By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: 4 ಲಕ್ಷದ 49 ಸಾವಿರ ಕೋಟಿ ಗಾತ್ರದ ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > 4 ಲಕ್ಷದ 49 ಸಾವಿರ ಕೋಟಿ ಗಾತ್ರದ ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ-KarnatakaLatest

4 ಲಕ್ಷದ 49 ಸಾವಿರ ಕೋಟಿ ಗಾತ್ರದ ದಾಖಲೆಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ

Siddaramaiah presents record budget of Rs 4.49 lakh crore

Published March 6, 2026
Share
3 Min Read
Siddaramaiah Budget 3 Siddaramaiah Budget 3 Siddaramaiah Budget 3
SHARE

ಬೆಂಗಳೂರು, ಮಾ.6: ಮುಖ್ಯಮಂತ್ರಿ Siddaramaiah ಅವರು ಇಂದು ವಿಧಾನಸಭೆಯಲ್ಲಿ ತಮ್ಮ ದಾಖಲೆ 17ನೇ ಬಜೆಟ್‌ನ್ನು ಮಂಡಿಸಿದ್ದು, 2026–27ನೇ ಸಾಲಿನ ರಾಜ್ಯ ಬಜೆಟ್ ಗಾತ್ರವನ್ನು 4.49 ಲಕ್ಷ ಕೋಟಿ ರೂ. ಎಂದು ಘೋಷಿಸಿದರು. ಮೂಲಭೂತ ಸೌಕರ್ಯ, ಕೃಷಿ, ಶಿಕ್ಷಣ ಹಾಗೂ ಮಹಿಳಾ ಕಲ್ಯಾಣಕ್ಕೆ ಹೆಚ್ಚಿನ ಆದ್ಯತೆ ನೀಡಿರುವುದು ಈ ಬಜೆಟ್‌ನ ಪ್ರಮುಖ ಲಕ್ಷಣವಾಗಿದೆ.

ಸರ್ಕಾರಿ ಇಲಾಖೆಗಳಲ್ಲಿರುವ 56,432 ಖಾಲಿ ಹುದ್ದೆಗಳ ಭರ್ತಿ ಮಾಡಲು ಸರ್ಕಾರ ನಿರ್ಧರಿಸಿದ್ದು, ಸರ್ಕಾರಿ ಉದ್ಯೋಗಗಳಿಗೆ ಗರಿಷ್ಠ ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ ನೀಡಲಾಗಿದೆ. ಬೆಂಗಳೂರಿನ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗಿದ್ದು, ಮೂಲಸೌಕರ್ಯ ಅಭಿವೃದ್ಧಿಗೆ 8600 ಕೋಟಿ ರೂ. ಮೀಸಲಿಡಲಾಗಿದೆ.

ನಗರದ ರಸ್ತೆ ಅಭಿವೃದ್ಧಿಗಾಗಿ 158 ಕಿ.ಮೀ ವೈಟ್ ಟಾಪಿಂಗ್ ಕಾಮಗಾರಿಗೆ 1700 ಕೋಟಿ ರೂ., ಮುಖ್ಯ ಹಾಗೂ ಉಪಮುಖ್ಯ ರಸ್ತೆಗಳ ಅಭಿವೃದ್ಧಿಗೆ 1936 ಕೋಟಿ ರೂ. ಮೀಸಲಾಗಿದೆ. ಸಿಲ್ಕ್ ಬೋರ್ಡ್ ಜಂಕ್ಷನ್‌ನಿಂದ ಕೆ.ಆರ್.ಪುರಂವರೆಗೆ ಹೊರ ವರ್ತುಲ ರಸ್ತೆ ಅಭಿವೃದ್ಧಿಗೆ 450 ಕೋಟಿ ರೂ. ಯೋಜನೆ ಘೋಷಿಸಲಾಗಿದೆ. ಜೊತೆಗೆ ಬೆಂಗಳೂರು ನಗರದಲ್ಲಿ 150 ಸ್ಕೈವಾಕ್‌ಗಳ ನಿರ್ಮಾಣ ಮತ್ತು ಕೆರೆಗಳ ಅಭಿವೃದ್ಧಿಗೆ 273 ಕೋಟಿ ರೂ. ಮೀಸಲಾಗಿದೆ.

