಧಿಕಾರಿಗಳಿಗೆ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ಸೂಚನೆ ನೀಡಿದ್ದಾರೆ

