ಬೆಂಗಳೂರು: ರಾಜಧಾನಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹಾಟ್ ಸಿಟಿಯಾಗಿದ್ದ ಬೆಂಗಳೂರು ಇಂದು ಬೆಳ್ಳಂಬೆಳ್ಳಗೆ ಕೂಲ್ ವಾತಾವರಣ ಇದೆ. ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದು, ಕೆಲವಡೆ ತುಂತುರು ಮಳೆಯಾಗಿದ್ದು, ಮಳೆಯಾಗುವ ಸಾಧ್ಯೆತೆ ಇದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ವರ್ತೂರು, ಬ್ರೂಕ್‌ಫೀಲ್ಡ್, ಮಹದೇವಪುರ, ವೈಟ್‌ಫೀಲ್ಡ್, ಕಲ್ಯಾಣ ನಗರ, ಮಾರತ್ತಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಬನಶಂಕರಿ, ಬಿಟಿಎಂ ಲೇಔಟ್, ಕೊತ್ನೂರು, ಗೊಟ್ಟಿಗೆರೆ, ಟಿಸಿ ಪಾಳ್ಯ, ಕೆಆರ್ ಪುರ, ಕುಮಾರಸ್ವಾಮಿ ಲೇಔಟ್, ಉತ್ತರಹಳ್ಳಿ, ಹೆಚ್‌ಎಸ್‌ಆರ್ ಲೇಔಟ್, ಮಡಿವಾಳ, ಹುಳಿಮಾವು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಬೆಳಗ್ಗೆ ತುಂತುರು ಮಳೆಯಾಗಿದೆ. ಇದನ್ನೂ ಓದಿ: ಬೇಸಿಗೆಗೆ ಹೆಚ್ಚಿದ ವಿಷ ಸರ್ಪಗಳು – ಸರ್ಕಾರಿ ಆಸ್ಪತ್ರೆಗಳಲ್ಲಿಲ್ಲ ಸಾಕಾಗುವಷ್ಟು ಔಷಧಿ

ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗುಡುಗು, ಮಿಂಚು ಸಹಿತ ಮಳೆಯಾಗುವ ಸಂಭವವಿದ್ದು, ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ

