By using this site, you agree to the Privacy Policy and Terms of Use.
Accept
Sampoorna Vaani NewsSampoorna Vaani NewsSampoorna Vaani News
  • Home
  • Latest
  • ರಾಜ್ಯ
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
  • ಕ್ರೀಡೆ
    • ಕ್ರಿಕೆಟ್
    • ಇತರೆ
  • ಕೃಷಿ-Agriculture
  • ಆಹಾರ
    • ಸಸ್ಯಾಹಾರಿ
    • ಮಾಂಸಾಹಾರಿ
  • ಕ್ರೈಂ
  • Court
  • epaper
  • Web Stories
  • Videos
Reading: ಅನಾಥಾಶ್ರಮದ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲು ಚಿಂತನೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌
Share
Font ResizerAa
Font ResizerAa
Sampoorna Vaani NewsSampoorna Vaani News
  • Home
  • Latest
  • ರಾಜ್ಯ
  • ರಾಜಕೀಯ
  • ದೇಶ
  • ವಿದೇಶ
  • ಆರೋಗ್ಯ
  • ಚುನಾವಣೆ
  • ವಾಣಿಜ್ಯ
  • ಜ್ಯೋತಿಷ್ಯ
  • ತಂತ್ರಜ್ಞಾನ
  • ಸಿನಿಮಾ
  • ಕ್ರೀಡೆ
  • ಕೃಷಿ-Agriculture
  • ಆಹಾರ
  • ಕ್ರೈಂ
  • Court
  • epaper
  • Web Stories
  • Videos
  • ಜಿಲ್ಲೆಗಳು
    • ಬೆಂಗಳೂರು-Bengaluru
    • ಬೆಂಗಳೂರು ಗ್ರಾಮಾಂತರ
    • ಬಳ್ಳಾರಿ-Ballary
    • ಬೆಳಗಾವಿ-Belagavi
    • ಬಾಗಲಕೋಟೆ
    • ಬೀದರ್​-Bidar
    • ಚಾಮರಾಜನಗರ-Chamarajanagara
    • ಚಿಕ್ಕಬಳ್ಳಾಪುರ-Chikkaballapura
    • ಚಿಕ್ಕಮಗಳೂರು-Chikkamagaluru
    • ಚಿತ್ರದುರ್ಗ-Chitradurga
    • ದಕ್ಷಿಣ ಕನ್ನಡ-Dakshina Kannada
    • ದಾವಣಗೆರೆ-Davanagere
    • ಧಾರವಾಡ-Dharwad
    • ಗದಗ-Gadag
    • ಹಾಸನ-Hassan
    • ಹಾವೇರಿ-Haveri
    • ಕಲಬುರಗಿ-Kalaburagi
    • ಕೊಡಗು-Kodagu
    • ಕೋಲಾರ-Kolara
    • ಕೊಪ್ಪಳ-Koppala
    • ಮಂಡ್ಯ-Mandya
    • ಮೈಸೂರು-Mysuru
    • ರಾಯಚೂರು
    • ರಾಮನಗರ-Ramanagara
    • ಶಿವಮೊಗ್ಗ-Shivamogga
    • ತುಮಕೂರು-Tumakuru
    • ಉಡುಪಿ-Udupi
    • ಉತ್ತರ ಕನ್ನಡ-Uttara Kannada
    • ವಿಜಯಪುರ-Vijayapura
    • ಯಾದಗಿರಿ
  • Entertainment
    • ಸ್ಯಾಂಡಲ್​ವುಡ್-Sandalwood
    • ಬಾಲಿವುಡ್​ – Bollywood
    • ಹಾಲಿವುಡ್-Hollywood
    • ಕಿರುತೆರೆ
    • ಚಿತ್ರ ವಿಮರ್ಶೆ-Movie Review
Have an existing account? Sign In
Follow US
© 2024 All Rights Reserved.
Sampoorna Vaani News > Blog > ರಾಜ್ಯ-Karnataka > ಅನಾಥಾಶ್ರಮದ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲು ಚಿಂತನೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌
ರಾಜ್ಯ-KarnatakaLatest

ಅನಾಥಾಶ್ರಮದ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲು ಚಿಂತನೆ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌

special concession to children in orphanages: Minister Lakshmi Hebbalkar

Published August 20, 2025
Share
2 Min Read
SHARE

ಬೆಂಗಳೂರು : ಅನಾಥಾಶ್ರಮಗಳಲ್ಲಿ ಇರುವ ಮಕ್ಕಳಿಗೆ ಪದವಿಪೂರ್ವ ಶಿಕ್ಷಣದವರೆಗೂ ದಾಖಲಾತಿ ಬಗ್ಗೆ ಯಾವುದೇ ಸಮಸ್ಯೆ ಇರುವುದಿಲ್ಲ. ಉನ್ನತ ಶಿಕ್ಷಣಕ್ಕೆ ದಾಖಲಾಗುವ ಸಂದರ್ಭದಲ್ಲಿ ಸಾಮಾನ್ಯ ವರ್ಗದ ಇತರ ಮಕ್ಕಳಂತೆ ಈ ಮಕ್ಕಳನ್ನು ದಾಖಲಾತಿ ಮಾಡಲಾಗುತ್ತಿದ್ದು, ಮುಂಬರುವ ದಿನಗಳಲ್ಲಿ ಇಂಥ ಮಕ್ಕಳಿಗೆ ವಿಶೇಷ ರಿಯಾಯಿತಿ ನೀಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.

ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕರ್ನಾಟಕದಲ್ಲಿ 108 ಸರ್ಕಾರಿ, 54 ಅನುದಾನಿತ ಮತ್ತು 550 ಖಾಸಗಿ ಒಟ್ಟು 712 ಮಕ್ಕಳ ಪಾಲನಾ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, 712 ಸಂಸ್ಥೆಗಳಲ್ಲಿ ಒಟ್ಟು ಮಕ್ಕಳ ಸಾಮರ್ಥ್ಯ 38,975 ಇದ್ದು, ಈ ಪೈಕಿ 17048 (7874 ಹೆಣ್ಣು, 9175 ಗಂಡು) ಮಕ್ಕಳು ದಾಖಲಾಗಿರುತ್ತಾರೆ ಎಂದು ಮಾಹಿತಿ ನೀಡಿದರು.

ಮಕ್ಕಳ ಪಾಲನಾ ಸಂಸ್ಥೆಗಳಿಗೆ ಅನಾಥ, ನಿರ್ಗತಿಕ ಹಾಗೂ ಒಪ್ಪಿಸಲ್ಪಟ್ಟ ಮಕ್ಕಳು, ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ದಾಖಲಾಗುತ್ತಿದ್ದು, ಕೆಲವು ಮಕ್ಕಳಿಗೆ ಸಂಬಂಧಿಸಿದಂತೆ ತಮ್ಮ ಕೌಟುಂಬಿಕ ಹಿನ್ನೆಲೆ ಹಾಗೂ ಜಾತಿಯ ಮಾಹಿತಿ ಇರುವುದಿಲ್ಲ. ಜಿಲ್ಲಾ ಶಸ್ತ್ರ ಚಿಕಿತ್ಸಕರ ವೈದ್ಯಕೀಯ ತಪಾಸಣೆ ಮತ್ತು ವರದಿಯಂತೆ ಮಗುವಿನ ವಯಸ್ಸನ್ನು ದೃಢೀಕರಿಸಲಾಗುತ್ತದೆ ಎಂದರು.

ಪದವಿಪೂರ್ವ ಶಿಕ್ಷಣದವರೆಗೂ ಶಿಕ್ಷಣ ಮುಂದುವರಿಸಲು ಯಾವುದೇ ಸಮಸ್ಯೆಗಳು ಕಂಡು ಬರುವುದಿಲ್ಲ. ಆದರೆ, ಪದವಿಪೂರ್ವ ಶಿಕ್ಷಣದ ಬಳಿಕ ವೃತ್ತಿಪರ ಕೋರ್ಸ್‌ಗಳಿಗೆ ಸೇರುವ ಸಂದರ್ಭದಲ್ಲಿ ತಮ್ಮ ಜಾತಿ ಹಿನ್ನಲೆಯ ಮಾಹಿತಿ ಲಭ್ಯವಿಲ್ಲದೇ ಇರುವ ಮಕ್ಕಳನ್ನು ಸಾಮಾನ್ಯ ವಿಭಾಗದಲ್ಲಿ ದಾಖಲು ಮಾಡಲಾಗುತ್ತಿದೆ. ಜತೆಗೆ ಅರ್ಹತೆ ಇರುವ ಎಲ್ಲಾ ಮಕ್ಕಳಿಗೂ ಉನ್ನತ ಶಿಕ್ಷಣವನ್ನು ಒದಗಿಸಲು ಸರ್ಕಾರ ಬದ್ಧವಾಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದರು.

ಜಾತಿ ಹಿನ್ನೆಲೆ ಇಲ್ಲದೆ ಇರುವ ಮಕ್ಕಳಿಗೆ ಸರ್ಕಾರದಿಂದ ಹೆಚ್ಚಿನ ಸೌಲಭ್ಯಗಳನ್ನು ಒದಗಿಸುವ ದೃಷ್ಟಿಯಿಂದ ಪರಿಶಿಷ್ಠ ಜಾತಿ ಅಥವಾ ಪರಿಶಿಷ್ಠ ಪಂಗಡ ವರ್ಗಗಳಿಗೆ ಸೇರಿಸಬೇಕು ಅಂತ ಸಮಾಜ ಕಲ್ಯಾಣ ಇಲಾಖೆಗೆ ಕೋರಲಾಗಿತ್ತು. ಆದರೆ, ಈ ವರ್ಗಕ್ಕೆ ಸೇರಿಸಲು ಸಾಧ್ಯವಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆಯಿಂದ ಉತ್ತರ ಬಂದಿದೆ. ಜಯಪ್ರಕಾಶ್‌ ಹೆಗ್ಡೆ ಅವರು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿದ್ದ ವೇಳೆ ಈ ಮಕ್ಕಳನ್ನು ಕ್ಯಾಟಗೆರಿ-1ಕ್ಕೆ ಸೇರಿಸಬೇಕು ಎಂದು ಶಿಫಾರಸ್ಸು ಮಾಡಿದ್ದರು. ಈ ಮಕ್ಕಳ ಹಿತದೃಷ್ಟಿಯಿಂದ ಸಮಾಜ ಕಲ್ಯಾಣ ಇಲಾಖೆ ಸಚಿವರೊಂದಿಗೆ ಚರ್ಚೆ ನಡೆಸಿ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು. ‌

