ಶಿವಮೊಗ್ಗ: 400 ಮಹಿಳೆಯರ ಅತ್ಯಾಚಾರ ಮಾಡಿದ್ದು, ಆತ (Prajwal Revanana) ಮಾಸ್ ರೇಪಿಸ್ಟ್ ಎಂದು ಪ್ರಜ್ವಲ್ ಪೆನ್ಡ್ರೈವ್ ಆರೋಪ ಕುರಿತು ಕಾಂಗ್ರೆಸ್ (Congress) ನಾಯಕ ರಾಹುಲ್ ಗಾಂಧಿ (Rahul Gandhi) ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಶಿವಮೊಗ್ಗದಲ್ಲಿ (Shivamogga) ಗೀತಾ ಶಿವರಾಜ್ಕುಮಾರ್ (Geeta Rajkumar) ಪರ ರಾಹುಲ್ ಗಾಂಧಿ ಪ್ರಚಾರ ಮಾಡುವ ವೇಳೆ ಈ ಕುರಿತು ಮಾತನಾಡಿದ ಅವರು, 400 ಮಹಿಳೆಯರ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಮಾಡಿದ್ದಾರೆ. ಇದು ಕೇವಲ ಅತ್ಯಾಚಾರ ಅಷ್ಟೇ ಅಲ್ಲ. ಇದೊಂದು ಸಾಮೂಹಿಕ ಅತ್ಯಾಚಾರ. ಒಬ್ಬ ಮಾಸ್ ರೇಪಿಸ್ಟ್ ಪರ ಪ್ರಧಾನಿ ನರೇಂದ್ರ ಮೋದಿ ಅವರು ಮತಯಾಚಿಸಿರುವುದು ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ, ಕರ್ನಾಟಕದ ಹೆಸರು ಕೆಡಿಸಿದ್ದಾರೆ: ಮೊಯ್ಲಿ
ರಾಜ್ಯದಲ್ಲಿ 2ನೇ ಹಂತದ ಲೋಕಸಭಾ ಚುನಾವಣೆಯ ಪ್ರಚಾರ ಜೋರಾಗಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ಕುಮಾರ್ ಪರ ಪ್ರಚಾರ ಮಾಡಿದ್ದಾರೆ. ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಪ್ರಕರಣ ಬಿಜೆಪಿಯವರಿಗೆ ಮೊದಲೇ ಗೊತ್ತಿತ್ತು. ಆದರೂ ಪ್ರಧಾನಿ ಮೋದಿ ಹಾಗೂ ಆ ಪಕ್ಷದ ಮುಖಂಡರು ಪ್ರಜ್ವಲ್ ರೇವಣ್ಣ ಪರ ಮತಯಾಚಿಸಿದ್ದಾರೆ. ಪ್ರಜ್ವಲ್ ರೇವಣ್ಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿಯವರು ಮಹಿಳೆಯರ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಆರೋಪ – SITಯಿಂದ ನವೀನ್ ಗೌಡಗೆ ನೋಟಿಸ್