ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬ್ಯಾಟಿಂಗ್ ಕೋಚ್ (Batting Coach) ಮತ್ತು ಮೆಂಟರ್ (Mentor) ಆಗಿ ದಿನೇಶ್ ಕಾರ್ತಿಕ್ (Dinesh Karthik) ಆಯ್ಕೆಯಾಗಿದ್ದಾರೆ ಮತ್ತೆ ರಿಎಂಟ್ರಿ ಕೊಟ್ಟಿದ್ದಾರೆ.
ಸದ್ಯ ದಿನೇಶ್ ಕಾರ್ತಿಕ್ ಅವರು ಎಲ್ಲಾ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದರು. ಆದರೆ ಇದೀಗ ಹೊಸ ಜವಾಬ್ದಾರಿಯೊಂದಿಗೆ ಆರ್‌ಸಿಬಿಗೆ ರಿಎಂಟ್ರಿಯಾಗಿದ್ದಾರೆ.
ದಿನೇಶ್ ಕಾರ್ತಿಕ್ ಹೊಸ ಅವತಾರದಲ್ಲಿ ಆರ್‌ಸಿಬಿ ಮರಳಿದ್ದಾರೆ. ಡಿಕೆ ಆರ್‌ಸಿಬಿ ಪುರುಷರ ತಂಡದ ಬ್ಯಾಟಿಂಗ್ ಕೋಚ್ ಮತ್ತು ಮೆಂಟರ್ ಆಗಿರುತ್ತಾರೆ ಎಂದು ಆರ್‌ಸಿಬಿ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ತಿಳಿಸಿದೆ.

ವಿಕೆಟ್‌ಕೀಪರ್ ಬ್ಯಾಟರ್ ಆಗಿರುವ ದಿನೇಶ್ ಕಾರ್ತಿಕ್ ಐಪಿಎಲ್‌ನಲ್ಲಿ (IPL) 257 ಪಂದ್ಯಗಳನ್ನು ಆಡಿದ್ದಾರೆ. 26.32 ಸರಾಸರಿಯಲ್ಲಿ 22 ಅರ್ಧಶತಕಗಳೊಂದಿಗೆ 4,842 ರನ್ ಗಳಿಸಿದ್ದಾರೆ. ಕಾರ್ತಿಕ್ ಆರ್‌ಸಿಬಿ ಹೊರತಾಗಿ ಕೋಲ್ಕತ್ತಾ ನೈಟ್ ರೈಡರ್ಸ್, ಮುಂಬೈ ಇಂಡಿಯನ್ಸ್, ಡೆಲ್ಲಿ ಡೇರ್‌ಡೆವಿಲ್ಸ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡಿದ್ದರು.