ಮಕ್ಕಳ ಪಾಲನಾ ಸಂಸ್ಥೆಯಿಂದ ಬಿಡುಗಡೆಯಾಗಿರುವ ಮಕ್ಕಳು ಉನ್ನತ ಹುದ್ದೆಗಳನ್ನು ಅಲಂಕರಿಸಿದ್ದು, ವಿವಿಧ ಸರ್ಕಾರಿ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಜತೆಗೆ ಸ್ವ-ಉದ್ಯೋಗ, ಖಾಸಗಿ ಉದ್ಯೋಗವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.

You Might Also Like

ಇಸ್ರೇಲ್ ಮೇಲೆ ಯಾವುದೇ ಕ್ಷಣದಲ್ಲಿ ಇರಾನ್​ ದಾಳಿ ಸಾಧ್ಯತೆ

ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿಯಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್‌

2040ರ ವೇಳೆಗೆ ಚಂದ್ರನ ಮೇಲೆ ನಡೆದಾಡಲಿದ್ದಾರೆ ಭಾರತದ ಗಗನಯಾತ್ರಿ : ಜಿತೇಂದ್ರ ಸಿಂಗ್

ಶೀಘ್ರದಲ್ಲೇ ಕೆಪಿಟಿಸಿಎಲ್‌ನಲ್ಲಿ ಖಾಲಿ ಇರುವ 35 ಸಾವಿರ ಹುದ್ದೆಗಳ ಭರ್ತಿ : ಸಿಎಂ

ವಿಮಾನ ನಿಲ್ದಾಣ ಆಯ್ತು ಇದೀಗ ಮೆಂಟಲ್ ಆಸ್ಪತ್ರೆಗೆ ಬಾಂಬ್​ ಬೆದರಿಕೆ

TAGGED:Lakshmi Hebbalkar
Share This Article
Facebook Copy Link Print
Previous Article ಅಗ್ನಿ-5 ಕ್ಷಿಪಣಿ ಪರೀಕ್ಷೆ ಯಶಸ್ವಿ, ಭಾರತದ ರಕ್ಷಣೆಗೆ ಭೀಮ ಬಲ
Next Article Nikki Haley ‘ಭಾರತವನ್ನು ಶತ್ರುರಾಷ್ಟ್ರದಂತೆ ನಡೆಸಿಕೊಳ್ಳಬೇಡಿ : ಟ್ರಂಪ್‌ಗೆ ನಿಕ್ಕಿ ಹ್ಯಾಲಿ ಸಲಹೆ
Leave a Comment Leave a Comment

Leave a Reply Cancel reply

Your email address will not be published. Required fields are marked *

Stay Connected

235.3kFollowersLike
69.1kFollowersFollow
11.6kFollowersPin
56.4kFollowersFollow
136kSubscribersSubscribe
4.4kFollowersFollow
Join Whatsapp
Ad image
Ad imageAd image

Latest News

ಮನರೇಗಾ ಮರುಸ್ಥಾಪಿಸುವ ಬಗ್ಗೆ ವಿಧಾನಸಭೆಯಲ್ಲಿ ಸರ್ಕಾರ ಮಹತ್ವದ ನಿರ್ಣಯ
ರಾಜ್ಯ-Karnataka
February 3, 2026
‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ರಾಜ್ಯ ಸರ್ಕಾರದಿಂದ ತೆರಿಗೆ ವಿನಾಯಿತಿ
ಸ್ಯಾಂಡಲ್​ವುಡ್-Sandalwood
February 3, 2026
ನಸೀರ್‌ಗೆ ಸಹಿಸಲಾಗದ ಸಂಕಟ: ಸಿ.ಟಿ ರವಿ ಖಡಕ್ ಕೌಂಟರ್..!
ರಾಜ್ಯ-Karnataka
February 3, 2026
‘ಸರಳ ಸುಬ್ಬರಾವ್‌’ ಸಿನಿಮಾ ಟ್ರೇಲರ್‌ ಲಾಂಚ್‌
ಸ್ಯಾಂಡಲ್​ವುಡ್-Sandalwood
February 3, 2026
https://sampoornavaaninews.in/wp-content/uploads/2024/10/WhatsApp-Video-2024-10-04-at-00.03.25_2025f30f.mp4
Follow US
Copyright © 2024 SampoornaVaaniNews. All Rights Reserved | Designed and Developed By Technoy Global Solutions
Welcome Back!

Sign in to your account

Username or Email Address
Password

Lost your password?

Not a member? Sign Up