ಭ್ರಷ್ಟಾಚಾರದ ಆರೋಪ ಹೊತ್ತಿರುವ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ ವೈ ವಿಜಯೇಂದ್ರ ಅವರು ಅಸಮಾಧಾನ ಹೊರ ಹಾಕಿದ್ದಾರೆ . ಈ ಹಿಂದೆ ವಸತಿ ಯೋಜನೆ ಮನೆಗಳನ್ನು ಹಂಚಲು ಲಂಚ ಸ್ವೀಕರಿಸಲಾಗುತ್ತಿದೆ ಎಂದು ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಮಾಡಿರುವ ಆರೋಪ ರಾಜ್ಯದಲ್ಲಿ ಸಂಚಲನ ಸೃಷ್ಟಿಸಿತ್ತು ಅದಾದ ನಂತರ ಶಾಸಕ ರಾಜು ಕಾಗೆ ಅವರು ನಮ್ಮ ಸರ್ಕಾರದಲ್ಲಿ ಯಾವುದೇ ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ.
ಆಡಳಿತ ವ್ಯವಸ್ಥೆ ಸಂಪೂರ್ಣ ಹಾಳಾಗಿದೆ ಅನುದಾನ ನೀಡಿ 2 ವರ್ಷ ಕಳೆದರೂ ವರ್ಕ್ ಆರ್ಡರ್ ಇಲ್ಲ. ಇದರಿಂದ ನನ್ನ ಮನಸ್ಸಿಗೆ ಸಾಕಷ್ಟು ನೋವಾಗಿ ರಾಜೀನಾಮೆ ನೀಡುವ ಪರಿಸ್ಥಿತಿಗೆ ಬಂದಿದ್ದೇನೆ ಎಂದು ಹೇಳಿದ್ದರು .. ಇವೆಲ್ಲ ಬೆಳವಣೆಯ ನಂತರ ಬಿಜೆಪಿ ರಾಜ್ಯಾಧ್ಯಕ್ಷರು ಬಿ ವೈ ವಿಜಯೇಂದ್ರ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ .
ಹೌದು ಸಿದ್ದರಾಮಯ್ಯ ಅವರ ಇಲಾಖೆ ಸೇರಿದಂತೆ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಯಲ್ಲೂ ಭ್ರಷ್ಟಾಚಾರವಿದೆ. ಭ್ರಷ್ಟಾಚಾರ ನಡೆಸಲೆಂದು ಇಲಾಖೆಯಲ್ಲಿ ಕೌಂಟರ್‌ಗಳನ್ನು ತೆರೆಯಲಾಗಿದೆ. ಸಿದ್ದರಾಮಯ್ಯನವರಿಗೆ ರಾಜ್ಯದ ಮೇಲೆ ಸ್ವಲ್ಪನಾದ್ರು ಕಾಳಜಿ ಇದ್ರೆ ಸಿಎಂ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಇಲ್ಲವಾದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಬೇಕು ಇದೀಗ ಪಟ್ಟು ಹಿಡಿದ್ದಿದ್ದಾರೆ.

