ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ (yediyurappa) ರಿಲೀಫ್ ಸಿಕ್ಕಿದೆ. ಮುಂದಿನ ವಿಚಾರಣೆ ತನಕ ಯಡಿಯೂರಪ್ಪ ವಿರುದ್ಧ ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದು ಹೈಕೋರ್ಟ್ (Highcourt) ಸೂಚಿಸಿದೆ.
ಒತ್ತಾಯದ ಕ್ರಮ ಕೈಗೊಳ್ಳುವಂತಿಲ್ಲ ಎಂದಿರುವ ನ್ಯಾಯಾಲಯ, ಜೂನ್ 17 ರಂದು ಯಡಿಯೂರಪ್ಪ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚನೆ ನೀಡಿದೆ. ಇದನ್ನೂ ಓದಿ: ಚುನಾವನೆಯ ಸೋಲುಂಡ ಕಾಂಗ್ರೆಸ್ ಬಿಸ್‌ವೈ ವಿರುದ್ಧ ರಾಜಕೀಯ ವೈಶಮ್ಯ ಸಾಗಿಸುತ್ತಿದ್ದಾರೆ : ಜೋಶಿ ಕಿಡಿ
ಪ್ರಕರಣವೇನು?
ಬಿಎಸ್ ಯಡಿಯೂರಪ್ಪ ಅವರು ತಮ್ಮ ಅಪ್ರಾಪ್ತ ಪುತ್ರಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಮಹಿಳೆಯೊಬ್ಬರು ಮಾರ್ಚ್ ತಿಂಗಳಲ್ಲಿ ದೂರು ನೀಡಿದ್ದರು. ಆದರೆ ಅವರು ಕಳೆದ ತಿಂಗಳು ಅನ್ಯಾರೋಗ್ಯದಿಂದ ದೂರುದಾರೆ ಮೃತಪಟ್ಟಿದ್ದಾರೆ. ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದರು. ಯಡಿಯೂರಪ್ಪ ಅವರು ಸೋಮವಾರ ಜೂನ್ 17 ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ರಕ್ಷಣೆಗಾಗಿ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿಸಿಕೊಂಡಿದ್ದಾರೆ: ಡಿಸಿಎಂ

