ಬೆಂಗಳೂರು: ಹೊಳೆನರಸೀಪುರ (HoleNarsipura) ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ ರೇವಣ್ಣc(HD.Revanna) ಅವರಿಗೆ ಜಾಮೀನು (Jail) ಅರ್ಜಿ ಕುರಿತು ಇಂದು ನಿರ್ಧಾರವಾಗಲಿದೆ.
ಮ್ಯಾಜಿಸ್ಟ್ರೇಟ್ 42 ರ ನ್ಯಾಯಾಧೀಶರು ಮುಖ್ಯ ಅರ್ಜಿಯ ತೀರ್ಪು ಪ್ರಕಟಿಸಲಿದ್ದಾರೆ. ಪ್ರಕರಣ ಸಂಬಂಧ ಜಾಮೀನು ಅರ್ಜಿ ವಿಚಾರಣೆಯ ಸಂದರ್ಭದಲ್ಲಿ ಇಬ್ಬರು ಎಸ್ ಪಿ ಪಿಗಳು ರೇವಣ್ಣಗೆ ಜಾಮೀನು ನೀಡದಂತೆ ಪ್ರಬಲ ವಾದ ಮಂಡಿಸಿದ್ದರು. ಎಸ್‍ಪಿಪಿಗಳ ವಾದಕ್ಕೆ ರೇವಣ್ಣ ಪರ ವಕೀಲ ಸಿ ವಿ ನಾಗೇಶ್ ಅವರು ಪ್ರಬಲ ಪ್ರತಿವಾದ ಸಲ್ಲಿಸಿದ್ದರು. ಇದನ್ನೂ ಓದಿ: ಲೋಕಸಭೆ ಚುವಾವಣೆ 2024: ಇಂದು 5 ನೇ ಹಂತದ ಮತದಾನ- 8 ರಾಜ್ಯಗಳ 49 ಕ್ಷೇತ್ರಗಳಲ್ಲಿ ವೋಟಿಂಗ್
ಎರಡೂ ಕಡೆಯ ವಾದ ಪ್ರತಿವಾದ ಆಲಿಸಿದ್ದ ನ್ಯಾಯಾಧೀಶರು ಇಂದಿಗೆ ಆದೇಶ ಕಾಯ್ದಿರಿಸಿದ್ದರು. ಸದ್ಯ ಮಧ್ಯಂತರ ಜಾಮೀನಿನ ಮೇಲಿರುವ ರೇವಣ್ಣಗೆ ಇಂದು ಜಾಮೀನು ಸಿಗುತ್ತಾ ಅಥವಾ ಮತ್ತೆ ಜೈಲು ಸೇರುತ್ತಾರಾ ಎಂಬದನ್ನು ಕಾದು ನೋಡಬೇಕಿದೆ. ಮಾಡಿದೆ. ಇದನ್ನೂ ಓದಿ: ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ – ಪೊಲೀಸರಿಂದ ಬಿಗಿ ಭದ್ರತೆ

