By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬೀದರ್​​​​​​​​​ನಲ್ಲಿ ಸಿನಿಮಾ ಸ್ಟೈಲ್ ದರೋಡೆ : ಎಟಿಎಂಗೆ ಹಣದ ವಾಹನದ ಮೇಲೆ ಗುಂಡಿನ ದಾಳಿ ನಡೆಸಿ ಲೂಟಿ, ಸಿಬ್ಬಂದಿ ಸಾವು
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಬೀದರ್​-Bidar > ಬೀದರ್​​​​​​​​​ನಲ್ಲಿ ಸಿನಿಮಾ ಸ್ಟೈಲ್ ದರೋಡೆ : ಎಟಿಎಂಗೆ ಹಣದ ವಾಹನದ ಮೇಲೆ ಗುಂಡಿನ ದಾಳಿ ನಡೆಸಿ ಲೂಟಿ, ಸಿಬ್ಬಂದಿ ಸಾವು
BlogLatestMain PostTop Storiesಬೀದರ್​-Bidarರಾಜ್ಯ-Karnataka

ಬೀದರ್​​​​​​​​​ನಲ್ಲಿ ಸಿನಿಮಾ ಸ್ಟೈಲ್ ದರೋಡೆ : ಎಟಿಎಂಗೆ ಹಣದ ವಾಹನದ ಮೇಲೆ ಗುಂಡಿನ ದಾಳಿ ನಡೆಸಿ ಲೂಟಿ, ಸಿಬ್ಬಂದಿ ಸಾವು

Robbers shoot dead two security guards, steal Rs 93 lakh from ATM in Karnataka

Published January 16, 2025
Share
2 Min Read
Robbers shoot dead two security guards, steal Rs 93 lakh from ATM in Karnataka
SHARE

ಬೀದರ್: ಕರ್ನಾಟಕದಲ್ಲಿ ಗುರುವಾರ ರಾಜ್ಯವೇ ಬೆಚ್ಚಿ ಬೀಳುವ ಎಟಿಎಂ ದರೋಡೆ ಪ್ರಕರಣ ಬೀದರ್‌ ಜಿಲ್ಲೆಯಲ್ಲಿ ನಡೆದಿದೆ. ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಎಟಿಎಂಗೆ ಹಾಕಲು ಸಾಗಿಸುತ್ತಿದ್ದ ಹಣವನ್ನು ಸಿನಿಮಾ ಶೈಲಿಯಲ್ಲಿ ಲೂಟಿ ಮಾಡಿ ಪರಾರಿಯಾದ ಘಟನೆ ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ‌ ನಡೆದಿದೆ. ಈ ವೇಳೆ ಎಸ್​ಬಿಐ ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ಮೇಲೆ ಖಾರದ ಪುಡಿ ಎರಚಿ, ಗುಂಡು ಹಾರಿಸಿದ್ದರಿಂದ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದರೆ, ಇನ್ನೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಬೆಳಿಗ್ಗೆ 11.30 ಕ್ಕೆ ಜನನಿಬಿಡ ಶಿವಾಜಿ ಚೌಕ್‌ನಲ್ಲಿರುವ ಎಸ್​ಬಿಐ ಬ್ಯಾಂಕ್ ಎಟಿಎಂಗೆ ಹಣವನ್ನು ತುಂಬಿಸಲು ಭದ್ರತಾ​ ಸಿಬ್ಬಂದಿ CMS ಏಜೆನ್ಸಿಯ ವಾಹನದಲ್ಲಿ ಲಕ್ಷಾಂತರ ಹಣವನ್ನು ತೆಗೆದುಕೊಂಡು ಬಂದಿದ್ದರು. ಇನ್ನೇನು ಎಟಿಎಂಗೆ ಹಣ ಹಾಕಬೇಕು ಎನ್ನುವಷ್ಟರಲ್ಲಿ ಸ್ಥಳಕ್ಕೆ ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು, ಏಕಾಏಕಿ ಎಂಟು ಸುತ್ತಿನ ಗುಂಡಿನ ದಾಳಿ ನಡೆಸಿದ್ದಾರೆ. ಪರಿಣಾಮ ಓರ್ವ ಸಿಬ್ಬಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದರೆ, ಮತ್ತೋರ್ವ ಸಿಬ್ಬಂದಿಯನ್ನು ಹೈದರಾಬಾದ್ ಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ದುಷ್ಕರ್ಮಿಗಳ ದಾಳಿಗೆ ಬಲಿಯಾದ ವ್ಯಕ್ತಿಯನ್ನು ಗಿರಿ ವೆಂಕಟೇಶ್ (ಎಟಿಎಂಗಳಿಗೆ ಹಣ ಹಾಕುವ ಸಿಎಂಎಸ್ ಏಜೆನ್ಸಿಯ ಸಿಬ್ಬಂದಿ) ಎಂದು ಗುರುತಿಸಲಾಗಿದೆ.

