ಬೆಂಗಳೂರು: ಇಲ್ಲಿನ ಎಲೆಕ್ಟ್ರಾನಿಕ್ ಸಿಟಿ (Electronic City) ಸಮೀಪದ ಫಾರ್ಮ್ ಹೌಸ್‌ನಲ್ಲಿ ನಡೆದಿದ್ದ ರೇವ್ ಪಾರ್ಟಿ(Rave Party) ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಭಾಗವಹಿಸಿದ್ದ 103 ಮಂದಿಯ ಪೈಕಿ 86 ಮಂದಿಯ ಬ್ಲಡ್ ರಿಪೋರ್ಟ್ (Blood Report) ಪಾಸಿಟಿವ್ (Positive) ಬಂದಿದೆ.
73 ಮಂದಿ ಪುರುಷರಲ್ಲಿ 59 ಮಂದಿ ಹಾಗೂ 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಈ ಮೂಲಕ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ. ತೆಲುಗು ಕಿರುತೆರೆ ನಟಿ ಹೇಮ(ಕೃಷ್ಣವೇಣಿ) (Hema) ಸಹ ಪಾಲ್ಗೊಂಡಿರುವುದು ಬಯಲಾಗಿದೆ. ರಿಪೋರ್ಟ್‌ನಲ್ಲಿ ಈಕೆಯ ಬ್ಲಡ್‌ನಲ್ಲಿ ಮಾದಕ ವಸ್ತು ತೆಗೆದುಕೊಂಡಿರುವುದು ಸಾಬೀತಾಗಿದೆ. ಇದನ್ನೂ ಓದಿ: ಚುಟು ಚುಟು ಬೆಡಗಿ ಆಶಿಕಾ ಮೆಗಾಸ್ಟಾರ್ ಚಿರಂಜೀವಿ ಚಿತ್ರದಲ್ಲಿ
ರೇವ್ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಮಾದಕ ವಸ್ತು ಬಳಕೆ ಮಾಡಿರುವ ಸುಳಿವು ಸಿಕ್ಕಿದೆ. ಎಂಡಿಎಂಎ, ಕೊಕೇನ್, ಹೈಡೋಗಾಂಜಾ ಪತ್ತೆಯಾಗಿದೆ. ಸದ್ಯ ಬ್ಲಡ್ ರಿಪೋರ್ಟ್ ನಲ್ಲಿ ಪಾಸಿಟಿವ್ ಬಂದವರಿಗೆ ಸಿಸಿಬಿ ನೋಟೀಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. . ಇದನ್ನೂ ಓದಿ: ಪೆನ್‌ಡ್ರೈವ್ ಕೇಸ್‌ನಲ್ಲಿ ಸರ್ಕಾರದ ದೇವೇಗೌಡರ ಕುಟುಂಬವನ್ನೇ ಟಾರ್ಗೆಟ್ ಮಾಡ್ತಿದೆ – ನಿಖಿಲ್ ಕಿಡಿ

