ಬೆಂಗಳೂರು, ಏಪ್ರಿಲ್ 9: 2026ನೇ ಸಾಲಿನ ದ್ವಿತೀಯ ಪಿಯುಸಿ (PUC) ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ (KSEAB) ಇಂದು ಅಧಿಕೃತವಾಗಿ ಪ್ರಕಟಿಸಿದೆ. ರಾಜ್ಯದಾದ್ಯಂತ ಲಕ್ಷಾಂತರ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ತಮ್ಮ ಫಲಿತಾಂಶವನ್ನು ಮಂಡಳಿಯ ಅಧಿಕೃತ ವೆಬ್‌ಸೈಟ್ karresults.nic.in ಮೂಲಕ ಪರಿಶೀಲಿಸಬಹುದು.
ಈ ಬಾರಿ ಕಳೆದ ವರ್ಷಕ್ಕಿಂತ ಶೇಕಡಾ 12.50ರಷ್ಟು ಹೆಚ್ಚಳ ಕಂಡುಬಂದಿದ್ದು, ಒಟ್ಟು ಶೇಕಡಾ 86ರಷ್ಟು ಉತ್ತೀರ್ಣ ಪ್ರಮಾಣ ದಾಖಲಾಗಿದೆ. ಇದು ಇತ್ತೀಚಿನ ವರ್ಷಗಳಲ್ಲಿ ಗಮನಾರ್ಹ ಸಾಧನೆ ಎಂದು ಪರಿಗಣಿಸಲಾಗಿದೆ.
ಜಿಲ್ಲಾವಾರು ಫಲಿತಾಂಶದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳು ಅಗ್ರಸ್ಥಾನ ಪಡೆದುಕೊಂಡಿವೆ. ಈ ಜಿಲ್ಲೆಗಳು ಮತ್ತೊಮ್ಮೆ ತಮ್ಮ ಶ್ರೇಷ್ಠತೆಯನ್ನು ತೋರಿಸಿದ್ದು, ಅತ್ಯಧಿಕ ಪಾಸ್ ಪ್ರಮಾಣ ದಾಖಲಿಸಿವೆ. ಬೆಂಗಳೂರು ನಗರ ಹಾಗೂ ಮೈಸೂರು ಜಿಲ್ಲೆಗಳೂ ಉತ್ತಮ ಪ್ರದರ್ಶನ ನೀಡಿವೆ.
ಟಾಪರ್‌ಗಳ ಪಟ್ಟಿಯಲ್ಲಿ ಕಲಾ ವಿಭಾಗದಲ್ಲಿ ಕೊಟ್ಟೂರಿನ ಅರ್ಚನಾ ಮತ್ತು ದಿಶಾ ಅವರು 600ಕ್ಕೆ 598 ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಗಳಿಸಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ಅವರು 600ಕ್ಕೆ 600 ಅಂಕಗಳನ್ನು ಪಡೆದು ರಾಜ್ಯ ಮಟ್ಟದಲ್ಲಿ ಅಗ್ರಸ್ಥಾನ ಪಡೆದು ಗಮನ ಸೆಳೆದಿದ್ದಾರೆ.
ಈ ಬಾರಿ ಪರೀಕ್ಷೆಗಳು ಫೆಬ್ರವರಿ 28ರಿಂದ ಮಾರ್ಚ್ 12ರವರೆಗೆ ರಾಜ್ಯದಾದ್ಯಂತ 1217 ಕೇಂದ್ರಗಳಲ್ಲಿ ನಡೆದವು. ಒಟ್ಟು 5174 ಕಾಲೇಜುಗಳ 7.10 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೊಂದಣಿ ಮಾಡಿಕೊಂಡಿದ್ದರು. ಇವರಲ್ಲಿ ಸೈನ್ಸ್ ವಿಭಾಗದಲ್ಲಿ 2.92 ಲಕ್ಷ, ವಾಣಿಜ್ಯ ವಿಭಾಗದಲ್ಲಿ 2.11 ಲಕ್ಷ ಹಾಗೂ ಕಲಾ ವಿಭಾಗದಲ್ಲಿ 1.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದರು.
