ನವದೆಹಲಿ: ಆಸ್ಪತ್ರೆಗೆ ದಾಖಲಾಗಿರುವ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪ ಪ್ರಧಾನಿ ಎಲ್.ಕೆ ಅಡ್ವಾಣಿ (LK Advani) ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆಯು ತನ್ನ ಹೇಳಿಕೆಯಲ್ಲಿ ದೃಢಪಡಿಸಿದೆ.
96 ವರ್ಷ ವಯಸ್ಸಿನ ಅಡ್ವಾಣಿಯವರ ಆರೋಗ್ಯ ಏಕಾಏಕಿ ಹದಗೆಟ್ಟ ಹಿನ್ನೆಲೆಯಲ್ಲಿ ಬುಧವಾರ ತಡರಾತ್ರಿ ದೆಹಲಿಯ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (AIIMS) ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: ಡೆಂಗ್ಯೂ ನಿಯಂತ್ರಣಕ್ಕೆ ಪಣ ತೊಟ್ಟ ಸರ್ಕಾರ….!ಡೆಂಗ್ಯೂ ನಾಗಲೋಟಕ್ಕೆ ಬ್ರೇಕ್ ಹಾಕಲು ಸರ್ಕಾರ ಸಜ್ಜು…!
ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ. ರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ.
2024ರ ಮಾರ್ಚ್ 30 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನವದೆಹಲಿಯಲ್ಲಿರುವ ಅಡ್ವಾಣಿ ಅವರ ನಿವಾಸಕ್ಕೆ ತೆರಳಿ ಭಾರತ ರತ್ನ ಪ್ರಶಸ್ತಿ ಪ್ರದಾನ ಮಾಡಿದ್ದರು. ಇದನ್ನೂ ಓದಿ: ಬೆಲೆ ಏರಿಕೆ ಬಿಸಿಯಿಂದ ಆರ್ಥಿಕ ಸಂಕಷ್ಟದಲ್ಲಿ ಆಟೋ ಚಾಲಕರು