‘ಗ್ಲೋಬಲ್ ಸ್ಟಾರ್’ ರಾಮ್ ಚರಣ್ ನಟನೆಯ ‘ಗೇಮ್ ಚೇಂಜರ್’ ಸಿನಿಮಾದ ಟ್ರೇಲರ್ ಬಿಡುಗಡೆಯಾಗಿದೆ. ಜನವರಿ 10ರಂದು ಈ ಸಿನಿಮಾ ತೆರೆಗೆ ಬರುತ್ತಿದ್ದು ಟ್ರೇಲರ್ ಭಾರಿ ಕುತೂಹಲ ಮೂಡಿಸಿದೆ. ಖ್ಯಾತ ನಿರ್ದೇಶಕ ಎಸ್.ಎಸ್. ರಾಜಮೌಳಿ ಅವರು ಟ್ರೇಲರ್ ಬಿಡುಗಡೆ ಮಾಡಿ ಶುಭ ಹಾರೈಸಿದ್ದಾರೆ.
ಖ್ಯಾತ ನಿರ್ದೇಶಕ ಶಂಕರ್ ಅವರು ‘ಗೇಮ್ ಚೇಂಜರ್’ ಚಿತ್ರಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ರಾಮ್ ಚರಣ್ ಅವರು ಈ ಸಿನಿಮಾದಲ್ಲಿ ಐಎಎಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ‘ಗೇಮ್ ಚೇಂಜರ್’ ಸಿನಿಮಾದಲ್ಲಿ ರಾಮ್ ಚರಣ್ ಅವರಿಗೆ ಜೋಡಿಯಾಗಿ ಬಾಲಿವುಡ್ ಬೆಡಗಿ ಕಿಯಾರಾ ಅಡ್ವಾನಿ ಕಾಣಿಸಿಕೊಂಡಿದ್ದಾರೆ.
ಅಂಜಲಿ, ಎಸ್.ಜೆ. ಸೂರ್ಯ, ಸಮುದ್ರಕನಿ. ಶ್ರೀಕಾಂತ್, ನವೀನ್ ಚಂದ್ರ ಮುಂತಾದವರು ‘ಗೇಮ್ ಚೇಂಜರ್’ ಸಿನಿಮಾದಲ್ಲಿ ನಟಿಸಿದ್ದಾರೆ. ಶಂಕರ್ ನಿರ್ದೇಶನದ ಸಿನಿಮಾ ಎಂಬ ಕಾರಣದಿಂದಲೂ ಈ ಚಿತ್ರ ಹೈಪ್ ಸೃಷ್ಟಿ ಮಾಡಿದೆ.
ಥಮನ್ ಅವರು ‘ಗೇಮ್ ಚೇಂಜರ್’ ಸಿನಿಮಾಗೆ ಸಂಗೀತ ನೀಡಿದ್ದಾರೆ. ಖ್ಯಾತ ನಿರ್ಮಾಪಕ ದಿಲ್ ರಾಜ್ ಅವರು ಬಂಡವಾಳ ಹೂಡಿದ್ದಾರೆ. ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ 50ನೇ ಸಿನಿಮಾ ಎಂಬುದು ಕೂಡ ವಿಶೇಷ. ಟ್ರೇಲರ್ ನೋಡಿದ ಸಿನಿಪ್ರಿಯರಿಂದ ಪಾಸಿಟಿವ್ ಪ್ರತಿಕ್ರಿಯೆ ಸಿಗುತ್ತಿದೆ.