By using this site, you agree to the Privacy Policy and Terms of Use.
Accept
Sampoorna NewsSampoorna NewsSampoorna News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಬಿಜೆಪಿ ಸರ್ಕಾರ ಬಂದರೆ ಶಬರಿಮಲೆ ಚಿನ್ನ ಕಳವು ತನಿಖೆ: ಮೋದಿ ಗ್ಯಾರಂಟಿ
Share
Font ResizerAa
Font ResizerAa
Sampoorna NewsSampoorna News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.

Home - ರಾಷ್ಟ್ರೀಯ-National - ಬಿಜೆಪಿ ಸರ್ಕಾರ ಬಂದರೆ ಶಬರಿಮಲೆ ಚಿನ್ನ ಕಳವು ತನಿಖೆ: ಮೋದಿ ಗ್ಯಾರಂಟಿ

ರಾಷ್ಟ್ರೀಯ-NationalLatest

ಬಿಜೆಪಿ ಸರ್ಕಾರ ಬಂದರೆ ಶಬರಿಮಲೆ ಚಿನ್ನ ಕಳವು ತನಿಖೆ: ಮೋದಿ ಗ್ಯಾರಂಟಿ

'Sabrimala Gold Loss Probe Is Modi's Guarantee If BJP Wins': PM In Kerala

Published January 23, 2026
Share
2 Min Read
PM Modi PM Modi PM Modi
SHARE

ತಿರುವನಂತಪುರಂ :ಕೇರಳದಲ್ಲಿ ಬಿಜೆಪಿ ಸರ್ಕಾರ ರಚನೆಯಾದರೆ ಶಬರಿಮಲೆ ದೇವಸ್ಥಾನದ ಚಿನ್ನ ಕಳವು ಪ್ರಕರಣದ ಸಮಗ್ರ ತನಿಖೆ ನಡೆಸಲಾಗುವುದು. ಇದು ಮೋದಿಯ ಗ್ಯಾರಂಟಿ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದರು.

ಚುನಾವಣಾ ದಿನಾಂಕ ಪ್ರಕಟವಾಗುವ ಮೊದಲೇ ಕೇರಳದಲ್ಲಿ ಬಿಜೆಪಿ ಪರ ಪ್ರಚಾರಕ್ಕೆ ಇಳಿದಿರುವ ಪ್ರಧಾನಿ ಮೋದಿ, ಇಂದು ತಿರುವನಂತಪುರದಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್‌ಡಿಎಫ್ ಮತ್ತು ಯುಡಿಎಫ್ ಮೈತ್ರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ತಿರುವನಂತಪುರ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ರಾಜ್ಯದ ಜನರು ಬದಲಾವಣೆ ಬಯಸುತ್ತಿದ್ದಾರೆ ಎಂಬುದಕ್ಕೆ ಸ್ಪಷ್ಟ ಉದಾಹರಣೆ ಎಂದು ಮೋದಿ ಹೇಳಿದರು. ಕೇರಳದಲ್ಲಿ ಬದಲಾವಣೆ ಅನಿವಾರ್ಯವಾಗಿದ್ದು, ಎಡಪಂಥೀಯ ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್ ಮತ್ತು ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ರಾಜ್ಯವನ್ನು ಭ್ರಷ್ಟಾಚಾರ ಹಾಗೂ ತುಷ್ಟೀಕರಣದ ರಾಜಕೀಯದ ಕಡೆಗೆ ತಳ್ಳಿವೆ ಎಂದು ಆರೋಪಿಸಿದರು.

ಎಲ್‌ಡಿಎಫ್ ಮತ್ತು ಯುಡಿಎಫ್ ಧ್ವಜಗಳು ಹಾಗೂ ಚಿಹ್ನೆಗಳು ವಿಭಿನ್ನವಾಗಿದ್ದರೂ, ಅವರ ರಾಜಕೀಯ ಹಾಗೂ ಕಾರ್ಯಸೂಚಿಗಳು ಬಹುತೇಕ ಒಂದೇ ಆಗಿವೆ ಎಂದು ಟೀಕಿಸಿದರು. ದಶಕಗಳ ಕಾಲ ಈ ಎರಡೂ ಮೈತ್ರಿಗಳು ತಿರುವನಂತಪುರವನ್ನು ನಿರ್ಲಕ್ಷಿಸಿ, ನಗರವನ್ನು ಮೂಲಭೂತ ಸೌಕರ್ಯಗಳಿಂದ ವಂಚಿತಗೊಳಿಸಿದ್ದವು. ಜನರ ಅಗತ್ಯಗಳನ್ನು ಪೂರೈಸುವಲ್ಲಿ ಎಡಪಂಥೀಯರು ಮತ್ತು ಕಾಂಗ್ರೆಸ್ ನಿರಂತರವಾಗಿ ವಿಫಲವಾಗಿವೆ ಎಂದು ಹೇಳಿದರು. ಆದರೆ ಈಗ ನಮ್ಮ ತಂಡ ಅಭಿವೃದ್ಧಿ ಹೊಂದಿದ ತಿರುವನಂತಪುರಂ ನಿರ್ಮಾಣದತ್ತ ಕೆಲಸ ಆರಂಭಿಸಿದೆ ಎಂದು ಹೇಳಿದರು.

