By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಶಾಲಿನಿ ರಜನೀಶ್ ಕುರಿತು ಬಿಜೆಪಿಯ ರವಿಕುಮಾರ್ ಅವಹೇಳನಕಾರಿ ಹೇಳಿಕೆ : ರೊಚ್ಚಿಗೆದ್ದ ಕಾಂಗ್ರೆಸ್ಸಿಗರು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಶಾಲಿನಿ ರಜನೀಶ್ ಕುರಿತು ಬಿಜೆಪಿಯ ರವಿಕುಮಾರ್ ಅವಹೇಳನಕಾರಿ ಹೇಳಿಕೆ : ರೊಚ್ಚಿಗೆದ್ದ ಕಾಂಗ್ರೆಸ್ಸಿಗರು
ರಾಜ್ಯ-KarnatakaLatest

ಶಾಲಿನಿ ರಜನೀಶ್ ಕುರಿತು ಬಿಜೆಪಿಯ ರವಿಕುಮಾರ್ ಅವಹೇಳನಕಾರಿ ಹೇಳಿಕೆ : ರೊಚ್ಚಿಗೆದ್ದ ಕಾಂಗ್ರೆಸ್ಸಿಗರು

Ravi Kumar comments on Shalini Rajaneesh

Published July 3, 2025
Share
2 Min Read
SHARE

ಬೆಂಗಳೂರು: ಕರ್ನಾಟಕದ ಬಿಜೆಪಿ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂಸದೀಯ ಪದಗಳನ್ನು ಬಳಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅಸಂಸದೀಯ ಪದ ಬಳಕೆ ಮಾಡಿದ ಆರೋಪ ಮೇಲೆ ಬಿಜೆಪಿ ಪರಿಷತ್ ಸದಸ್ಯ ಎನ್​. ರವಿಕುಮಾರ್ ವಿರುದ್ಧ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್.ಮನೋಹರ್​ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.ಅಲ್ಲದೆ ಎನ್​ ರವಿಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ. ಈ ಘಟನೆ ರಾಜಕೀಯ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಮೂಲಗಳ ಪ್ರಕಾರ ವಿಧಾನಸೌಧದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವಿಧಾನಪರಿಷತ್​ ವಿಪಕ್ಷ ಮುಖ್ಯ ಸಚೇತಕ ಎನ್​ ರವಿಕುಮಾರ್ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು ಎಂದು ಹೇಳಲಾಗಿದೆ. ಅಂದು ರವಿಕುಮಾರ್ ಅವರು, ‘ಶಾಲಿನಿ ರಜನೀಶ್ ಅವರು ರಾತ್ರಿಯಿಡೀ ರಾಜ್ಯ ಸರ್ಕಾರಕ್ಕಾಗಿ ಮತ್ತು ಇಡೀ ದಿನ ಮುಖ್ಯಮಂತ್ರಿಗಾಗಿ ಕೆಲಸ ಮಾಡುತ್ತಾರೆ ಎಂದು ಹೇಳಿದ್ದರು’ ಎನ್ನಲಾಗಿದೆ.

ಮಹಿಳೆಯರನ್ನು ನಿಂದಿಸುವುದೇ ಬಿಜೆಪಿಗರ ಕೆಲಸ: ಲಕ್ಷ್ಮೀ ಹೆಬ್ಬಾಳ್ಕರ್
ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ಆರೋಪ ಹೊತ್ತಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕಿಡಿಕಾರಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕರ್ನಾಟಕದ ಬಿಜೆಪಿ (BJP) ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಓರ್ವ ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್‌ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ. ರವಿಕುಮಾರ್ ( ಅವರು ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನ ಇದಾಗಿದೆ. ರವಿಕುಮಾರ್ ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ.

ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂತಹ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಬಿಜೆಪಿ ನಾಯಕರು ಮಹಿಳೆಯರಿಗೆ ಕೊಡುವ ಗೌರವ ಎಂತಹದ್ದು ಎಂಬುದನ್ನು ತೋರಿಸುತ್ತದೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂತಹ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ಧಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂತಹ ಹೇಳಿಕೆಗಳನ್ನು ನೀಡದೇ ಜವಾಬ್ದಾರಿಯಿಂದ ವರ್ತಿಸಲಿ ಎಂದು ಹೇಳಿದ್ದಾರೆ.

ಸಾರ್ವಜನಿಕವಾಗಿ ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿಕುಮಾರ್ ಅವರು ಕೂಡಲೇ ಕ್ಷಮೆಯಾಚಿಸಬೇಕು. ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳಲಿ, ಇಲ್ಲವಾದರೆ ರವಿಕುಮಾರ್ ಅವರು ಸಾರ್ವಜನಿಕರ ಪ್ರತಿಭಟನೆಯನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

You Might Also Like

ಹೆಣ್ಮಕ್ಳೆ ಸ್ಟ್ರಾಂಗು ಗುರೂ – ಈ ಬಾರಿಯೂ SSLC ಪರೀಕ್ಷೆಯಲ್ಲಿ ಬಾಲಕಿಯರೇ ಮೇಲೂಗೈ

‘ವೋಟ್ ಚೋರಿ’ ವಿರುದ್ಧ ದೆಹಲಿಯ ರಾಮಲೀಲಾ ಮೈದಾನದಲ್ಲಿ ನಾಳೆ ಮಹಾ ರ‍್ಯಾಲಿ

ಸರ್ಕಾರಿ ಬಸ್‌ನಲ್ಲಿ ಬಿಕಿನಿ ತೊಟ್ಟು ಸಂಚರಿಸಿದ ಮಹಿಳೆ

Viral Video : ಕಾಲುವೆಗೆ ಬಿದ್ದಿದ್ದ ಬೃಹತ್ ಹೆಬ್ಬಾವನ್ನು ಬರಿಗೈಯಲ್ಲಿ ಹಿಡಿದು ರಕ್ಷಿಸಿದ ಯುವಕ

ಯಾವುದೇ ಕಾರಣಕ್ಕೂ ಬೇರೆ ಪಕ್ಷದ ಜೊತೆ ಸರ್ಕಾರ ಮಾಡಲ್ಲ: HD ಕುಮಾರಸ್ವಾಮಿ

Share This Article
Facebook Copy Link Print
Previous Article ಮಾಲಿಯಲ್ಲಿ ಮೂವರು ಭಾರತೀಯರ ಅಪಹರಣ
Next Article ಆನ್‍ಲೈನ್ ಗೇಮ್‍ನಲ್ಲಿ 18 ಲಕ್ಷ ಕಳೆದುಕೊಂಡಿದ್ದ ಯುವಕ ಆತ್ಮಹತ್ಯೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up