ಮಂಗಳೂರು : ಕನ್ನಡ ಚಿತ್ರರಂಗದ ರಾಕಿಂಗ್ ಕಪಲ್ ಯಶ್ ಮತ್ತು ರಾಧಿಕಾ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ. ಉಜಿರೆಯ ನಡ ಗ್ರಾಮದ ಮಣ್ಣಿನ ಹರಕೆ ಖ್ಯಾತಿಯ ಕರಾವಳಿಯ ಪುಣ್ಯಕ್ಷೇತ್ರ ಸೂರ್ಯ ಶ್ರೀ ಸದಾಶಿವ ರುದ್ರ ದೇವಸ್ಥಾನದಲ್ಲಿ ಹರಕೆ ತೀರಿಸಿದ್ದಾರೆ.

ಟಾಕ್ಸಿಕ್ ಚಲನಚಿತ್ರದ ಡೈರೆಕ್ಟರ್ ವೆಂಕಟ್ ಜೊತೆಯಲ್ಲಿ ಭೇಟಿ ನೀಡಿದ್ದು ಪತ್ನಿ ನಟಿ ರಾಧಿಕಾ ಮಕ್ಕಳೂ ಜೊತೆಗಿದ್ದರು. ಮಣ್ಣಿನ ರೀಲ್ ಮತ್ತು ಕುಟುಂಬದ ಮಣ್ಣಿನ ಹರಕೆ ತೀರಿಸಿದ ಯಶ್ ಅಲ್ಲಿ ಪ್ರಾರ್ಥನೆ ಮಾಡಿದರು. ಈ ವೇಳೆ ‘ಟಾಕ್ಸಿಕ್’ ಸಿನಿಮಾ ನಿರ್ದೇಶಕ ವೆಂಕಟ್ ಜೊತೆಯಲ್ಲಿದ್ದರು. ದೇವರಿಗೆ ವಿಶೇಷ ಪೂಜೆ ಸಲ್ಲಿಸಿದ ನಂತರ ಸಿನಿಮಾದ ಯಶಸ್ಸಿಗೆ ಫಿಲ್ಮ್ ರೀಲ್‌ನ ಮಣ್ಣಿನ ಪ್ರತಿಕೃತಿ ಮತ್ತು ಆರೋಗ್ಯ ಸಮಸ್ಯೆಗೆ ಕುಟುಂಬದ ಮಣ್ಣಿನ ಪ್ರತಿಕೃತಿಯನ್ನು ಹರಕೆಯಾಗಿ ತೀರಿಸಿದರು ಎಂಬ ಮಾಹಿತಿ ಲಭ್ಯವಾಗಿದೆ.
ಬಳಿಕ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಯಶ್ ಕುಟುಂಬ ಸಮೇತ ಭೇಟಿ ನೀಡಿ ಮಂಜುನಾಥನ ದರ್ಶನ ಪಡೆದರು. ಟಾಕ್ಸಿಕ್ ಸಿನಿಮಾದ ಶೂಟಿಂಗ್ ಶುರುವಾಗುವ ಮುನ್ನ ರಾಕಿಂಗ್ ಸ್ಟಾರ್ ನಟ ಯಶ್ ಅವರು ಮಂಜುನಾಥನ ದರ್ಶನಕ್ಕೆ ಹೊರಟಿದ್ದಾರೆ. ಅವರು ದೇವರ ದರ್ಶನ ಪಡೆಯುತ್ತಿದ್ದಾರೆ.
ಕೆಲವು ದಿನಗಳಿಂದ ಹೊಸ ಲುಕ್‌ನಲ್ಲಿ ಮಿಂಚುತ್ತಿರುವ ಯಶ್ ಕ್ರೀಂ ಕಲರ್ ಪಂಚೆ ಹಾಗೂ ಶರ್ಟ್ ಧರಿಸಿ ಸಾಂಪ್ರದಾಯಿಕ ನೋಟದಲ್ಲಿ ಕಾಣಿಸಿಕೊಂಡರು. ನಟನನ್ನು ನೋಡುತ್ತಿದ್ದಂತೆ ಅಭಿಮಾನಿಗಳು ಸೆಲ್ಫಿ ಕ್ಲಿಕ್ಕಿಸಿಕೊಳ್ಳಲು ಮುಂದಾದರು.

