ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಶವಗಳನ್ನು ಹೂತಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರ ನೇಮಿಸಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು ತನಿಖೆ ಆರಂಭಿಸಿದೆ. ಮಂಗಳೂರಿನ ಮಲ್ಲಿಕಟ್ಟೆಯ ಐಬಿಯಲ್ಲಿ ಎಸ್ಐಟಿಗಾಗಿ ಎರಡು ಕೊಠಡಿ ಮೀಸಲಿಡಲಾಗಿದೆ.
ಶವಗಳನ್ನು ಹೂತಿಟ್ಟ ಬಗ್ಗೆ ದೂರು ನೀಡಿರುವ ವ್ಯಕ್ತಿ ಶನಿವಾರ ವಕೀಲರ ಜೊತೆಗೆ ಮಲ್ಲಿಕಟ್ಟೆಯ ಎಸ್‌ಐಟಿ ಕಚೇರಿಗೆ ಆಗಮಿಸಿದ್ದಾರೆ. ಎಸ್ಐಟಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ.
ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಜು. 25ರಂದು ರಾತ್ರಿ ಮಂಗಳೂರಿಗೆ ಆಗಮಿಸಿದ್ದರು. ತಂಡದ ಅಧಿಕಾರಿ ಜಿತೇಂದ್ರ ದಯಾಮ ಅವರು ರಾತ್ರಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಭೇಟಿ ನೀಡಿ ಪ್ರಕರಣದ ದಾಖಲೆಗಳನ್ನು ಪಡೆದಿದ್ದಾರೆ.
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷ ಪತ್ರದಲ್ಲಿ ಪ್ರಸ್ತಾಪಿಸಿರುವ ಅಂಶಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆ, ಧರ್ಮಸ್ಥಳ ಪೊಲೀಸ್ ಠಾಣೆ ಮೊ.ಸಂ. 39/2025 ಕಲಂ 211(ಎ), ಬಿ.ಎನ್.ಎಸ್. ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಗ್ರ ತನಿಖೆಯನ್ನು ಕೈಗೊಳ್ಳಲು ಒಂದು ವಿಶೇಷ ತನಿಖಾ ತಂಡ (Special Investigation Team)ವನ್ನು ರಚಿಸುವುದು ಸೂಕ್ತವೆಂದು ಸರ್ಕಾರವು ತೀರ್ಮಾನಿಸಿ ಸರ್ಕಾರ ಎಸ್ಐಟಿ ರಚಿಸಿ ಆದೇಶಿಸಿದೆ.
- ಕನಕಪುರ ರಸ್ತೆ ಬಳಿ ಗ್ರಾಮದಲ್ಲಿ 10 ಅಡಿ ಹೆಬ್ಬಾವು ಪ್ರತ್ಯಕ್ಷ
- ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
- ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
- ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
- ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ

