Rain Alert : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮಳೆ ಆರ್ಭಟ ಜೋರಾಗಿದ್ದು, ಮಳೆ ಜೊತೆ ಗಾಳಿ ಅಬ್ಬರ ಜೋರಾಗಿದೆ. ಅಲ್ಲದೆ ಮೇ 27 ಮತ್ತು 28 ರಂದು ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದ್ದು, ಈ ಹಿನ್ನಲೆ ದ.ಕ.ಜಿಲ್ಲೆಯಲ್ಲಿ ಮೇ 27 ಮತ್ತು28ರಂದು ಜಿಲ್ಲೆಯ ಎಲ್ಲಾ ಅಂಗನವಾಡಿಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಸಿಬಿಎಸ್ಸಿ, ಪದವಿಪೂರ್ವ ಸರಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಅತೀ ಹೆಚ್ಚಿನ ಮಳೆ ದಾಖಲಾಗಿರುತ್ತದೆ. ಇದೇ ಹವಾಮಾನ ಪರಿಸ್ಥಿತಿಯು ಮುಂದುವರಿಯುವ ಸೂಚನೆಯಿದ್ದು ದಿನಾಂಕ: 28.05.2025 ರವರೆಗೆ ಜಿಲ್ಲೆಯಾದ್ಯಂತ ರೆಡ್ – ಅಲರ್ಟ್ ಘೋಷಣೆಯಾಗಿರುತ್ತದೆ.
ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಲು ಸೂಚನೆ ನೀಡಲಾಗಿದ್ದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಈ ಕೆಳಕಂಡ ದೂರವಾಣಿಯನ್ನು ಸಂಪರ್ಕಿಸುವುದು, ತುರ್ತು ಸೇವೆಗೆ ಟೋಲ್ ಫ್ರೀ ಸಂಖ್ಯೆ. 24X7 ಕಂಟ್ರೋಲ್ ರೂಮ್ ನಂ. 1077 ಅಥವಾ 0824 2442590