ವಿದ್ಯಾರ್ಥಿಗಳು ತಮ್ಮ ಫಲಿತಾಂಶ ಪರಿಶೀಲಿಸಲು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ‘2nd PUC Result 2026’ ಲಿಂಕ್ ಮೇಲೆ ಕ್ಲಿಕ್ ಮಾಡಿ, ನೋಂದಣಿ ಸಂಖ್ಯೆ ಮತ್ತು ವಿಭಾಗವನ್ನು ನಮೂದಿಸಿ ಫಲಿತಾಂಶ ವೀಕ್ಷಿಸಬಹುದು. ನಂತರ ಅಂಕಪಟ್ಟಿಯನ್ನು ಡೌನ್‌ಲೋಡ್ ಮಾಡಿಕೊಂಡು ಪ್ರಿಂಟ್ ತೆಗೆದುಕೊಳ್ಳಬಹುದು.
ಈ ಬಾರಿ ಡಿಜಿಲಾಕರ್‌ನಲ್ಲೂ ಫಲಿತಾಂಶ ಲಭ್ಯವಾಗಿರುವುದು ವಿಶೇಷ. digilocker.gov.in ವೆಬ್‌ಸೈಟ್ ಅಥವಾ DigiLocker ಆ್ಯಪ್ ಮೂಲಕ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ಸುಲಭವಾಗಿ ಪಡೆಯಬಹುದು. ವೆಬ್‌ಸೈಟ್‌ನಲ್ಲಿ ಸರ್ವರ್ ಸಮಸ್ಯೆ ಉಂಟಾದರೆ ಡಿಜಿಲಾಕರ್ ಉತ್ತಮ ಪರ್ಯಾಯವಾಗಲಿದೆ.
ವಿದ್ಯಾರ್ಥಿಗಳ ಸಾಧನೆಗೆ ಶಿಕ್ಷಕರು ಮತ್ತು ಪೋಷಕರು ಸಂತಸ ವ್ಯಕ್ತಪಡಿಸಿದ್ದು, ಮುಂದಿನ ವಿದ್ಯಾಭ್ಯಾಸದಲ್ಲಿ ಇನ್ನಷ್ಟು ಸಾಧನೆ ಮಾಡಲು ಹಾರೈಸಿದ್ದಾರೆ.
ಮುಂದಿನ ವರ್ಷದಿಂದ ಕಾಗದದ ಅಂಕಪಟ್ಟಿ ಇರಲ್ಲ!
ಈ ವರ್ಷ ವಿದ್ಯಾರ್ಥಿಗಳಿಗೆ ಭೌತಿಕ ಅಂಕಪಟ್ಟಿಯ ಪ್ರತಿಯನ್ನು ನೀಡಲು ಸರ್ಕಾರ ಅವಕಾಶ ಕಲ್ಪಿಸಿದೆ. ಆದರೆ, ಮುಂದಿನ ಶೈಕ್ಷಣಿಕ ಸಾಲಿನಿಂದ (2026-27) ಕಾಗದ ರೂಪದ ಭೌತಿಕ ಪ್ರತಿಗಳನ್ನು ವಿತರಿಸುವ ಪದ್ಧತಿಗೆ ಬ್ರೇಕ್ ಹಾಕಲಾಗುತ್ತಿದೆ. ಬದಲಿಗೆ, ವಿದ್ಯಾರ್ಥಿಗಳ ದಾಖಲೆಗಳನ್ನು APAAR (Automated Permanent Academic Account Registry) 28 NAD-DigiLocker ส ಒದಗಿಸಲಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.
‘SMS’ ಮೂಲಕ ಫಲಿತಾಂಶ ರವಾನೆ.!
ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು ಇಂದು (ಸಂಜೆ 6ಕ್ಕೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಫಲಿತಾಂಶವನ್ನು ಅಧಿಕೃತವಾಗಿ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳ ಮೊಬೈಲ್ ಗೆ ಸದ್ಯ ಫಲಿತಾಂಶವನ್ನು ಎಸ್ ಎಂ ಎಸ್ (SMS) ಮಾಡಲಾಗಿದೆ.

