ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಆಗಸ್ಟ್ 12ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆಯ ನಿರ್ದೇಶಕ ಸಿ.ಎಸ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಮುಂದಿನ 6 ದಿನ ಬಿರುಗಾಳಿ ಮಳೆ :
ಮುಂದಿನ 6 ದಿನಗಳ ಕಾಳ ದೇಶದ ಈ ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ ಸುರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆ ಪ್ರಕಾರ ಇಂದು (ಆಗಸ್ಟ್ 08) ನವದೆಹಲಿಯಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಲಘು ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಭಾರೀ ಮಳೆ ಹಿನ್ನೆಲೆ ನೋಯ್ಡಾ ಸೇರಿದಂತೆ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ಆಗಸ್ಟ್ 10ರಿಂದ 12ರ ವರೆಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

