ಬೆಂಗಳೂರು: ಬಿಜೆಪಿ (BJP) ಹಿರಿಯ ನಾಯಕ ಮತ್ತು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದ ದೂರುದಾರೆ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಮೃತ ಯುವತಿ ಯಡಿಯೂರಪ್ಪ ವಿರುದ್ಧ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಮಾಡಿ ಇತ್ತೀಚೆಗೆ ದೂರು ನೀಡಿದ್ದರು. ಅದರಂತೆ, ಯಡಿಯೂರಪ್ಪ ವಿರುದ್ಧ ದೂರು ದಾಖಲಿಸಿಕೊಂಡಿದ್ದ ಪೊಲೀಸರು ಎಫ್‌ಐಆರ್ (FIR) ದಾಖಲಿಸಿದ್ದರು.
ಕಳೆದ ಆರು ವರ್ಷಗಳಿಂದ ದೂರುದರೆ ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇದೀಗ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮುಂದುವರಿದ ರೇವಣ್ಣರ ಟೇಂಪಲ್ ರನ್; ಧರ್ಮಸ್ಥಳದ ಮಂಜುನಾಥನಿಗೆ ವಿಶೇಷ ಪೂಜೆ
ಚುನಾವಣೆ ಹೊಸ್ತಿಲಲ್ಲೇ ಬಂದಿತ್ತು ಬಿಎಸ್ವೈ ವಿರುದ್ಧ ಆರೋಪ
ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ, ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಯಡಿಯೂರಪ್ಪ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು. ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಯಡಿಯೂರಪ್ಪ ವಿರುದ್ಧ ಪೋಕ್ಸೋ ಹಾಗೂ 354 (A) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಇದು ಕೆಲವು ದಿನಗಳ ಮಟ್ಟಿಗೆ ರಾಜಕೀಯವಾಗಿಯೂ ಸದ್ದು ಮಾಡಿತ್ತು. ಯಡಿಯೂರಪ್ಪ ಅವರ ಬಳಿ ಸಹಾಯ ಕೇಳಲು ಹೋದ್ದಾಗ ತನ್ನ ಮಗಳಿಗೆ ಕಿರುಕುಳ ನೀಡಿದ್ದರು ಎಂದು ಸಂತ್ರಸ್ತೆಯು ದೂರಿನಲ್ಲಿ ಉಲ್ಲೇಖಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿಗಳು, ರಾಜಕಾರಣಿಗಳು, ಉದ್ಯಮಿಗಳು ಸೇರಿದಂತೆ ಒಟ್ಟು 53 ಮಂದಿ ವಿರುದ್ಧ ಸದಾಶಿವನಗರ ಠಾಣೆಗೆ ದೂರು ನೀಡಲಾಗಿತ್ತು.ಇದನ್ನೂ ಓದಿ: ಹೃತಿಕ್ ರೋಷನ್ ಸಿನಿಮಾದಲ್ಲಿ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ
ಪ್ರಕರಣ ಸಂಬಂಧ ಪ್ರತಿಕ್ರಿಯಿಸಿದ್ದ ಯಡಿಯೂರಪ್ಪ, ನ್ಯಾಯ ಕೊಡಿಸಿ ಎಂದು ತಾಯಿ-ಮಗಳು ಹಲವು ಸಲ ನನ್ನ ಬಳಿ ಬಂದಿದ್ದರು. ಅನ್ಯಾಯ ಆಗಿದೆ ಎಂದು ನನ್ನ ಬಳಿ ಬಂದಿದ್ದರು. ನ್ಯಾಯ ಕೊಡಿಸಿ ಎಂದು ಮನವಿ ಮಾಡಿದ್ದರು. ಅದಾದ ಮೇಲೆ ನನ್ನ ವಿರುದ್ಧ ಏನೇನೋ ಆರೋಪ ಮಾಡಿದರು. ಬಳಿಕ ಅವರನ್ನು ಪೊಲೀಸ್ ಕಮಿಷನರ್ ಬಳಿ ಕಳಿಸಿಕೊಟ್ಟಿದ್ದೆ ಎಂದು ಹೇಳಿದ್ದರು.ನಂತರ ಈ ವಿಷಯದ ಬಗ್ಗೆ ಯಾವುದೇ ಸುದ್ದಿ ಇರಲಿಲ್ಲ. ಇದನ್ನೂ ಓದಿ: ಪೋರ್ಶೆ ಕಾರು ಅಪಘಾತ ಪ್ರಕರಣದಲ್ಲಿ ಇಬ್ಬರು ವೈದ್ಯರ ಬಂಧನ

