ಮಂಡ್ಯ : ಮನೆಯಲ್ಲಿ ನಡೆದ ಗಲಾಟೆಯಿಂದ ಮನನೊಂದು 19 ವರ್ಷದ ಯುವತಿಯೊಬ್ಬಳು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರದ ಬಳಿ ಕಾವೇರಿ ನದಿಯಲ್ಲಿ ನಡೆದಿದೆ. ಇನ್ನು ಸ್ಥಳೀಯರ ಸಹಾಯದೊಂದಿಗೆ ಅಗ್ನಿಶಾಮಕ ದಳದ ಸಿಬ್ಬಂದಿ ಈ ಯುವತಿಯನ್ನು ರಕ್ಷಣೆ ಮಾಡಿ ಶ್ರೀರಂಗಪಟ್ಟಣ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ದಾರೆ.

