ಹಾವೇರಿ: ಸ್ಪಿರಿಟ್ ತುಂಬಿದ ಲಾರಿಯ ಟೈಯರ್ ಬ್ಲಾಸ್ಟ್ (Lorry Spirit Tire Blast), ಲಾರಿಗೆ ಚಕ್ರಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಭಾರೀ ಅನಾಹುತ ತಪ್ಪಿದ ಘಟನೆ ಹಾವೇರಿ (Haveri) ಜಿಲ್ಲೆಯಲ್ಲಿ ನಡೆದಿದೆ.
ಕೂಡಲೇ ಸ್ಥಳಕ್ಕೆ ಆಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರ ಕಾರ್ಯಾಚರಣೆಯಿಂದ ದೊಡ್ಡ ದುರಂತವೊಂದು ತಪ್ಪಿದ್ದು, ಘಟನೆ ಹಾವೇರಿಯ ತೋಟದಯಲ್ಲಾಪುರ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ-48 (National Highway 48) ರಲ್ಲಿ ನಡೆದಿದೆ. ಬೆಳಗಾವಿಯಿಂದ ಬೆಂಗಳೂರು ಕಡೆ ಸ್ಪಿರಿಟ್ ತುಂಬಿದ ಲಾರಿ ಹೊರಟ್ಟಿತ್ತು. ಸುಮಾರು 24 ಲಕ್ಷ ರೂ. ಮೌಲ್ಯದ ವೈಟ್ ಸ್ಪಿರಿಟ್ ಲಾರಿಯಲ್ಲಿ ತುಂಬಿತ್ತು. ಇದನ್ನೂ ಓದಿ: ಮದ್ಯ ಹಗರಣ: ಅರವಿಂದ್ ಕೇಜ್ರಿವಾಲ್ ಜಾಮೀನಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ತಡೆ
ಲಾರಿಯ ಟೈಯರ್ ಹೀಟ್ ಆಗಿದ್ದರಿಂದ ಚಕ್ರಕ್ಕೆ ಬೆಂಕಿ ಹೊತ್ತಿಕೊಂಡಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸಮಯಪ್ರಜ್ಞೆಯಿಂದ ಮುಂದಾಗುವ ದುರಂತ ತಪ್ಪಿಸಿದ್ದಾರೆ. ಹೆದ್ದಾರಿಯಲ್ಲಿ ಸ್ವಲ್ಪ ದೂರದಲ್ಲೇ ಎಲ್ಲಾ ವಾಹನಗಳನ್ನು ನಿಲ್ಲಿಸಿ, ಅಗ್ನಿಶಾಮಕ ದಳದ ಸಿಬ್ಬಂದಿ ಪೊಲೀಸರು ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಇದನ್ನೂ ಓದಿ: ಅಂತಾರಾಷ್ಟ್ರೀಯ ಯೋಗ ದಿನ: ಭಾರತ-ಪಾಕಿಸ್ತಾನ ಗಡಿಯಲ್ಲಿ ಯೋಗ ಪ್ರದರ್ಶನ
ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಶಿಮ್ಲಾದಲ್ಲಿ ಬಸ್ ಅಪಘಾತ- 4 ಮಂದಿ ಸಾವು, ಮೂವರಿಗೆ ಗಂಭೀರ ಗಾಯ

