ಪ್ರಯಾಗ್ ರಾಜ್ : ಕರ್ನಾಟಕ ವಿಧಾನಸಭೆಯ ಸ್ಪೀಕರ್ ಯುಟಿ ಖಾದರ್ ಅವರು ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಭೇಟಿ ನೀಡಿ, ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿದರು. ನಾಗಾ ಸಾಧುಗಳು ಮತ್ತು ಅಘೋರಿಗಳನ್ನು ಭೇಟಿ ಮಾಡಿ, ಭಾರತದ ವೈವಿಧ್ಯಮಯ ಸಂಸ್ಕೃತಿಯನ್ನು ಕಣ್ತುಂಬಿಕೊಂಡರು.
ಮುಸ್ಲಿಂ ಆಗಿದ್ದರೂ ನಾಗ ಸಾಧುಗಳು ಮತ್ತು ಅಘೋರಿಗಳೊಂದಿಗೆ ಆಧ್ಯಾತ್ಮಿಕತೆ ಬಗ್ಗೆ ಆತ್ಮೀಯವಾಗಿ ಮಾತನಾಡಿದ್ದು, ಅನುಭವಗಳನ್ನು ಹಂಚಿಕೊಂಡಿದ್ದಾರೆ. ಹಿಂದಿಯಲ್ಲಿ ನಿರರ್ಗಳವಾಗಿ ಮಾತನಾಡುವ ಖಾದರ್ ಸಾಧುಗಳೊಂದಿಗೆ ಬೆರೆತು, ವಿಶ್ವದ ಅತಿದೊಡ್ಡ ಧಾರ್ಮಿಕ ಕೂಟಗಳಲ್ಲಿ ಒಂದಾದ ಮಹಾ ಕುಂಭ ಮೇಳದಲ್ಲಿ ಅದ್ಬುತ ಕ್ಷಣಗಳನ್ನು ಕಳೆದಿದ್ದಾರೆ. ದಕ್ಷಿಣ ಕನ್ನಡದ ಆಪ್ತ ಸ್ನೇಹಿತರ ಜೊತೆಗೂಡಿ ಕುಂಭಮೇಳದ ಮಹಾನುಭವವನ್ನು ಪಡೆದಿದ್ದಾರೆ.
ಎಲ್ಲಾರಲ್ಲೂ ಬೆರೆಯುವ ಮತ್ತು ಪರಸ್ಪರ ಧರ್ಮಗಳನ್ನು ಗೌರವಿಸುವ ಖಾದರ್ ಅವರ ನಿದರ್ಶನ ಇದೇ ಮೊದಲಲ್ಲ. ಮಂಗಳೂರಿನಲ್ಲಿ ಹಿಂದೂ ದೇವಾಲಯಗಳು, ಕ್ರಿಶ್ಚಿಯನ್ ಚರ್ಚ್‌ಗಳು ಮತ್ತು ಜೈನ ಆರಾಧನಾ ಸ್ಥಳಗಳಿಗೆ ಭೇಟಿ ನೀಡುವ ಮೂಲಕ ಹೆಸರುವಾಸಿಯಾಗಿದ್ದಾರೆ.