-ಲೈಂಗಿಕ ದೌರ್ಜನ್ಯದ ಬಗ್ಗೆ ಕಣ್ಣೀರಿಟ್ಟು ವಿವರಿಸಿದ ಓರ್ವ ಸಂತ್ರಸ್ತೆ
ಬೆಂಗಳೂರು: ದಿನೆ ದಿನೇ ಹಾಸನದ (Hassan) ಸೆಕ್ಸ್ ಸ್ಕ್ಯಾಂಡಲ್ ರೋಚಕ ತಿರುವುಗಳು ಪಡೆಯುತ್ತಿದ್ದು, ಇದೀಗ ರೇಪ್ ಮಾಡಿದ್ದು, ರೇವಣ್ಣ (Revanna) ಅಲ್ಲ, ಪ್ರಜ್ವಲ್ (Prajwal Revanna) ಎಂದು ಸಂತ್ರಸ್ತೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಇದರಿಂದಾಗಿ ಪ್ರಜ್ವಲ್ ರೇವಣ್ಣಗೆ ಹೊಸ ಸಂಕಷ್ಟ ಎದುರಾಗಲಿದೆ.
ದೂರು ಕೊಟ್ಟ ಮಹಿಳೆ ಕಿಡ್ನಾಪ್ ಆಗಿದ್ದು, ಎಸ್‌ಐಟಿ (SIT) ಪೊಲೀಸರು ಸಂತ್ರಸ್ತೆಯನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ಎಸ್‌ಐಟಿ ವಶದಲ್ಲಿರುವ ಕಿಡ್ನಾಪ್ ಆಗಿದ್ದ ಮಹಿಳೆ, ಲೈಂಗಿಕ ದೌರ್ಜನ್ಯದ ಬಗ್ಗೆ ಕಣ್ಣೀರಿಟ್ಟು ಕಿರುಕುಳದ ಬಗ್ಗೆ ವಿವರಿಸಿದ್ದಾಳೆ. ನನ್ನ ಮೇಲೆ ಅತ್ಯಾಚಾರ ಮಾಡಿದ್ದು ಹೆಚ್.ಡಿ ರೇವಣ್ಣ ಅಲ್ಲ. ಪ್ರಜ್ವಲ್ ರೇವಣ್ಣ ಎಂದು ಮಹಿಳೆ ಕಣ್ಣೀರಿಡುತ್ತಾ ಎಸ್‌ಐಟಿ ಅಧಿಕಾರಿಗಳಿಗೆ ತಿಳಿಸಿದ್ದಾರೆ. ಸಂತ್ರಸ್ತೆ ನೀಡಿ ಇರುವ ಹೇಳಿಕೆಯನ್ನು ನ್ಯಾಯಾಧೀಶರ ಎದುರು ನೀಡಲು ಒಪ್ಪಿಗೆ ನೀಡಲಾಗಿದೆ.
ಪ್ರಜ್ವಲ್ ವಿರುದ್ಧ ಮತ್ತೆ ಕೇಸ್ ಸಾಧ್ಯ
ಕಿಡ್ನಾಪ್ ಆಗಿದ್ದ ಮಹಿಳೆ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ರೇಪ್ ಮಾಡಿದ ಆರೋಪ ಮಾಡಿದ್ದಾರೆ. ನ್ಯಾಯಾಧೀಶರ ಎದುರು ಸಿಆರ್‌ಪಿಸಿ 164 ಅಡಿಯಲ್ಲಿ ಸಂತ್ರಸ್ತೆ ಹೇಳಿಕೆ ದಾಖಲಿಸಲು ಎಸ್‌ಐಟಿ ಅಧಿಕಾರಿಗಳು ತಯಾರಿ ನಡೆಸಿದ್ದಾರೆ.
ಒಂದು ವೇಳೆ ಸಂತ್ರಸ್ತೆ ಪ್ರಜ್ವಲ್ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆ ಎಂದು ನ್ಯಾಯಾಧೀಶರ ಮುಂದೆ ಹೇಳಿಕೆ ನೀಡಿದರೆ ಇದೇ ವಿಚಾರಕ್ಕೆ ಪ್ರಜ್ವಲ್ ರೇವಣ್ಣ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗುವ ಸಾಧ್ಯತೆ ಇದೆ. ಹೊಸ ಕೇಸ್ ದಾಖಲಾದ್ರೆ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಸಂಕಷ್ಟ ಎದುರಾಗಲಿದೆ. ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎರಡು ಕೇಸ್ ದಾಖಲಾಗಿದೆ. ಈ ಎರಡು ಪ್ರಕರಣಗಳ ಜೊತೆ ಮತ್ತೊಂದು ಕೇಸ್ ದಾಖಲಾಗುವ ಸಾಧ್ಯತೆ ಇದೆ

