By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಡಾ. ಸಿ.ಜೆ. ರಾಯ್ ಆತ್ಮಹತ್ಯೆ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಜ್ಯ-Karnataka - ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಡಾ. ಸಿ.ಜೆ. ರಾಯ್ ಆತ್ಮಹತ್ಯೆ

ರಾಜ್ಯ-KarnatakaLatest

ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಡಾ. ಸಿ.ಜೆ. ರಾಯ್ ಆತ್ಮಹತ್ಯೆ

real estate businessman, Confident Group Chairman Dr. C.J. Roy commits suicide

Published January 30, 2026
Share
2 Min Read
CJ Roy CJ Roy CJ Roy
SHARE

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ ಹಾಗೂ ಕಾನ್ಫಿಡೆಂಟ್ ಗ್ರೂಪ್ (Confident Group) ಚೇರ್ಮನ್ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಸಂಜೆ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್‌ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ಸಂಚಲನ ಮೂಡಿಸಿದೆ.

ಕೇರಳ ಮೂಲದ ಡಾ. ಸಿ.ಜೆ. ರಾಯ್ ಅವರು ಪ್ರಮುಖ ರಿಯಲ್ ಎಸ್ಟೇಟ್ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಂಸ್ಥೆಯಾದ ಕಾನ್ಫಿಡೆಂಟ್ ಗ್ರೂಪ್‌ನ ಸಂಸ್ಥಾಪಕರಾಗಿದ್ದರು. ಇಂದು ಸಂಜೆ ಆನೇಪಾಳ್ಯದಲ್ಲಿರುವ ತಮ್ಮ ಕಚೇರಿಯಲ್ಲಿ ಈ ದುರ್ಘಟನೆ ನಡೆದಿದ್ದು, ಮಾಹಿತಿ ದೊರೆಯುತ್ತಿದ್ದಂತೆ ಅಶೋಕನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಆದಾಯ ತೆರಿಗೆ ಇಲಾಖೆಯ ಪದೇಪದೇ ದಾಳಿಗಳಿಂದ ಮನೋವೈಕಲ್ಯಗೊಂಡು ಈ ನಿರ್ಧಾರ ಕೈಗೊಂಡಿರಬಹುದೆಂದು ಶಂಕಿಸಲಾಗಿದೆ. ನಗರದಲ್ಲಿ ಇವರ ಹೆಸರಿನಲ್ಲಿ ಹಲವು ದೊಡ್ಡ ಹೋಟೆಲ್‌ಗಳು ಹಾಗೂ ರೆಸಾರ್ಟ್‌ಗಳು ಕಾರ್ಯನಿರ್ವಹಿಸುತ್ತಿದ್ದು, ಈ ಘಟನೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಮೃತ ಉದ್ಯಮಿಗೆ ಪತ್ನಿ ಲಿನಿ ರಾಯ್ ಹಾಗೂ ರೋಹಿತ್ ಮತ್ತು ರಿಯಾ ಎಂಬ ಇಬ್ಬರು ಮಕ್ಕಳು ಇದ್ದಾರೆ. ಪುತ್ರ ರೋಹಿತ್ ಅವರು ಕಾನ್ಫಿಡೆಂಟ್ ಗ್ರೂಪ್‌ನ ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ವಿನ್ಯಾಸ ವಿಭಾಗವನ್ನು ನಿರ್ವಹಿಸುತ್ತಿದ್ದಾರೆ.

