-ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ
ಹಾಸನ: ಲೈಂಗಿಕ ದೌರ್ಜುನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ನೀಡಿ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ. ಇದೀಗ ನ್ಯಾಯಾಂಗ ಬಂಧನದ ಹಿನ್ನೆಲೆ ಪೊಲೀಸರು ಬೆಂಗಳೂರು ಕೇಂದ್ರ ಕಾರಾಗೃಹ (ಪರಪ್ಪನ ಅಗ್ರಹಾರ)ಕ್ಕೆ (Central Jail) ಕರೆದೊಯ್ಯದಿದ್ದಾರೆ.
ಹಾಸನದಲ್ಲಿ ವೈರಲ್ ಆದ ಅಶ್ಲೀಲ ವಿಡಿಯೋ ಹಾಗೂ ಅತ್ಯಾಚಾರ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಅವರು ಜೈಲು ಪಾಲಾಗಿದ್ದಾರೆ. ಅತ್ಯಾಚಾರ ಆರೋಪ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಎಸ್‌ಐಟಿ ಅಧಿಕಾರಿಗಳು ಇಂದು (ಜೂ.18) ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಪ್ರಜ್ವಲ್ ರೇವಣ್ಣ ಅವರನ್ನು ಮತ್ತೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಇದನ್ನೂ ಓದಿ: ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ – ಫಾರ್ಮ್ ಹೌಸ್ ನೋಡಿಕೊಳ್ಳುತ್ತಿದ್ದ ಮ್ಯಾನೇಜರ್ ಆತ್ಮಹತ್ಯೆ
ನ್ಯಾಯಾಲಯದ ವಿಚಾರಣೆ ವೇಳೆ ನ್ಯಾಯಾದೀಶರ ಎದುರು ಪ್ರಜ್ವಲ್ ರೇವಣ್ಣ ಅಳಲು ತೋಡಿಕೊಂಡಿದ್ದಾರೆ. ನಾನು ಎರಡು ಪ್ರಕರಣದಲ್ಲಿ ಮೆಡಿಕಲ್ ಟೆಸ್ಟ್ ಮಾಡಿಸಿಕೊಂಡಿದ್ದೇನೆ. ಮತ್ತೆ ಅದೇ ಟೆಸ್ಟ್ ಮಾಡಿಸಲು ಹೇಳುತ್ತಾರೆ. ಇದು ತುಂಬಾ ಮುಜುಗರ ಆಗತ್ತೆ ಎಂದು ಅಳಲು ತೋಡಿಕೊಂಡಿದ್ದಾರೆ. ಈಗಾಗಲೇ ಎರಡು ಪ್ರಕರಣದಲ್ಲಿ ಸೇಮ್ ಪರೀಕ್ಷೆ ಆಗಿದೆ. ಇದನ್ನ ಪರಿಶೀಲನೆ ಮಾಡುತ್ತೇನೆ ಎಂದು ನ್ಯಾಯಾದೀಶರು ಹೇಳಿದ್ದಾರೆ.ಇದನ್ನೂ ಓದಿ: ಸೆಲೆಬ್ರಿಟಿ ಅಂತಲ್ಲ, ತಪ್ಪು ಯಾರೇ ಮಾಡಿದ್ರು ತಪ್ಪೇ- ಉಮಾಪತಿ
ಎಸ್‌ಐಟಿ ಅಧಿಕಾರಿಗಳು ಇಲ್ಲಿಯವರೆಗು ಹೊಳೆನರಸೀಪುರ, ಕೆ.ಆರ್.ನಗರ ಪ್ರಕರಣದಲ್ಲಿ ವಿಚಾರಣೆ ನಡೆಸಿದ್ದು, ಇದೀಗ ಮತ್ತೊಂದು ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಕಸ್ಟಡಿ ಪಡೆಯಲು ಸಿದ್ದತೆ ನಡೆಸಿದ್ದಾರೆ. ಇದನ್ನೂ ಓದಿ: ಕಾಡಾನೆ ಬಾವಿಗೆ ಬಿದ್ದು ಸಾವು