ಸತತ 10ನೇ ಬಾರಿಗೆ ಯಥಾಸ್ಥಿತಿಯಲ್ಲೇ ಮುಂದುವರೆದ ರೆಪೋ ದರ

ನವದೆಹಲಿ: ಭಾರತೀಯ ರಿಸರ್ವ್‌ ಬ್ಯಾಂಕ್‌ ಸತತ 10ನೇ ಬಾರಿಗೆ ರೆಪೋ ದರವನ್ನು ಯಥಾಸ್ಥಿತಿಯಲ್ಲೇ ಮುಂದುವರಿಸಿದೆ. ಗವರ್ನರ್‌ ಶಕ್ತಿಕಾಂತ ದಾಸ್‌ ನೇತೃತ್ವದಲ್ಲಿ ಬುಧವಾರ (ಅ.9) 6 ಸದಸ್ಯರ ಹಣಕಾಸು ನೀತಿ ಸಮಿತಿ ಸಭೆ ನಡೆಸಿತು. ಸಭೆಯ ಬಳಿಕ ನಿರ್ಧಾರಗಳ ಬಗ್ಗೆ ಮಾಹಿತಿ ನೀಡಿದ ಶಕ್ತಿಕಾಂತ ದಾಸ್‌, 2024-25ನೇ ಸಾಲಿನ ಹಣಕಾಸು ವರ್ಷದಲ್ಲಿ ದೇಶದ ಜಿಡಿಪಿ ಬೆಳವಣಿಗೆಯು 7.2% ರಷ್ಟಾಗುವ ಮುನ್ಸೂಚನೆ ಇದೆ. ರೆಪೋ ದರದಲ್ಲಿ ಯಾವುದೇ ಬದಲಾವಣೆ ತರದೇ 6.5% ನಲ್ಲೇ ಮುಂದುವರಿಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. … Continue reading ಸತತ 10ನೇ ಬಾರಿಗೆ ಯಥಾಸ್ಥಿತಿಯಲ್ಲೇ ಮುಂದುವರೆದ ರೆಪೋ ದರ