ಬೆಂಗಳೂರು : ಬಿಬಿಎಂಪಿ ಗುತ್ತಿಗೆದಾರ ಚಲುವರಾಯ ಎಂಬುವವರಿಗೆ ಜಾತಿ ನಿಂದನೆ ಹಾಗೂ ಪ್ರಾಣ ಬೆದರಿಕೆ ಒಡ್ಡಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಬೆಂಗಳೂರು ರಾಜರಾಜೇಶ್ವೇರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ವಿರುದ್ದ ಮಹಿಳೆಯ ಮೇಲೆ ಆತ್ಯಾಚಾರ ನಡೆಸಿದ ಗಂಭೀರ
ಆರೋಪ ಕೇಳಿ ಬಂದಿದೆ.
ಖಾಸಗಿ ರೆಸಾಟ್ರ್ನಲ್ಲಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು ಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದಾರೆ.ರಾಮನಗರ ಜಿಲ್ಲೆ ಕಗ್ಗಲೀಪುರ ಪೊಲೀಸ್ ಠಾಣೆಗೆ ಸಂತ್ರಸ್ಥ ಮಹಿಳೆ ಶಾಸಕ ಮುುನಿರತ್ನ ವಿರುದ್ದ ಆತ್ಯಾಚಾರ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಿಕೊಂಡಿರುವ ಪೊಲೀಸರು ಇದರಲ್ಲಿ ಮುನಿರತ್ನ ಅವರನ್ನು ಮೊದಲ ಆರೋಪಿಯನ್ನಾಗಿಸಿದ್ದಾರೆ.
ಮಹಿಳೆ ನೀಡಿದ ದೂರಿನ ಮೇರೆಗೆ ಕಗ್ಗಲೀಪುರ ಡಿವೈಎಸ್ಪಿ ದಿನಕರ್ ಶೆಟ್ಟಿ ಅವರು, ಐಪಿಸಿ ಸೆಕ್ಷನ್ 354 ಎ (ಲೈಂಗಿಕ ದೌರ್ಜನ್ಯ),354 ಸಿ ( ಮಹಿಳೆಯರ ಇಚ್ಛೆಗೆ ವಿರುದ್ಧವಾಗಿ ಚಿತ್ರೀಕರಣ) 376 ಎನ್ (2) (ಸರ್ಕಾರಿ ಸೇವಕನಿಂದ ಅತ್ಯಾಚಾರ) ,506 ( ಜೀವ ಬೆದರಿಕೆ) , 504 ( ಉದ್ದೇಶಪೂರ್ವಕವಾಗಿ ನಿಂದನೆ)
120(ಬಿ) ಅಪರಾಧಿಕ ಒಳಸಂಚು, ( 149 ) ಕಾನೂನು ಬಾಹಿರ ಸಭೆ, 406 ( ನಂಬಿಕೆ ದ್ರೋಹ) , 384 ( ಸುಲಿಗೆ) 308 ( ಹತ್ಯೆ ಮಾಡಲು ಪ್ರಯತ್ನ, ) ಐಟಿ ಆಕ್ಟ್ 66,66 ಇ ದಾಖಲಿಸಲಾಗಿದೆ. ಇದೇ ಪ್ರಕರಣದಲ್ಲಿ ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂಬವರ ವಿರುದ್ಧ ಎಫ್‍ಐಆರ್ ದಾಖಲಾಗಿದೆ.
ಬುಧವಾರ ರಾತ್ರಿ ಕಗ್ಗಲೀಪುರ ಪೊಲೀಸ್ ಠಾಣೆಗೆ ಹಾಜರಾಗಿ ಸಂತ್ರಸ್ತೆ 2 ಗಂಟೆಗೂ ಹೆಚ್ಚು ಕಾಲ ವಿವರಣೆ ನೀಡಿದ್ದಾರೆ. ಸಂತ್ರಸ್ತೆ ಜೊತೆ ಪೊಲೀಸರು ಸ್ಥಳಮಹಜರು ನಡೆಸಲಿದ್ದಾರೆ. ಸಮಾಜ ಸೇವಕಿಯಾಗಿ ಗುರುತಿಸಿಕೊಂಡಿರುವ, ಬಿಜೆಪಿಯಲ್ಲೂ ಸಕ್ರಿಯವಾಗಿರುವ ತನ್ನ ಮೇಲೆ 2020ರಿಂದ 2022ರವರೆಗೆ ಅತ್ಯಾಚಾರ ನಡೆಸಿ ಹನಿಟ್ರ್ಯಾಪ್ ಗೆ ಬಳಸಿಕೊಂಡಿರುವ ಕುರಿತು ದೂರು ನೀಡಿದ್ದಾರೆ.ಪೊಲೀಸರು ಘಟನೆ ನಡೆದ ಸ್ಥಳಕ್ಕೆ ತೆರಳಿ ಮಹಜರು ನಡೆಸಿದ್ದಾರೆ.
ದೂರಿನಲ್ಲಿ ಏನಿದೆ?
ಕೋವಿಡ್ ಸಂದರ್ಭದಲ್ಲಿ ಇಬ್ಬರ ನಡುವೆ ಆತ್ಮೀಯತೆ ಬೆಳೆದಿತ್ತು. ಆಗ್ಗಾಗೆ ವಿಡಿಯೋ ಕಾಲ್ ಮಾಡಿ ಮಾತನಾಡುತ್ತಿದ್ದರು. ನಗ್ನವಾಗಿ ಇರುವಂತೆ ಕರೆ ಮಾಡಿ ಒತ್ತಾಯಿಸಿದಾಗ ಅದನ್ನು ನಿರಾಕರಿಸಿದ್ದೆ. ಒಮ್ಮೆ ಸ್ಥಳವೊಂದಕ್ಕೆ ಬರಲು ಹೇಳಿದ್ದರು. ನಾನು ಅಲ್ಲಿಗೆ ಹೋದಾಗ ತಬ್ಬಿಕೊಳ್ಳಲು ಮುಂದಾಗಿದ್ದರು.ಅದಕ್ಕೆ ಆಕ್ಷೇಪಿಸಿದಾಗ ರಾಜಕೀಯಕ್ಕೆ ಬರಬೇಕಾದರೆ ಇವೆಲ್ಲಾ ಕಾಮನ್ ಎಂದು ಹೇಳಿದ್ದರು. ಬಳಿಕ ಅತ್ಯಾಚಾರವೆಸಗಿದ್ದು, ಈ ವಿಷಯವನ್ನು ಯಾರಿಗಾದರೂ ಹೇಳಿದರೆ ಸಿಸಿಟಿವಿ ಕ್ಯಾಮರಾದಲ್ಲಿ ರೆಕಾರ್ಡ್ ಆಗಿರುವ ವಿಡಿಯೋವನ್ನು ಎಡಿಟ್ ಮಾಡಿ ಹಂಚುತ್ತೇನೆ ಎಂದು ಹೆದರಿಸಿದ್ದರು. ವಿಡಿಯೋ ಇಟ್ಟುಕೊಂಡು ಹಲವು ಬಾರಿ ಮುನಿರತ್ನ ಆತ್ಯಾಚಾರವೆಸಗಿರುವುದಾಗಿ ಮಹಿಳೆ ದೂರಿನಲ್ಲಿ ಆರೋಪಿಸಿದ್ದಾರೆ.