ಮಹಿಳಾ ಕಲ್ಯಾಣ ಯೋಜನೆಗಳಿಗೆ ಸರ್ಕಾರ ವಿಶೇಷ ಗಮನ ನೀಡಿದ್ದು, ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಮೀಸಲಾಗಿದೆ. ರಾಜ್ಯದ 1,39,844 ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮವಸ್ತ್ರ ನೀಡಲಾಗುತ್ತದೆ. ಮಹಿಳೆಯರು ಮತ್ತು ಮಕ್ಕಳ ಸಂಕಷ್ಟಗಳಿಗೆ ಪ್ರತಿ ಜಿಲ್ಲೆಯಲ್ಲಿ ಅಕ್ಕ ಪಡೆ ರಚಿಸುವುದಾಗಿ ಘೋಷಿಸಲಾಗಿದೆ.

ಕೃಷಿ ಕ್ಷೇತ್ರಕ್ಕೂ ಹೆಚ್ಚಿನ ಆದ್ಯತೆ ನೀಡಲಾಗಿದ್ದು, 83 ಲಕ್ಷ ರೈತರಿಗೆ ಶೂನ್ಯ ಬಡ್ಡಿದರದಲ್ಲಿ 70,000 ಕೋಟಿ ರೂ. ಸಾಲ, 51 ಲಕ್ಷ ರೈತರಿಗೆ 6213 ಕೋಟಿ ರೂ. ಬೆಳೆ ವಿಮೆ ಪರಿಹಾರ, ಹಾಗೂ 40 ಲಕ್ಷ ರೈತರಿಗೆ 468 ಕೋಟಿ ರೂ. ಬಿತ್ತನೆ ಬೀಜ ಸಹಾಯಧನ ನೀಡಲಾಗುತ್ತದೆ. ಜೊತೆಗೆ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆಗೆ 100 ಕೋಟಿ ರೂ. ಮೀಸಲಾಗಿದೆ.

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ 2500 ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಘೋಷಣೆ ಮಾಡಲಾಗಿದೆ. ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ಸರ್ಕಾರ ನಿರ್ಧರಿಸಿದೆ.

ವಿಭಾಗವಾರು ಅನುದಾನದಲ್ಲಿ ಶಿಕ್ಷಣಕ್ಕೆ 47,224 ಕೋಟಿ ರೂ., ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ 34,929 ಕೋಟಿ ರೂ., ಇಂಧನ ಇಲಾಖೆಗೆ 29,947 ಕೋಟಿ ರೂ., ಗ್ರಾಮೀಣಾಭಿವೃದ್ಧಿಗೆ 26,559 ಕೋಟಿ ರೂ., ನೀರಾವರಿಗೆ 22,436 ಕೋಟಿ ರೂ., ಹಾಗೂ ಆರೋಗ್ಯಕ್ಕೆ 17,818 ಕೋಟಿ ರೂ. ಮೀಸಲಾಗಿದೆ.

ರಾಜ್ಯದ ಆರ್ಥಿಕ ಸ್ಥಿತಿಗೆ ಸಂಬಂಧಿಸಿದಂತೆ, 2025–26ನೇ ಸಾಲಿನಲ್ಲಿ ರಾಜ್ಯದ ಜಿಎಸ್‌ಡಿಪಿ 8.1 ಶೇಕಡಾ ನೈಜ ಬೆಳವಣಿಗೆ ದಾಖಲಿಸಿದೆ ಎಂದು ಸರ್ಕಾರ ತಿಳಿಸಿದೆ. ಮುಂದಿನ ವರ್ಷಕ್ಕೆ 15,000 ಕೋಟಿ ರೂ. ರಾಜಸ್ವ ಕೊರತೆ ಉಂಟಾಗಬಹುದು ಎಂದು ಅಂದಾಜಿಸಲಾಗಿದೆ.

