ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳುರು ಸೇರಿ ರಾಜ್ಯದಲ್ಲಿ 5 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮೂನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಸದ್ಯ ಉತ್ತಮ ಮಳೆಯಾಗುತ್ತಿದ್ದು, ಮುಂದಿನ 5 ದಿನಗಳು ಹುಡುಗು ಸಹಿತ ಭಾರೀ ಮಳೆಯಾಗಲಿದ್ದು, ಕರಾವಳಿ ,ಉತ್ತರ ಕನ್ನಡ ಭಾಗದಲ್ಲಿ ಇಂದು ಯೆಲ್ಲೋ ಆಲರ್ಟ್ ಘೋಷಣೆ ಮಾಡಲಾಗಿದೆ. ಗಂಟೆಗೆ ಸುಮಾರು 40-50 ಕಿ.ಲೋ ಮೀಟರ್ ವೇಗದಲ್ಲಿ ಬಿರುಗಾಳಿ ಸಹಿತ ಮಳೆ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ಎಸ್ಪಿಪಿ ಬದಲಾವಣೆಗೆ ಸರ್ಕಾರದ ಮೇಲೆ ಒತ್ತಡ
ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿದ ಬಹುತೇಕ ಜಿಲ್ಲೆಯಲ್ಲಿ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡದಲ್ಲಿ ಭಾರೀ ಮಳೆ ಸಾಧ್ಯತೆ ಇದೆ. ಇದನ್ನೂ ಓದಿ:ಶಾಲೆಗಳಲ್ಲಿ ಶಿಶುಪಾಲನ ಕೇಂದ್ರಗಳ ಪ್ರಾರಂಭಕ್ಕೆ ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ನಗರದಲ್ಲಿ ಇಂದು ಸಾಧರಣ ಮಳೆ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಇದನ್ನೂ ಓದಿ:ರೇಣುಕಾಸ್ವಾಮಿ ಕೊಲೆ ಪ್ರಕರಣ: ಎಸ್ಪಿಪಿ ಬದಲಾವಣೆಗೆ ಸರ್ಕಾರದ ಮೇಲೆ ಒತ್ತಡ