ತಿರುವನಂತಪುರಂ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯ ಗೆಲುವು ಐತಿಹಾಸಿಕವಾಗಿದ್ದು, ಇದು ಉತ್ತಮ ಆಡಳಿತ ಮತ್ತು ಅಭಿವೃದ್ಧಿ ಹೊಂದಿದ ಕೇರಳದ ಸಂಕಲ್ಪದ ಗೆಲುವು ಎಂದು ಮೋದಿ ಬಣ್ಣಿಸಿದರು. ಈ ಜಯವು ಕೇರಳವನ್ನು ಭ್ರಷ್ಟಾಚಾರದಿಂದ ಮುಕ್ತಗೊಳಿಸುವ ಬದ್ಧತೆಯ ವಿಜಯವಾಗಿದೆ ಎಂದು ಹೇಳಿದರು.

ಪ್ರಧಾನಿ ಮೋದಿ ಅವರು ಕೇರಳದಲ್ಲಿ ಬಿಜೆಪಿಯ ಆರಂಭವನ್ನು ಗುಜರಾತ್‌ನಲ್ಲಿನ ಪಕ್ಷದ ಆರಂಭಿಕ ಪ್ರಯಾಣದೊಂದಿಗೆ ಹೋಲಿಕೆ ಮಾಡಿದರು. 1987ರ ಮೊದಲು ಬಿಜೆಪಿ ಗುಜರಾತ್‌ನಲ್ಲಿ ಸಣ್ಣ ಪಕ್ಷವಾಗಿದ್ದು, ಅದೇ ವರ್ಷ ಅಹಮದಾಬಾದ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಮೊದಲ ಬಾರಿಗೆ ಜಯ ಸಾಧಿಸಿತು. ಗುಜರಾತ್‌ನಲ್ಲಿ ಒಂದು ನಗರದಿಂದ ಆರಂಭವಾದಂತೆ, ಕೇರಳದಲ್ಲಿಯೂ ಬಿಜೆಪಿಯ ಹೊಸ ರಾಜಕೀಯ ಪ್ರಯಾಣ ಒಂದು ನಗರದಿಂದ ಆರಂಭವಾಗುತ್ತಿದೆ ಎಂದು ಹೇಳಿದರು.

ತಿರುವನಂತಪುರಂ ಇಡೀ ದೇಶಕ್ಕೆ ಮಾದರಿ ನಗರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಪ್ರಧಾನಿ, ಈ ನಗರವನ್ನು ಭಾರತದ ಅತ್ಯುತ್ತಮ ನಗರಗಳಲ್ಲಿ ಒಂದನ್ನಾಗಿ ರೂಪಿಸಲು ತಮ್ಮ ಸಂಪೂರ್ಣ ಬೆಂಬಲವಿದೆ ಎಂದು ಭರವಸೆ ನೀಡಿದರು.

ಇದಕ್ಕೂ ಮೊದಲು, ಕೇರಳ, ತಮಿಳುನಾಡು, ಕರ್ನಾಟಕ, ತೆಲಂಗಾಣ ಮತ್ತು ಆಂಧ್ರಪ್ರದೇಶಗಳ ನಡುವೆ ಪ್ರಾದೇಶಿಕ ರೈಲು ಸಂಪರ್ಕವನ್ನು ಬಲಪಡಿಸುವ ಉದ್ದೇಶದಿಂದ ಮೂರು ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳು ಸೇರಿದಂತೆ ನಾಲ್ಕು ಹೊಸ ರೈಲು ಸೇವೆಗಳಿಗೆ ಪ್ರಧಾನಿ ಮೋದಿ ಹಸಿರು ನಿಶಾನೆ ತೋರಿದರು. ನಾಗರಕೋಯಿಲ್–ಮಂಗಳೂರು, ತಿರುವನಂತಪುರಂ–ತಾಂಬರಂ ಹಾಗೂ ತಿರುವನಂತಪುರಂ–ಚರ್ಲಪಲ್ಲಿ ಮಾರ್ಗಗಳಿಗೆ ಅಮೃತ್ ಭಾರತ್ ಎಕ್ಸ್‌ಪ್ರೆಸ್ ರೈಲುಗಳ ಚಾಲನೆ ನೀಡಲಾಯಿತು.

