ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರುಗಳು ಕಬಿನಿ ಜಲಾಶಯಗಳಿಗೆ ಭೇಟಿ ನೀಡಿದ್ದರು. ಈ ವೇಳೆ ಸ್ಥಳೀಯ ಕಾಡಿನ ಮಕ್ಕಳು ಶಿವರಾಜ್ ಕುಮಾರ್ ಹಾಗೂ ಗೀತಾ ಶಿವರಾಜ್ ಕುಮಾರ್ ಅವರಿಗೆ ಹಸ್ತಲಾಘವ ನೀಡಿ ಅವರನ್ನು ಸ್ವಾಗತಿಸಿದರು. ಸ್ಥಳೀಯ ಅರಣ್ಯ ಅಧಿಕಾರಿಗಳು, ಮುಖಂಡರು ಸಹ ಹಾಜರಿದ್ದರು ದಂಪತಿಗಳಿಗೆ ಹೂಗುಚ್ಛ ನೀಡಿ ಸ್ವಾಗತಿಸಿದರು. ಜಲಾಶಯ ನೋಡಿದ ಶಿವರಾಜ್ ಕುಮಾರ್ ಮತ್ತು ಗೀತಾ ಶಿವರಾಜ್ ಕುಮಾರ್ ಅವರುಗಳು ಡ್ಯಾಮ್ ಮೇಲೆ ನಿಂತು ಸೆಲ್ಫಿ ತೆಗೆದುಕೊಂಡರು.
1986ರಲ್ಲಿ ‘ಆನಂದ್’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಶಿವಣ್ಣ ಎಂಟ್ರಿ ಕೊಟ್ಟರು. ಸಿನಿ ಜರ್ನಿಯಲ್ಲಿ 40 ವರ್ಷ ಪೂರೈಸಿದ್ದಾರೆ. ಕನ್ನಡದ ಜನಮಾನಸದಲ್ಲಿ ಹ್ಯಾಟ್ರಿಕ್ ಹೀರೋ, ಸೆಂಚುರಿ ಸ್ಟಾರ್ ಆಗಿ ಉಳಿದಿದ್ದಾರೆ.
ಶಿವರಾಜ್‌ಕುಮಾರ್ ಸದ್ಯ 125 ಸಿನಿಮಾಗಳನ್ನು ಪೂರೈಸಿದ್ದಾರೆ. ಸದ್ಯ ಅವರ ಕೈಯಲ್ಲಿ ಐದಕ್ಕೂ ಹೆಚ್ಚು ಪ್ರಾಜೆಕ್ಟ್‌ಗಳಿವೆ. ಕೆಲ ದಿನಗಳ ಹಿಂದಷ್ಟೇ ಸಿನಿಪಯಣದಲ್ಲಿ 40 ವರ್ಷದ ಪೂರೈಸಿದ ಸಂಭ್ರಮವನ್ನು ಶಿವಣ್ಣ ಮಿಂದೆದ್ದರು.
- ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
- ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
- ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
- ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
- ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ

