ಸ್ಯಾಂಡಲ್ ವುಡ್ ತಾರೆಯರು ಯಕ್ಷಗಾನ ರಂಗದಲ್ಲಿ ತಮ್ಮ ಛಾಪು ಮೂಡಿಸುವ ಎರಡು ವಿಶೇಷ ಪ್ರಯತ್ನಗಳು ಸದ್ಯ ಕರಾವಳಿ ಜಿಲ್ಲೆಗಳಲ್ಲಿ ಬಹಳ ಚರ್ಚೆಯಲ್ಲಿದೆ. ಅದೇನೆಂದರೆ..ದೂರದ ಅಮೆರಿಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್, ತಮ್ಮ ಅನಾರೋಗ್ಯದ ನಡುವೆಯೂ ವೀರ ಚಂದ್ರಹಾಸ ಎಂಬ ಯಕ್ಷಗಾನ ಆಧಾರಿತ ಸಿನಿಮಾದಲ್ಲಿ ಬಣ್ಣ ಹಚ್ಚಿರುವುದು ಎಲ್ಲರ ಹುಬ್ಬೆರುವಂತೆ ಮಾಡಿದೆ.
ಇತ್ತೀಚಿಗಷ್ಟೇ ಚಿತ್ರದ ಪೋಸ್ಟರ್ ನಲ್ಲಿ, ಯಕ್ಷಗಾನದ ಸುಂದರ ವೇಷ ಧರಿಸಿರುವ ಶಿವಣ್ಣನ ಭಾವಚಿತ್ರ ಎಲ್ಲೆಡೆ ವೈರಲ್ ಆಗುತ್ತಿದೆ. ಯಕ್ಷಗಾನ ವೇಷ ಭೂಷಣಗಳಲ್ಲೇ ಮೊದಲ ಬಾರಿಗೆ ಮೂಡಿ ಬರುತ್ತಿರುವ ರವಿ ಬಸ್ರೂರು ನಿರ್ದೇಶನದ ವೀರ ಚಂದ್ರಹಾಸ ಚಿತ್ರದಲ್ಲಿ, ಶಿವಣ್ಣ ನಟಿಸುತ್ತಿರುವುದು ಗಮನ ಸೆಳೆದಿದೆ.