ನಗರ ಜೀವನೋಪಾಯವನ್ನು ಬಲಪಡಿಸುವ ಪ್ರಯತ್ನಗಳ ಭಾಗವಾಗಿ, ಪ್ರಧಾನಿ ಮೋದಿ ಒಂದು ಲಕ್ಷ ಪಿಎಂ ಸ್ವನಿಧಿ ಕ್ರೆಡಿಟ್ ಕಾರ್ಡ್‌ಗಳನ್ನು ವಿತರಿಸಿದರು. ವಿಜ್ಞಾನ ಮತ್ತು ನಾವೀನ್ಯತೆ ಕ್ಷೇತ್ರದಲ್ಲಿ, ತಿರುವನಂತಪುರಂನಲ್ಲಿ CSIR–NIIST ನಾವೀನ್ಯತೆ, ತಂತ್ರಜ್ಞಾನ ಮತ್ತು ಉದ್ಯಮಶೀಲತಾ ಕೇಂದ್ರಕ್ಕೆ ಅಡಿಪಾಯ ಕೂಡ ಹಾಕಿದರು.

You Might Also Like

ದೆಹಲಿಯಲ್ಲಿ ನಕಲಿ ಮಸಾಲೆ ಪದಾರ್ಥಗಳ ತಯಾರಿಕೆ-ಮೂವರ ಬಂಧನ, 15 ಟನ್ ವಶ

ಕೊಪ್ಪಳ ಗವಿಸಿದ್ದೇಶ್ವರ ಜಾತ್ರೆ ಆರಂಭ, ಹರಿದು ಬಂದ ಭಕ್ತಸಾಗರ

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ 1,090 ಪೊಲೀಸರು-ಯೋಧರಿಗೆ ರಾಷ್ಟ್ರಪತಿ ಪದಕ ಘೋಷಣೆ

ಇರಾನ್ ಸುಪ್ರೀಂ ಲೀಡರ್ ಖಮೇನಿ ಹತ್ಯೆ : ಚಿಕ್ಕಬಳ್ಳಾಪುರದ ಅಲೀಪುರ ಗ್ರಾಮದಲ್ಲಿ ನೀರವ ಮೌನ

ಸಂದರ್ಭ ಬಂದಾಗ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಅರೆಸ್ಟ್ ಮಾಡ್ತೀವಿ : ಸಿಎಂ

TAGGED:PM ModiSabrimala
Share This Article
Facebook Copy Link Print
Previous Article TaTAbaladoa TaTAbaladoa TaTAbaladoa ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಗಮನಸೆಳೆಯಲಿದೆ ಕರ್ನಾಟಕದ ‘ಮಿಲ್ಲೆಟ್ ಟು ಮೈಕ್ರೋಚಿಪ್’ ಸ್ತಬ್ಧಚಿತ್ರ
Next Article Bus Bus Bus ಸಾಲು ಸಾಲು ರಜೆ ಬೆನ್ನಲ್ಲೇ ಜನರ ಸುಲಿಗೆ ಆರಂಭಿಸಿದ ಖಾಸಗಿ ಬಸ್ ಮಾಲೀಕರು, ಪ್ರಯಾಣ ದಿಢೀರ್ ಏರಿಕೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

Trump Trump Trump
ಅಮೆರಿಕಾ-ಇರಾನ್ ಮಾತುಕತೆ : ಇರಾನ್ ಇಂಧನ ತಾಣಗಳ ಮೇಲಿನ ದಾಳಿ ಮುಂದೂಡಿದ ಟ್ರಂಪ್
ವಿದೇಶ-International
March 23, 2026
Samarth Samarth Samarth
ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಮರ್ಥ ಶಾಮನೂರು
ರಾಜ್ಯ-Karnataka
March 23, 2026
Meti Meti Meti
ಬಾಗಲಕೋಟೆ ಉಪಚುನಾವಣೆ : ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ನಾಮಪತ್ರ ಸಲ್ಲಿಕೆ
ರಾಜ್ಯ-Karnataka
March 23, 2026
PM Modi PM Modi PM Modi
ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಇಂಧನದ ದೃಷ್ಟಿಯಿಂದ ಭಾರತ ಸುರಕ್ಷಿತವಾಗಿದೆ : ಪ್ರಧಾನಿ ಮೋದಿ
ರಾಷ್ಟ್ರೀಯ-National
March 23, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up