ಮೈಸೂರು: ಇಂದು ನಿಧಾನರಾಗಿರುವ ಶ್ರೀನಿವಾಸ್ ಪ್ರಸಾದ್ (Srinivas Prasad) ಅವರ ಅಂತ್ಯಕ್ರಿಯೆ ಮಂಗಳವಾರ ನಡೆಸಲು ಕುಟುಂಬಸ್ಥರು ನಿರ್ಧಾರ ಮಾಡಲಾಗಿದೆ ಎಂದು ಅವರ ಪುತ್ರಿ (Daughter) ಪ್ರತಿಮಾ ಪ್ರಸಾದ್ ಹೇಳಿದ್ದಾರೆ .
ಪ್ರತಿಮಾ ಅವರು ನಗರದಲ್ಲಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿ, ಇಂದು ಮಧ್ಯಾಹ್ನ 1 ಗಂಟೆ ತನಕ ಮನೆಯಲ್ಲಿ ಅಂತಿಮ ನಮನ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಬಳಿಕ ಅಶೋಕಪುರಂನ ಎನ್ ಟಿ ಎಂ ಶಾಲೆ ಅವರಣದಲ್ಲಿ ಅಂತಿಮ ನಮನಕ್ಕೆ ವ್ಯವಸ್ಥೆ ಕಲ್ಪಿಸಿಲಾಗುತ್ತಿದೆ ಎಂದರು. ಇದನ್ನೂ ಓದಿ: ಬಿಜೆಪಿ ಸಂಸದ ವಿ.ಶ್ರೀನಿವಾಸ್ ನಿಧಾನ
ಇಂದು ರಾತ್ರಿ ಅಂತಿಮ ನಮನಕ್ಕೆ ಅವಕಾಶ ನೀಡಲಾಗುತ್ತಿದೆ. ನಾಳೇ ಬೆಳಗ್ಗೆ 10 ಗಂಟೆಗೆ ಅಶೋಕಪುರಂನಲ್ಲಿ ಮೆರವಣೆಗೆಯ ಬಳಿಕ ಮಧ್ಯಾಹ್ನ 1 ಗಂಟೆಗೆ ಅಂತ್ಯಕ್ರಿಯೆ ನಡೆಸುವ ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಛತೀಸ್‌ಗಢದಲ್ಲಿ ಭೀಕರ ಅಪಘಾತ – 23 ಮಂದಿಗೆ ಗಾಯ , 9 ಮಂದಿ ಸಾವು