ಒಟ್ಟಾರೆ, ಮೂಲಸೌಕರ್ಯ ಅಭಿವೃದ್ಧಿ, ಕೃಷಿ ಬೆಂಬಲ, ಮಹಿಳಾ ಕಲ್ಯಾಣ ಮತ್ತು ಉದ್ಯೋಗ ಸೃಷ್ಟಿಗೆ ಒತ್ತು ನೀಡಿರುವ ಸಿದ್ದರಾಮಯ್ಯ ಅವರ 17ನೇ ಬಜೆಟ್ ರಾಜ್ಯದ ಅಭಿವೃದ್ಧಿಗೆ ದಿಕ್ಕು ನೀಡಲಿದೆ ಎಂದು ಸರ್ಕಾರ ಹೇಳಿದೆ.

ರಾಜ್ಯ ಬಜೆಟ್‌ನಲ್ಲಿ ಕ್ಷೇತ್ರವಾರು ಅನುದಾನ ಹಂಚಿಕೆ

ಬೆಂಗಳೂರು: 2026–27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ವಿವಿಧ ಇಲಾಖೆಗಳು ಮತ್ತು ಕ್ಷೇತ್ರಗಳಿಗೆ ಸರ್ಕಾರ ಮಹತ್ತರ ಪ್ರಮಾಣದಲ್ಲಿ ಅನುದಾನ ಹಂಚಿಕೆ ಮಾಡಿದೆ. ಮೂಲಸೌಕರ್ಯ ಅಭಿವೃದ್ಧಿ, ಕೃಷಿ, ಶಿಕ್ಷಣ, ಆರೋಗ್ಯ ಹಾಗೂ ಸಾಮಾಜಿಕ ಕಲ್ಯಾಣ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ.
ಬಜೆಟ್‌ನಲ್ಲಿ ಪ್ರಮುಖವಾಗಿ ವಿವಿಧ ಇಲಾಖೆಗೆ ನೀಡಿರುವ ಅನುದಾನ ಹೀಗಿದೆ:
ಪಶುಸಂಗೋಪನೆ – 4,084 ಕೋಟಿ ರೂ.
ಕೃಷಿ ಮತ್ತು ತೋಟಗಾರಿಕೆ – 8,373 ಕೋಟಿ ರೂ.
ಆಹಾರ ಮತ್ತು ನಾಗರಿಕ ಸರಬರಾಜು – 7,942 ಕೋಟಿ ರೂ.
ಲೋಕೋಪಯೋಗಿ ಇಲಾಖೆ – 11,424 ಕೋಟಿ ರೂ.
ಸಮಾಜ ಕಲ್ಯಾಣ ಇಲಾಖೆ – 18,612 ಕೋಟಿ ರೂ.
ಕಂದಾಯ ಇಲಾಖೆ – 19,845 ಕೋಟಿ ರೂ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ – 17,818 ಕೋಟಿ ರೂ.
ಶಿಕ್ಷಣ ಇಲಾಖೆ – 47,224 ಕೋಟಿ ರೂ.
ಮಹಿಳಾ ಮತ್ತು ಮಕ್ಕಳ ಕಲ್ಯಾಣ – 34,929 ಕೋಟಿ ರೂ.
ಇಂಧನ ಇಲಾಖೆ – 29,947 ಕೋಟಿ ರೂ.
ಗ್ರಾಮೀಣಾಭಿವೃದ್ಧಿ ಇಲಾಖೆ – 26,559 ಕೋಟಿ ರೂ.
ನೀರಾವರಿ ಇಲಾಖೆ – 22,436 ಕೋಟಿ ರೂ.
ನಗರಾಭಿವೃದ್ಧಿ ಮತ್ತು ವಸತಿ ಇಲಾಖೆ – 22,203 ಕೋಟಿ ರೂ.
ಒಳಾಡಳಿತ ಮತ್ತು ಬಂದರು ಇಲಾಖೆ – 23,100 ಕೋಟಿ ರೂ.
ಇತರೆ ವೆಚ್ಚ – 1,72,757 ಕೋಟಿ ರೂ.