2005ರಲ್ಲಿ ಸ್ಥಾಪನೆಯಾದ ಕಾನ್ಫಿಡೆಂಟ್ ಗ್ರೂಪ್ ಇದುವರೆಗೆ 65ಕ್ಕೂ ಹೆಚ್ಚು ಐಷಾರಾಮಿ ಯೋಜನೆಗಳನ್ನು ಪೂರ್ಣಗೊಳಿಸಿದೆ. ವಸತಿ ಅಪಾರ್ಟ್‌ಮೆಂಟ್‌ಗಳು, ವಿಲ್ಲಾಗಳು, ವಾಣಿಜ್ಯ ಸಂಕೀರ್ಣಗಳು, ಶಿಕ್ಷಣ, ಆತಿಥ್ಯ ಮತ್ತು ಮನರಂಜನಾ ಕ್ಷೇತ್ರಗಳಲ್ಲಿ ಸಂಸ್ಥೆ ತನ್ನ ಗುರುತು ಮೂಡಿಸಿದೆ.

ಡಾ. ಸಿ.ಜೆ. ರಾಯ್ ಅವರು ಸ್ವಿಟ್ಜರ್‌ಲ್ಯಾಂಡ್‌ನ SBS ಬಿಸಿನೆಸ್ ಸ್ಕೂಲ್‌ನಿಂದ ಬಿಸಿನೆಸ್ ಅಡ್ಮಿನಿಸ್ಟ್ರೇಷನ್‌ನಲ್ಲಿ ಡಾಕ್ಟರೇಟ್ ಪಡೆದಿದ್ದರು. ಕೇರಳ ಮತ್ತು ಬೆಂಗಳೂರು ಮಾತ್ರವಲ್ಲದೆ ದುಬೈ ಮಾರುಕಟ್ಟೆಯಲ್ಲಿಯೂ ತಮ್ಮ ವ್ಯವಹಾರ ವಿಸ್ತರಿಸಿದ್ದರು.

ಭಾರತದ ಶ್ರೀಮಂತ ಉದ್ಯಮಿಗಳಲ್ಲಿ ಒಬ್ಬರಾಗಿದ್ದ ರಾಯ್ ಅವರು ಸ್ಲೋವಾಕ್ ಗಣರಾಜ್ಯದ ಗೌರವ ಕಾನ್ಸಲ್ ಆಗಿಯೂ ಕರ್ನಾಟಕ ಮತ್ತು ಕೇರಳದಲ್ಲಿ ಸೇವೆ ಸಲ್ಲಿಸಿದ್ದರು. ಕಾರುಗಳ ಮೇಲೆ ಅಪಾರ ಆಸಕ್ತಿ ಹೊಂದಿದ್ದ ಅವರು, ಭಾರತ ಹಾಗೂ ದುಬೈನಲ್ಲಿ ಹಲವು ದುಬಾರಿ ಐಷಾರಾಮಿ ಮತ್ತು ಸ್ಪೋರ್ಟ್ಸ್ ಕಾರುಗಳನ್ನು ಹೊಂದಿದ್ದರು.

ಕಾನ್ಫಿಡೆಂಟ್ ಗ್ರೂಪ್ ಇದುವರೆಗೆ 165 ಯೋಜನೆಗಳನ್ನು ಪೂರ್ಣಗೊಳಿಸಿದ್ದು, 43 ಮಿಲಿಯನ್ ಚದರ ಅಡಿಗಳಿಗಿಂತ ಹೆಚ್ಚು ವಿಸ್ತೀರ್ಣವನ್ನು ಅಭಿವೃದ್ಧಿಪಡಿಸಿದೆ. 15,000ಕ್ಕೂ ಅಧಿಕ ಗ್ರಾಹಕರನ್ನು ಹೊಂದಿರುವ ಈ ಸಂಸ್ಥೆ ರಿಯಲ್ ಎಸ್ಟೇಟ್ ಜೊತೆಗೆ ಮನರಂಜನೆ, ಶಿಕ್ಷಣ, ಆತಿಥ್ಯ, ಗಲ್ಫ್, ಚಿಲ್ಲರೆ ವ್ಯಾಪಾರ ಹಾಗೂ ಅಂತರರಾಷ್ಟ್ರೀಯ ವ್ಯಾಪಾರ ಕ್ಷೇತ್ರಗಳಲ್ಲಿಯೂ ತನ್ನ ವ್ಯವಹಾರ ವಿಸ್ತರಿಸಿದೆ. ಡಾ. ಸಿ.ಜೆ. ರಾಯ್ ಅವರ ಅಕಾಲಿಕ ನಿಧನವು ಉದ್ಯಮ ವಲಯದಲ್ಲಿ ತೀವ್ರ ಆಘಾತ ಉಂಟುಮಾಡಿದೆ.

