ಬೆಂಗಳೂರು : ಮಚ್ಚು ಹಿಡಿದು ರೀಲ್ಸ್ ಮಾಡಿದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಕನ್ನಡ ಬಿಗ್ಬಾಸ್ನ ಮಾಜಿ ಸ್ಪರ್ಧಿಗಳಾದ ರಜತ್ ಕಿಶನ್ ಹಾಗೂ ವಿನಯ್ ಗೌಡ ಅವರನ್ನು ಸೋಮವಾರ ಬಂಧಿಸಿ, ಬಿಡುಗಡೆ ಮಾಡಲಾಗಿತ್ತು. ಆದರೆ ಮಂಗಳವಾರ ಮತ್ತೆ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಬಳಿಕ ಮೂರು ದಿನಗಳ ಕಾಲ ಕಸ್ಟಡಿಗೆ ನೀಡಲಾಗಿತ್ತು.

ಆದರೀಗ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಇದೀಗ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿದೆ. ಜಾಮೀನು ಆದೇಶ ಜೈಲಿಗೆ ತಲುಪಿದ ನಂತರ ಇಂದೇ ರಿಲೀಸ್ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಸದ್ಯ ಇಬ್ಬರಿಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಿದ್ದಾರೆ. ಕೋರ್ಟ್ ನಲ್ಲಿ ಶ್ಯೂರಿಟಿ ಕ್ಲಿಯರೇನ್ಸ್ ಆದ ಬಳಿಕ ರಿಲೀಸ್ ಭಾಗ್ಯ ಸಿಗಲಿದೆ. ತಲಾ ಹತ್ತು ಸಾವಿರ ರೂಪಾಯಿ, ಷರತ್ತು ಬದ್ಧ ಜಾಮೀನು ನೀಡಿದೆ.