ರಾಜ್ಯದ ಅಭಿವೃದ್ಧಿ ಹಾಗೂ ಜನಸೇವೆಗೆ ಹೆಚ್ಚಿನ ಒತ್ತು ನೀಡುವ ಉದ್ದೇಶದಿಂದ ವಿವಿಧ ಪ್ರಮುಖ ಕ್ಷೇತ್ರಗಳಿಗೆ ಈ ಬಜೆಟ್‌ನಲ್ಲಿ ದೊಡ್ಡ ಮೊತ್ತದ ಅನುದಾನವನ್ನು ಸರ್ಕಾರ ಮೀಸಲಿಟ್ಟಿದೆ.

You Might Also Like

ಗೃಹ ಸಚಿವಾಲಯದ ಗುಪ್ತಚರ ಬ್ಯೂರೋದಲ್ಲಿ 3,717 ಹುದ್ದೆಗಳಿಗೆ ನೇಮಕಾತಿಗೆ ಅರ್ಜಿ ಆಹ್ವಾನ

ಉದಯಪುರದ ಐಷಾರಾಮಿ ರೆಸಾರ್ಟ್‌ನಲ್ಲಿ ರಶ್ಮಿಕಾ ಮಂದಣ್ಣ–ವಿಜಯ್ ದೇವರಕೊಂಡ ಸಪ್ತಪದಿ

ಮಂಡ್ಯದಲ್ಲಿ ಜೆಡಿಎಸ್ ಫ್ಲೆಕ್ಸ್‌ಗಳಲ್ಲಿ ರೇವಣ್ಣ ಔಟ್

ಪಿಡಿಎನ್ಎ ಭ್ರಷ್ಟಾಚಾರ ನಿಗ್ರಹದಳ ಕಚೇರಿ ಉದ್ಘಾಟನೆ

ಚಿಕ್ಕಪೇಟೆ ಮಾಜಿ ಶಾಸಕ ಆರ್‌.ವಿ. ದೇವರಾಜ್‌ (67) ನಿಧನ

TAGGED:Siddaramaiah
Share This Article
Facebook Copy Link Print
Previous Article fffff fffff fffff ಖಾಲಿ ಚೊಂಬು ಹಿಡಿದು ಸಿದ್ದರಾಮಯ್ಯನವರ ಬಜೆಟ್ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

fffff fffff fffff
ಖಾಲಿ ಚೊಂಬು ಹಿಡಿದು ಸಿದ್ದರಾಮಯ್ಯನವರ ಬಜೆಟ್ ವಿರುದ್ಧ ಬಿಜೆಪಿ ನಾಯಕರ ಆಕ್ರೋಶ
ರಾಜ್ಯ-Karnataka
March 6, 2026
R Ashok
ಸಿದ್ದರಾಮಯ್ಯನವರ ಬಜೆಟ್ ನಿಂದ ರಾಜ್ಯಕ್ಕೆ ಮುಂದಿನ ದಿನಗಳಲ್ಲಿ ಕಾದಿದೆ “ಮಾರಿಹಬ್ಬ” : R. Ashoka
ರಾಜ್ಯ-Karnataka
March 6, 2026
Vijayendra
ಸಿದ್ದರಾಮಯ್ಯನವರ ಬಜೆಟ್ ಕುರಿತು ಬಿವೈ ವಿಜಯೇಂದ್ರ ರಿಯಾಕ್ಷನ್ ಏನು..?
ರಾಜ್ಯ-Karnataka
March 6, 2026
Sunil Kumar Sunil Kumar Sunil Kumar
ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್ ಕರಾವಳಿ ಜಿಲ್ಲೆಗಳ ವಿರೋಧಿಯಾಗಿದೆ : ಸುನಿಲ್ ಕುಮಾರ್
ರಾಜ್ಯ-Karnataka
March 6, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up