You Might Also Like

ಇಬ್ಬರು ಐಎಎಸ್‌ ಅಧಿಕಾರಿಗಳ ವರ್ಗಾವಣೆ ಮಾಡಿ ಸರ್ಕಾರ ಆದೇಶ

ಬಾವಿಯಲ್ಲಿ ಪೊಲೀಸ್ ಕಾನ್ಸ್​ಟೇಬಲ್ ಶವ ಪತ್ತೆ – ಆತ್ಮಹತ್ಯೆ ಶಂಕೆ

MANGALURU : ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಮೂವರು ಆರೋಪಿಗಳು ವಶಕ್ಕೆ

ಜೈಲಿನಲ್ಲಿ 4.5 ಕೆ.ಜಿ ತೂಕ ಕಳೆದುಕೊಂಡ ದೆಹಲಿ ಸಿಎಂ -ಅರವಿಂದ್ ಕೇಜ್ರಿವಾಲ್‌ಗೆ ಅನಾರೋಗ್ಯ

ದರ್ಶನ್‌ ಪ್ರಕರಣ: ಹಣೆಬರಹದಲ್ಲಿ ಏನಿದೆಯೋ ಅದೇ ಆಗುತ್ತೆ- ಶಿವಣ್ಣ

TAGGED:CJ RoyConfident Group
Share This Article
Facebook Copy Link Print
Previous Article Gold And Siver Price Gold And Siver Price Gold And Siver Price ಕಂಗಾಲಾಗಿದ್ದ ಆಭರಣ ಪ್ರಿಯರಿಗೆ ಗುಡ್ ನ್ಯೂಸ್, ಬೆಳ್ಳಿ-ಬಂಗಾರದ ಬೆಲೆಯಲ್ಲಿ ಇಳಿಕೆ
Next Article CJ Roy Suicide CJ Roy Suicide CJ Roy Suicide ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ ತನಿಖೆಗೆ ವಿಶೇಷ ತನಿಖಾ ತಂಡ ರಚನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

sdggdgdgdg sdggdgdgdg sdggdgdgdg
ನಟಿ ಕೃತಿ ಗೌಡ ಜೊತೆ ದಾಂಪತ್ಯಕ್ಕೆ ಕಾಲಿಡಲು ಸಜ್ಜಾದ ‘ಗಿಚ್ಚಿ ಗಿಲಿ ಗಿಲಿ’ ಖ್ಯಾತಿಯ ಪ್ರಶಾಂತ್ ಗೌಡ
Entertainment
April 21, 2026
Heatwave - Weather
ರಾಜ್ಯದಲ್ಲಿ ಈ ವಾರ ಭಾರಿ ಬಿಸಿಲು, ತಾಪಮಾನ 45 ಡಿಗ್ರಿ ಸೆಲ್ಸಿಯಸ್​ಗೆ ಏರುವ ಸಾಧ್ಯತೆ
ರಾಜ್ಯ-Karnataka
April 21, 2026
John Ternus John Ternus John Ternus
ಸೆಪ್ಟೆಂಬರ್‌ನಲ್ಲಿ ಟಿಮ್ ಕುಕ್ ನಿವೃತ್ತಿ, ಆ್ಯಪಲ್ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ
ವಿದೇಶ-International
April 21, 2026
census census census
ರಾಜ್ಯದಲ್ಲಿ ಇಂದಿನಿಂದ ಜನಗಣತಿ ಆರಂಭ
ರಾಜ್ಯ-Karnataka
April 19, 2026
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up