ಬೆಂಗಳೂರು: ರಾಯಲ್ ಚಾಲೆಂರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್‌ಕಿಂಗ್ಸ್ (CSK) ಸೆಣಸಲಿವೆ. ಈ ಪಂದ್ಯ ಆರ್‌ಸಿಬಿಯ ಹೋಂ ಗ್ರೌಂಡ್‌ನಲ್ಲಿ (Chinnaswamy Stadium) ನಡೆಯುತ್ತಿದ್ದು, ಸಂಚಾರ ದಟ್ಟನೆ ಮತ್ತು ಟ್ರಾಫಿಕ್ ಸಮಸ್ಯೆ ನಿವಾರಣೆಗಾಗಿ ಬೆಂಗಳೂರು ಸಂಚಾರ ಪೊಲೀಸರು(Poilce) ಮರ್ಗಸೂಚಿ ಬಿಡುಗಡೆ ಮಾಡಿದ್ದಾರೆ. ಎಲ್ಲೆಲ್ಲಿ ವಾಹನ ನಿಲುಗಡೆಗೆ ನಿಷೇಧವಿದೆ ಮತ್ತು ಎಲ್ಲೆಲ್ಲಿ ವಾಹನ ಸಂಚಾರ ನಿಷೇಧವನ್ನು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಯಿಂದ ರಾತ್ರಿ 11 ಗಂಟೆವರೆಗೆ ಚಿನ್ನಸ್ವಾಮಿ ಕ್ರೀಡಾಂಗಣ (Chinnaswamy Stadium) ಸುತ್ತಮುತ್ತಲಿನ ರಸ್ತೆಗಳಲ್ಲಿ ಪಾರ್ಕಿಂಗ್ (Parking) ನಿಷೆಧೀಸಲಾಗಿದೆ. ಕ್ವೀನ್ಸ್ ರಸ್ತೆ, ಎಂ.ಜಿ.ರಸ್ತೆ, ಕಬ್ಬನ್ ರಸ್ತೆ, ರಾಜಭವನ, ಮ್ಯೂಸಿಯಂ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಸೇಂಟ್ ಮರ್ಕ ರಸ್ತೆ, ಕಸ್ತೂರಿ ಬಾ ರೋಡ್, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ನೃಪತುಂಗ ರಸ್ತೆಗಳಲ್ಲಿ ಪ ನಿಷೇಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಇದನ್ನೂ ಓದಿ: ಆಸ್ತಿ ಮಾರಿದ ಹಣಕ್ಕಾಗಿ ಹೆತ್ತ ತಂದೆಯಿಂದ ಮಗನ ಕೊಲೆ
ಇನ್ನೂ ಪಂದ್ಯ ನೋಡಲು ಬರುವ ಜನರಿಗಾಗಿ ಬೇರೆಡೆ ಪರ‍್ಕಿಂಗ್ ವ್ಯವಸ್ಥೇ ಮಾಡಲಾಗಿದೆ. ಶಿವಾಜಿನಗರ ಬಸ್ ನಿಲ್ದಾಣ ಮೊದಲನೇ ಮಹಡಿ, ಸೇಂಟ್ ಜೋಸೆಫ್ ಇಂಡಿಯನ್ ಸ್ಕೂಲ್ ಮೈದಾನ, ಕಿಂಗ್ಸ್ ರಸ್ತೆಯಲ್ಲಿ ಪರ‍್ಕಿಂಗ್ ವ್ಯವಸ್ಥೆ ಮಾಲಾಗಿದೆ. ಮೈದಾನದ ಸುತ್ತಮುತ್ತ ವಾಹನ ಸಂಚಾರವನ್ನು ನಿಷೇಧಿಸಿದ್ದಾರೆ. ಇದನ್ನೂ ಓದಿ: 10.76 ಲಕ್ಷ ಪ್ರಯಾಣಿಕರಿಗೆ ದಂಡ ಹಾಕಿದ BMRCL – ಬರೋಬ್ಬರಿ 5.38 ಕೋಟಿ ಸಂಗ್ರಹ

ಪಂದ್ಯಕ್ಕಾಗಿ ರ‍್ವ ಹೆಚ್ಚುವರಿ ಪೊಲೀಸ್ ಆಯುಕ್ತ ಸತೀಶ್ ಕುಮಾರ್ ನೇತೃತ್ವದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಮೂವರು ಡಿಸಿಪಿ, 20 ಎಸಿಪಿ, 50 ಇನ್ಸ್ಪೆಕ್ಟರ್ ಸೇರಿದಂತೆ ಒಂದು ಸಾವಿರ ಸಿವಿಲ್ ಪೊಲೀಸರನ್ನು ನಿಯೋಜಿಸಲಾಗಿದೆ. ರ‍್ವ ಟ್ರಾಫಿಕ್ ಜಂಟಿ ಪೊಲೀಸ್ ಆಯುಕ್ತರು, ಇಬ್ಬರು ಟ್ರಾಫಿಕ್ ಡಿಸಿಪಿ, ಸೇರಿ 200 ಟ್ರಾಫಿಕ್ ಪೊಲೀಸರನ್ನು ನಿಯೋಜಿಸಲಾಗಿದೆ. ಸ್ಟೇಡಿಯಂ ಸುತ್ತಮುತ್ತ ಮಫ್ತಿಯಲ್ಲೂ ಪೊಲೀಸರನ್ನು ನಿಯೋಜಿಸಲಾಗಿದೆ.ಇದನ್ನೂ ಓದಿ: ಪ್ರಜ್ವಲ್‍ಗೆ ಅರ್ಧಿಕ ಸಂಕಷ್ಟ ತಂದೊಡ್ಡಲು SIT ನಿರ್ಧಾರ- 7 ಬ್ಯಾಂಕ್ ಅಕೌಂಟ್‍ಗಳ ಫ್ರೀಝ್ ಗೆ ಸಿದ್ದತೆ

