ಹಾಸನ: ನಗರದ ಚನ್ನಪಟ್ಟಣ ಬಡಾವಣೆಯಲ್ಲಿ ಬುಧವಾರ ರಾತ್ರಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರ ಹತ್ಯೆ ಮಾಡಲಾಗಿದೆ. ರಖಿನಾ ಆಲಿಯಾಸ್ ಗುಂಡ (34) ಕೊಲೆಯಾದ ರೌಡಿಶೀಟರ್.
ರಾತ್ರಿ ಆಟೋದಲ್ಲಿ ಕುಳಿತು ಸ್ನೇಹಿತರೊಂದಿಗೆ ಮದ್ಯ ಸೇವಿಸಿದ್ದ ರಖಿತಾ ನಂತರ ಕುಡಿದ ಮತ್ತಿನಲ್ಲಿ ಸ್ನೇಹಿತರೊಂದಿಗೆ ಜಗಳ ಮಾಡಿಕೊಂಡಿದ್ದ. ಆ ನಂತರ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆ.
ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಘಟನೆಯಿಂದ ಚನ್ನಪಟ್ಟಣ ನಿವಾಸಿಗಳು ಭಯ ಭೀತರಾಗಿದ್ದಾರೆ.