ಖರೀಮರು 93 ಲಕ್ಷ ರೂ. ಇದ್ದ ಹಣದ ಪೆಟ್ಟಿಗೆಯನ್ನು ತೆಗೆದುಕೊಂಡು ಹೋಗುತ್ತಿರುವ ದೃಶ್ಯ ಸ್ಥಳೀಯರ ಫೋನ್​ನಲ್ಲಿ ಸೆರೆಯಾಗಿದೆ. ಬೀದರ್‌ನ ಎಸ್‌ಬಿಐ ಮುಖ್ಯ ಕಚೇರಿ‌ ಮುಂದೆ ಗುಂಡಿನ ದಾಳಿ ನಡೆದಿದ್ದು, ಬ್ಯಾಂಕ್‌ ಕಚೇರಿಯ ಮುಂದೆಯೇ ಮೃತದೇಹ ಬಿದ್ದಿದೆ. ಸ್ಥಳಕ್ಕೆ ಬೀದರ್ ಎಸ್‌ಪಿ ಪ್ರದೀಪ್ ಗುಂಟಿ ಹಾಗೂ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಹಾಗೂ ಶ್ವಾನ ದಳದ‌‌ ಆಗಮಿಸಿದ್ದು, ಪೊಲೀಸರು ಪ್ರತಿಯೊಂದನ್ನು ಪರಿಶೀಲನೆ ಮಾಡುತ್ತಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಪಕ್ಕದಲ್ಲೇ ಇರುವ ಎಸ್‌ಬಿಐ ಬ್ಯಾಂಕ್‌ನ ಎದುರು ಈ ಘಟನೆ ನಡೆದಿದೆ. ಎಟಿಎಂಗೆ ಹಣ ಹಾಕುವ ಪಿಸಿಎಸ್‌ ಏಜೆನ್ಸಿಯ ಸಿಬ್ಬಂದಿ ಬ್ಯಾಂಕ್‌ನ ಎದುರುಗಡೆ ಬಂದು ತಮ್ಮ ವಾಹನ ನಿಲ್ಲಿಸಿ, ಎಟಿಎಂ ಹಣ ತುಂಬಲು ವಾಹನದ ಡೋರ್‌ ತೆಗೆಯುತ್ತಿದ್ದಂತೆ ಅವರ ಮೇಲೆ ಐದು ಸುತ್ತು ಗುಂಡಿನ ದಾಳಿಯಾಗಿದೆ.ಈ ವೇಳೆ ಸಿಬ್ಬಂದಿಯ ಕಣ್ಣಿಗೆ ಖಾರದ ಪುಡಿಯನ್ನೂ ಎರಚಲಾಗಿದೆ. ದಾಳಿ ನಡೆದ ಬಳಿಕ ಹಣದ ಬಾಕ್ಸ್ ತೆಗೆದುಕೊಂಡು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಗೊಂಡಿರುವ ಇನ್ನೊಬ್ಬ ಸಿಬ್ಬಂದಿಯ ಸ್ಥಿತಿ ಕೂಡ ಗಂಭೀರವಾಗಿದೆ.

ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಹೇಳಿದ್ದೇನು..?
ಘಟನೆಗೆ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಪ್ರದೀಪ ಗುಂಟೆ, ಇಂದು ಬೆಳಗ್ಗೆ ಸುಮಾರು 10:30 ಗಂಟೆಗೆ ಎಸ್‌ಬಿಐ ಬ್ಯಾಂಕಿನಿಂದ ಹಣ ತೆಗೆದುಕೊಂಡು ಎಟಿಎಂಗೆ ಹಾಕಲು ಸೆಕ್ಯೂರಿಟಿ ಏಜೆನ್ಸಿ ಸಿಬ್ಬಂದಿ ತೆರಳುತ್ತಿದ್ದರು. ಈ ವೇಳೆ, ಬೈಕಿನಲ್ಲಿ ಬಂದ ಇಬ್ಬರು ವ್ಯಕ್ತಿಗಳು, ಅವರ ಮೇಲೆ ಗನ್​ ಫೈರ್ ಮಾಡಿದ್ದಾರೆ. ಘಟನೆಯಲ್ಲಿ ಓರ್ವ ಮೃತಪಟ್ಟರೆ, ಮತ್ತೋರ್ವ ಗಾಯಗೊಂಡಿದ್ದಾರೆ. ಭಾರಿ ಮೊತ್ತದೊಂದಿಗೆ ದುಷ್ಕರ್ಮಿಗಳು ಪರಾರಿಯಾಗಿದ್ದು, ಅವರಿಗಾಗಿ ಶೋಧ ನಡೆದಿದೆ. ಎಷ್ಟು ಹಣ ಎಂಬುದನ್ನು ಬ್ಯಾಂಕ್​ ಅಧಿಕಾರಿಗಳು ಮಾಹಿತಿ ನೀಡಲಿದ್ದಾರೆ.

You Might Also Like

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಇಸ್ರೋ ಅಧ್ಯಕ್ಷ ವಿ.ನಾರಾಯಣ

ನಟ ದರ್ಶನ್‌ ಭೇಟೆಗೆ ಜೈಲಿನಲ್ಲಿ ಅವಕಾಶವಿಲ್ಲ

ಸವತೇಕಾಯಿ ತಿನ್ನುವ ವಿಚಾರಕ್ಕೆ ತಂಗಿಯನ್ನೇ ಕೊಂದ ಅಣ್ಣ

ಕಬ್ಬನ್ ಪಾರ್ಕ್‌ನಲ್ಲಿ ಫಲಪುಷ್ಪ ಪ್ರದರ್ಶನಕ್ಕೆ ಚಾಲನೆ

ಡಿಕೆ ಶಿವಕುಮಾರ್ ಆರ್‌ಎಸ್‌ಎಸ್ ಪ್ರಾರ್ಥನೆ ಹಾಡಿದ್ದು ತಪ್ಪು, ಕ್ಷಮೆ ಕೇಳಬೇಕು : ಬಿಕೆ ಹರಿಪ್ರಸಾದ್

TAGGED:ATM RobberyBidarRobbers
Share This Article
Facebook Copy Link Print
Previous Article Deve Gowda's close aide, former MLA Patel Shivaram passes away ದೇವೇಗೌಡರ ಆಪ್ತ, ಮಾಜಿ ವಿಧಾನ ಪರಿಷತ್ ಸದಸ್ಯ ಪಟೇಲ್ ಶಿವರಾಂ ವಿಧಿವಶ
Next Article RBI 200 Notes 200 ರೂ. ಮುಖಬೆಲೆಯ ನೋಟು ಬ್ಯಾನ್ ಕುರಿತು ಹರಿದಾಡಿದ ಸುದ್ದಿ, ಆರ್‌ಬಿಐ ಸ್ಪಷ್ಟನೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up